Homeಕರ್ನಾಟಕ'ಪೆನ್ ಡ್ರೈವ್ ಕೊಟ್ಟಿದ್ದು ನಾನೆ..'; ಸ್ಪಷ್ಟನೆ ನೀಡಿದ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ

‘ಪೆನ್ ಡ್ರೈವ್ ಕೊಟ್ಟಿದ್ದು ನಾನೆ..’; ಸ್ಪಷ್ಟನೆ ನೀಡಿದ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ

- Advertisement -
- Advertisement -

ದೇಶದಾದ್ಯಂತ ಭಾರೀ ಸುದ್ದಿಯಾಗಿರುವ, ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಠಿಸಿರುವ ಜೆಡಿಎಸ್ ಸಂದರಾದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದಲ್ಲಿ ಇಂದು ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ರೇವಣ್ಣ ಮೊಮ್ಮಗನ ಲೈಂಗಿಕ ದೌರ್ಜನ್ಯದ ಬಗ್ಗೆ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಎಂಬುವವರು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಇಷ್ಟು ದಿನ ವಿಡಿಯೋ ಕೊಟ್ಟವರು ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದುದ್ದು, ಈ ಕುರಿತು ಇಂದು ವಿಡಿಯೋ ಬಿಡುಗಡೆ ಮಾಡಿರುವ ಕಾರ್ತಿಕ್, “ಬಿಜೆಪಿ ಮುಖಂಡ ದೇವರಾಜೇಗೌಡಗೆ ಪೆನ್ ಡ್ರೈವ್ ಕೊಟ್ಟಿದ್ದು ನಾನೇ; ಇವರಿಗೆ ಬಿಟ್ಟು ಬೇರೆ ಯಾರಿಗೂ ಪೆನ್ ಡ್ರೈವ್ ಕೊಟ್ಟಿಲ್ಲ” ಎಂದು ಹೇಳಿದ್ದಾರೆ.

ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಬಿಜೆಪಿ ನಾಯಕ, “ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರಿಗಗೂ ಪೆನ್‌ಡ್ರೈವ್ ಕೊಟ್ಟಿದ್ದಾರೆ” ಎಂದು ಹೇಳಿದ್ದರು. ಇದೀಗ ಕಾರ್ತಿಕ್ ಸ್ಪಷ್ಟನೆ ನೀಡಿದ್ದು, “ಕಾಂಗ್ರೆಸ್ ನಾಯಕರಿಗೆ ಪ್ರಜ್ವಲ್ ವಿಡಿಯೋ ಕೊಟ್ಟಿಲ್ಲ; ಡಿಕೆ ಶಿವಕುಮಾರ್, ಡಿಕೆ ಸುರೇಶ್‌ಗೆ ಪೆನ್ ಡ್ರೈವ್ ಕೊಟ್ಟಿದ್ದಾಗಿ ಹೇಳಿದ್ದಾರೆ. ಆದರೆ ನಾನು ಕೊಟ್ಟಿಲ್ಲ. ದೇವೇರಾಜೇಗೌಡರನ್ನ ನಂಬಿ ವಿಡಿಯೋ ನೀಡಿದ್ದೆ. ಆದರೆ, ಅದನ್ನ ಸ್ವಾರ್ಥಕ್ಕೆ ಬಳಸಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಕಳೆದ 15 ವರ್ಷದಿಂದ ಕಾರು ಚಾಲಕನಾಗಿ ಕೆಲಸ ಮಾಡಿದ್ದೆ. ಒಂದು ವರ್ಷದಿಂದ ನಾನು ಕೆಲಸ ಬಿಟ್ಟಿದ್ದೇನೆ ನನ್ನ ಮೇಲೆ ದೌರ್ಜನ್ಯ ಮಡಿ ನಮ್ಮ ಜಮೀನು ಬರೆಸಿಕೊಂಡಿದ್ರು; ಹೆಂಡತಿ ಮೇಲೆ ಹಲ್ಲೆ ಮಾಡಿದ್ರು. ಹೀಗಾಗಿ ಕೆಲಸ ಬಿಟ್ಟಿದ್ದೆ. ಅವರ ವಿರುದ್ದ ಕೇಸ್ ಹಾಕಿ ಹೋರಾಟಕ್ಕೆ ಸಿದ್ದನಾಗಿದ್ದೆ, ದೇವರಾಜೇಗೌಡರ ವಿಚಾರ ಗೊತ್ತಾಗಿ ಅವರ ಬಳಿ ಹೇಳಿಕೊಂಡಿದ್ದೆ. ಅವರು ನನಗಾದ ಅನ್ಯಾಯಕ್ಕೆ ನ್ಯಾಯ ಕೊಡಿಸುವ ಭರವಸೆ ನೀಡಿದ್ದರು. ಆದರೆ, ಕೇಸ್ ತೆಗೆದುಕೊಳ್ಳಲಿಲ್ಲ. ನಂತರ ನಾನು ಬೇರೆ ವಕೀಲರ ಮೂಲಕ ದೂರು ದಾಖಲಿಸಿದ್ದೇನೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ; ದೇವೇಗೌಡರ ಮೊಮ್ಮಗನ ಲೈಂಗಿಕ ಹಗರಣದಲ್ಲಿ ಕಾಂಗ್ರೆಸ್ ನಿಷ್ಕ್ರಿಯತೆ: ಅಮಿತ್ ಶಾ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

0
ಗಾಝಾದ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ (ಐಸಿಸಿ) ಕೋರ್ಟ್‌ನಿಂದ ಬಂಧನ ವಾರೆಂಟ್ ಕೋರುವುದಾಗಿ ನ್ಯಾಯಾಲಯದ ಪ್ರಾಸಿಕ್ಯೂಟರ್ ಕರೀಮ್ ಖಾನ್ ಸೋಮವಾರ ಸಿಎನ್‌ಎನ್‌ಗೆ...