Homeಮುಖಪುಟದೆಹಲಿ ಹಿಂಸಾಚಾರ: ನಾನೇನೂ ತಪ್ಪು ಮಾಡಿಲ್ಲ ಎಂದ ಕಪಿಲ್ ಮಿಶ್ರ

ದೆಹಲಿ ಹಿಂಸಾಚಾರ: ನಾನೇನೂ ತಪ್ಪು ಮಾಡಿಲ್ಲ ಎಂದ ಕಪಿಲ್ ಮಿಶ್ರ

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ ಪೌರತ್ವ ಕಾನೂನಿನ ವಿರುದ್ದ ಪ್ರತಿಭಟಿಸುವವರನ್ನು ತೆರವುಗೊಳಿಸಲು ಅಥವಾ ಪರಿಣಾಮಗಳನ್ನು ಎದುರಿಸಲು ಭಾನುವಾರ ದೆಹಲಿ ಪೊಲೀಸರಿಗೆ ಮೂರು ದಿನಗಳ ಗಡುವು ನೀಡಿದ್ದ ಬಿಜೆಪಿ ನಾಯಕ ಕಪಿಲ್ ಮಿಶ್ರಾ, ಈಗ ಅವರ ಪ್ರಚೋದನಕಾರಿ ಹೇಳಿಕೆಗಳಿಗಾಗಿ ಆವರನ್ನು ಬಂಧಿಸುವಂತೆ ಒತ್ತಾಯಿಸುತ್ತಿದ್ದವರ ಮೇಲೆ ತಿರುಗಿ ಬಿದ್ದಿದ್ದಾರೆ.

“ಬುರ್ಹಾನ್ ವಾನಿ ಮತ್ತು ಅಫ್ಜಲ್ ಗುರುಗಳನ್ನು ಭಯೋತ್ಪಾದಕರು ಎಂದು ಪರಿಗಣಿಸದವರು ಕಪಿಲ್ ಮಿಶ್ರಾ ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಯಾಕೂಬ್ ಮೆಮನ್, ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರನ್ನು ಬಿಡುಗಡೆ ಮಾಡಲು ನ್ಯಾಯಾಲಯಕ್ಕೆ ಹೋಗುವವರು ಕಪಿಲ್ ಮಿಶ್ರಾ ಅವರನ್ನು ಬಂಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಜೈ ಶ್ರೀ ರಾಮ್,” ಎಂದು ಕಪಿಲ್‌ ಮಿಶ್ರಾ ಇಂದು ಟ್ವೀಟ್ ಮಾಡಿದ್ದಾರೆ.

ಅಲ್ಲದೇ ದೆಹಲಿ ಹೈಕೋರ್ಟ್‌ ಈಗ ಕಪಿಲ್‌ ಮಿಶ್ರಾ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ನಿರ್ದೇಶನ ಸಹ ನೀಡಿದೆ.

ಕೋಮು ಮತ್ತು ದ್ವೇಷ ಹರಡುವ ಟ್ವೀಟ್‌ಗಳಿಗೆ ಹೆಸರುವಾಸಿಯಾದ ಕಪಿಲ್ ಮಿಶ್ರಾ ಅವರು ಭಾನುವಾರ ಜಾಫ್ರಾಬಾದ್ ಬಳಿಯ ಈಶಾನ್ಯ ದೆಹಲಿಯ ಮೌಜ್‌ಪುರ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಪರವಾಗಿ ರ್ಯಾಲಿಯನ್ನು ಮುನ್ನಡೆಸಿದ್ದರು. ಅಲ್ಲಿ ಈಗಾಗಲೇ ಪೌರತ್ವ ಕಾನೂನಿನ ವಿರುದ್ಧ ಶನಿವಾರ ರಾತ್ರಿಯಿಂದ ಪ್ರತಿಭಟನೆ ನಡೆಯುತ್ತಿತ್ತು. ರ್ಯಾಲಿಯಲ್ಲಿ ಅವರು ಪ್ರದೇಶದ ರಸ್ತೆಗಳನ್ನು ತೆರವುಗೊಳಿಸಲು ದೆಹಲಿ ಪೊಲೀಸರಿಗೆ ಗಡುವು ನೀಡಿದ್ದರು. ಇಲ್ಲದಿದ್ದರೆ ನಾವೂ ಬೀದಿಗಿಳಿಯಬೇಕಾಗುತ್ತದೆ ಎಂದು ಹೇಳಿದ್ದರು. ಪೌರತ್ವ ಕಾನೂನಿನ ವಿರುದ್ಧ ಪ್ರತಿಭಟನಾಕಾರರು ಮತ್ತು ಕಾನೂನನ್ನು ಬೆಂಬಲಿಸುವ ಗುಂಪಿನ ನಡುವೆ ಘರ್ಷಣೆಗಳು ಸಂಭವಿಸುವ ಕೆಲವೇ ಗಂಟೆಗಳ ಮೊದಲು ಮಿಶ್ರಾ ಈ ಹೇಳಿಕೆ ನೀಡಿದ್ದರು.

ಸರಣಿ ಟ್ವೀಟ್‌ಗಳಲ್ಲಿ ಮಿಶ್ರಾ ಅವರನ್ನು ನಿಂದಿಸಲಾಗುತ್ತಿದೆ. ಅಲ್ಲದೆ ನನಗೆ ಪ್ರಾಣ ಬೆದರಿಕೆ ಬಂದಿದೆ. ಸಿಎಎಗೆ ಬೆಂಬಲ ನೀಡುವ ಮೂಲಕ ನಾನು ಅಪರಾಧ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

“ನನ್ನನ್ನು ಕೊಲ್ಲಲು ನನಗೆ ಅನೇಕರಿಂದ ಕರೆಗಳು ಬಂದಿವೆ. ರಾಜಕಾರಣಿಗಳು ಮತ್ತು ಪತ್ರಕರ್ತರು ಸೇರಿದಂತೆ ಅನೇಕರು ನನ್ನನ್ನು ನಿಂದಿಸುತ್ತಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲವಾದ್ದರಿಂದ ನಾನು ಹೆದರುವುದಿಲ್ಲ” ಎಂದು ಕಪಿಲ್ ಮಿಶ್ರ ಹೇಳಿದ್ದಾರೆ.

ಈ ತಿಂಗಳ ದೆಹಲಿ ಚುನಾವಣೆಯಲ್ಲಿ ಯಶಸ್ವಿಯಾಗಿ ಸ್ಪರ್ಧಿಸಿದ ಕಪಿಲ್ ಮಿಶ್ರಾ, “ದೇಶದ್ರೋಹಿಗಳನ್ನು ಶೂಟ್ ಮಾಡಿ” ಎಂಬ ಘೋಷಣೆಗಳನ್ನು ಕೂಗುವುದು ಸೇರಿದಂತೆ ಎರಡು ತಿಂಗಳ ಹಿಂದೆ ಸಿಎಎ ವಿರುದ್ಧ ಪ್ರತಿಭಟನೆಗಳು ನಡೆದಾಗಿನಿಂದ ಅವರ ದ್ವೇಷದ ಭಾಷಣಗಳನ್ನು ವ್ಯಾಪಕವಾಗಿ ಖಂಡಿಸಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...