Homeಮುಖಪುಟ‘ನನಗೇನು ಕೋವಿಡ್ ಲಸಿಕೆಯ ಅಗತ್ಯವಿಲ್ಲ’: ಹರಿಯಾಣ ಆರೋಗ್ಯ ಸಚಿವನ ವಿವರಣೆ!

‘ನನಗೇನು ಕೋವಿಡ್ ಲಸಿಕೆಯ ಅಗತ್ಯವಿಲ್ಲ’: ಹರಿಯಾಣ ಆರೋಗ್ಯ ಸಚಿವನ ವಿವರಣೆ!

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಎರಡನೆ ಹಂತದ ಲಸಿಕಾ ಅಭಿಯಾನದ ಮೊದಲ ಫಲಾನುಭವಿಯಾಗಿ ಇವತ್ತು ಚುಚ್ಚುಮದ್ದು ಪಡೆಯುತ್ತಿದ್ದಂತೆಯೇ, ಹರಿಯಾಣದ ಬಿಜೆಪಿ ಸರ್ಕಾರದ ಆರೋಗ್ಯ ಸಚಿವ ಅನಿಲ್ ವಿಜ್ ತಮಗೆ ಲಸಿಕೆಯ ಅಗತ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

 

ಇಂದು ಬೆಳಿಗ್ಗೆ ದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ಸಂಸ್ಥೆ (ಏಮ್ಸ್)ನಲ್ಲಿ ಭಾರತ್ ಬಯೋಟೆಕ್‌ನ ಕೊವಾಕ್ಸಿನ್ ಲಸಿಕೆಯನ್ನು ಪಿಎಂ ಮೋದಿ ಸ್ವೀಕರಿಸಿದರು ಮತ್ತು ಅರ್ಹರೆಲ್ಲರೂ ಲಸಿಕೆ ಹಾಕಿಸಿಕೊಂಡು ಭಾರತವನ್ನು ಕೋವಿಡ್ ಮುಕ್ತವಾಗಿಸಲು ಒತ್ತಾಯಿಸಿದರು.
ಅದೇ ಸಮಯದಲ್ಲಿ, ಹರಿಯಾಣ ಆರೋಗ್ಯ ಸಚಿವರು ಕೊವಿಡ್-ಶಾಟ್ ತೆಗೆದುಕೊಳ್ಳುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

“ಇಂದು ಸಾಮಾನ್ಯ ಜನರಿಗೆ ಕೊರೋನಾ ಲಸಿಕೆ ಕಾರ್ಯಕ್ರಮ ಪ್ರಾರಂಭವಾಗುತ್ತಿದೆ. ಈಗ ಯಾವುದೇ ಹಿಂಜರಿಕೆ ಇರಬಾರದು. ಕೋವಿಡ್ ಸೋಂಕು ತಗುಲಿ ಆರಾಮಾದ ನಂತರ ನನಗೆ ಡೋಸೇಜ್ ಸ್ವೀಕರಿಸಲು ಸಾಧ್ಯವಾಗುವುದಿಲ್ಲ, ಏಕೆಂದರೆ, ನನ್ನ ಪ್ರತಿಕಾಯಗಳ ಸಂಖ್ಯೆ 300 ಇದ್ದು, ಇದು ಸಿಕ್ಕಾಪಟ್ಟೆ ಅನಿಸುತ್ತದೆ. ಬಹುಶಃ ನಾನು ಪಡೆದಿದ್ದ ಪ್ರಯೋಗ ಲಸಿಕೆ ( ಟ್ರಯಲ್ ವ್ಯಾಕ್ಸಿನ್) ಯಲ್ಲಿಯೇ ಈ ಪ್ರತಿರೋಧಕತೆ ಲಭಿಸಿದೆ. ನನಗೆ ಈಗ ಲಸಿಕೆ ಅಗತ್ಯವಿಲ್ಲ”ಎಂದು ಅನಿಲ್ ವಿಜ್ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ವಿಜ್ ಅವರನ್ನು ಡಿಸೆಂಬರ್‌ನಲ್ಲಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನವೆಂಬರ್‌ನಲ್ಲಿ ಅವರಿಗೆ ಕೊವಾಕ್ಸಿನ್ ಲಸಿಕೆ ನೀಡಲಾಯಿತು, ಅದರ ಮೂರನೇ ಹಂತದ ಪ್ರಯೋಗದ ಭಾಗವಾಗಿ ಅವರು ಸ್ವಯಂಪ್ರೇರಿತ ಕಾರ್ಯಕರ್ತರಾಗಿದ್ದರು.

ವ್ಯಾಕ್ಸಿನೇಷನ್ ನಂತರ ಅವರು ಕೋವಿಡ್ ಸೋಂಕಿಗೆ ತುತ್ತಾದರು ಎಂಬುದು ಚರ್ಚೆಗೆ ಕಾರಣವಾಯಿತು, ಆದರೂ ಅವರು ಕೇವಲ ಒಂದು ಡೋಸ್ ಮಾತ್ರ ತೆಗೆದುಕೊಂಡಿದ್ದಾರೆ ಮತ್ತು ಎರಡನೆಯದು ಬಾಕಿ ಇದೆ ಎಂದು ಸ್ಪಷ್ಟಪಡಿಸಲಾಗಿತ್ತು.

ಭಾರತವು 11 ದಶಲಕ್ಷಕ್ಕೂ ಹೆಚ್ಚು ಕೊರೋನವೈರಸ್ ಸೋಂಕುಗಳು ಮತ್ತು 157,000 ಕ್ಕೂ ಹೆಚ್ಚು ಸಾವುಗಳನ್ನು ಕಂಡಿದೆ.

ಜನವರಿ 16 ರಂದು ಪ್ರಾರಂಭವಾದ ವ್ಯಾಕ್ಸಿನೇಷನ್ ಅಭಿಯಾನದಲ್ಲಿ ಸುಮಾರು 11 ಮಿಲಿಯನ್ ಜನರು ಒಂದು ಅಥವಾ ಎರಡು ಡೋಸ್ ಪಡೆದಿದ್ದಾರೆ. ಆಗಸ್ಟ್ ವೇಳೆಗೆ ಸರ್ಕಾರದ ಗುರಿ 300 ಮಿಲಿಯನ್ ಜನರಿಗೆ ಲಸಿಕೆ ನೀಡುವುದಾಗಿದೆ.

ಹರಿಯಾಣದಲ್ಲಿ ಭಾನುವಾರದ ಹೊತ್ತಿಗೆ ಒಟ್ಟು 2.4 ಲಕ್ಷ ಪ್ರಕರಣಗಳಿವೆ. ರಾಜ್ಯದಲ್ಲಿ 3,000 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ.


ಇದನ್ನೂ ಓದಿ: ದೆಹಲಿ ಹಿಂಸಾಚಾರದ ಅಸಲಿ ಪಿತೂರಿಗಾರರು ಯಾರು? ದೆಹಲಿ ಪೊಲೀಸ್ ನೋಡಲೊಲ್ಲದ ಭೀಕರ ಸತ್ಯಗಳನ್ನು ತೆರೆದಿಟ್ಟ ದಿ ವೈರ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...