ಸೊರಬ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದು, ಇಂದು (ಮಾ.11) ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, “ಕಾಂಗ್ರೆಸ್ ಸೇರಲು ತೀರ್ಮಾನ ಮಾಡಿದ್ದೇನೆ. ಹಾಗಾಗಿ, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಇಂದಿನಿಂದಲೇ ಕೆಲಸ ಮಾಡಲು ಅವರು ಹೇಳಿದ್ದಾರೆ” ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿರುವ ಮಧು ಬಂಗಾರಪ್ಪ ಅವರು ಇಂದು ನನ್ನನ್ನು ಭೇಟಿಮಾಡಿ ಮಾತುಕತೆ ನಡೆಸಿದರು. pic.twitter.com/9Mid1pbYRZ
— Siddaramaiah (@siddaramaiah) March 11, 2021
ಇದನ್ನೂ ಓದಿ: ಬೆಂಬಲಿಗರಿಗೆ ಆಸ್ಪತ್ರೆಯಿಂದಲೇ ವಿಡಿಯೊ ಸಂದೇಶ: ಮಮತಾ ಬ್ಯಾನರ್ಜಿ ಹೇಳಿದ್ದೇನು?
ಸುದ್ದಿಗಾರರ ಜೊತೆ ಮಾತನಾಡಿದ ಮಧು ಬಂಗಾರಪ್ಪ, “ಏಪ್ರಿಲ್ ತಿಂಗಳಲ್ಲಿ ಸೊರಬ ಕ್ಷೇತ್ರದಲ್ಲಿ ದೊಡ್ಡ ಸಮಾವೇಶ ಆಯೋಜಿಸಿ ಅಧಿಕೃತವಾಗಿ ಕಾಂಗ್ರೆಸ್ ಸೇರುತ್ತೇನೆ. ಸಿದ್ದರಾಮಯ್ಯ ಹಿರಿಯರು, ಅವರು ಮುಖ್ಯಮಂತ್ರಿ ಆಗಿದ್ದವರು. ನಮ್ಮ ತಂದೆನೂ ಮುಖ್ಯಮಂತ್ರಿ ಆಗಿದ್ದವರು. ಹಾಗಾಗಿ ಅವರನ್ನು ಭೇಟಿಯಾಗಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಶುಕ್ರವಾರ ಭೇಟಿ ಮಾಡ್ತೇನೆ” ಎಂದು ಹೇಳಿದ್ದಾರೆ.
“ಕಾಂಗ್ರೆಸ್ ಪಕ್ಷ ನನ್ನನ್ನು ಹೇಗೆ ಉಪಯೋಗಿಸಿಕೊಳ್ಳುತ್ತೊ ಹಾಗೇ ಕೆಲಸ ಮಾಡುತ್ತೇನೆ. ಚುನಾವಣೆ ಅನ್ನೋದು ಪರೀಕ್ಷೆ ಥರ. ಪಾಸ್-ಫೇಲ್ ಇರುತ್ತೆ. ಇಬ್ಬರೇ ಅಲ್ಲಿ ಪಾಸಾಗೋದು. ಆದರೆ ನಾಯಕತ್ವ ಎಂದೂ ಸೋಲುವುದಿಲ್ಲ. ನಾನು ಜೆಡಿಎಸ್‌ನಲ್ಲಿ ಯಾವತ್ತೂ ಅಧಿಕಾರ ಅನುಭವಿಸಿಲ್ಲ. ಕಾಂಗ್ರೆಸ್‌ನಲ್ಲಿ ಬೆಳೆಯಲು ಅವಕಾಶ ಇದೆ, ಅದಕ್ಕೆ ಸೇರ್ಪಡೆ ಆಗುತ್ತಿದ್ದೇನೆ. ಈ ಸಂದರ್ಭದಲ್ಲಿ ದೇಶಕ್ಕೆ ಕಾಂಗ್ರೆಸ್ ಅಗತ್ಯ ಇದೆ. ನನ್ನ ಮತ್ತು ಕುಮಾರಸ್ವಾಮಿ ನಡುವೆ ವೈಯಕ್ತಿಕವಾಗಿ ಏನೂ ಇಲ್ಲ. ಈಗ ಯಾವುದೇ ಚರ್ಚೆ ಬೇಡ. ಇವತ್ತು ಮನಸಾರೆ ಕಾಂಗ್ರೆಸ್‌ಗೆ ಹೋಗಿದ್ದೇನೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿಯೆಂಬುದು ಖಾವಿ ಧರಿಸಿದವರ ಪುಡಿಗಾಸಿನ ಹೋರಾಟ: ಜಾಮದಾರ್ ಸಂದರ್ಶನ


