Homeಮುಖಪುಟನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ: ಸಿದ್ದರಾಮಯ್ಯ

ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ: ಸಿದ್ದರಾಮಯ್ಯ

- Advertisement -
- Advertisement -

“ಮುಡಾ ಪ್ರಕರಣದಲ್ಲಿ ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ ಇಂದು ಸುದ್ದಿಗಾಗರೊಂದಿಗೆ ಮೂಡಾ ನಿವೇಶನ ವಿವಾದದ ಬಗ್ಗೆ ಮಾತನಾಡಿದ ಅವರು, “ರಿಟ್ ಅರ್ಜಿಯಲ್ಲಿ ಮಧ್ಯಂತರ ಪರಿಹಾರವಾಗಿ ಪ್ರಾಸಿಕ್ಯೂಷನ್ ಗೆ ತಡೆಯಾಜ್ಞೆ ನೀಡಬೇಕೆಂದು ಕೋರಲಾಗಿದೆ. ಈ ರಿಟ್ ಅರ್ಜಿಯ ಬಗ್ಗೆ ಖ್ಯಾತ ವಕೀಲರಾದ ಅಭಿಷೇಕ್ ಮನು ಸಿಂಗ್ವಿಯವರು ವಾದ ಮಂಡಿಸಲಿದ್ದಾರೆ. ನನ್ನ ಆತ್ಮಸಾಕ್ಷಿ ಸ್ಪಷ್ಟವಾಗಿದ್ದು, ನಾನು ಯಾವ ತಪ್ಪನ್ನೂ ಎಸಗಿಲ್ಲ” ಎಂದರು.

“ನಾನು ಮಂತ್ರಿಯಾಗಿ 40 ವರ್ಷಗಳು ಕಳೆದಿದ್ದು, ಈ ಅವಧಿಯಲ್ಲಿ ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ. ಜನರ ಆಶೀರ್ವಾದದಿಂದ ಅವರ ಸೇವೆಯಲ್ಲಿ ನಿರತನಾಗಿದ್ದೇನೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಯಾವುದೇ ತಪ್ಪು ಮಾಡಿಲ್ಲವೆಂದು ರಾಜ್ಯದ ಜನರಿಗೂ ತಿಳಿದಿದೆ” ಎಂದರು.

“ರಾಜಭವನವನ್ನು ಬಳಸಿಕೊಂಡು ಬಿಜೆಪಿ-ಜೆಡಿಎಸ್ ಹಾಗೂ ಕೇಂದ್ರ ಬಿಜೆಪಿ ಸರ್ಕಾರದವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ದುರುದ್ದೇಶದಿಂದ ನನ್ನ ಮೇಲೆ ಮಸಿ ಬಳಿಯಲು ಇಂತಹ ಕೃತ್ಯಕ್ಕೆ ಕೈಹಾಕಿದ್ದಾರೆ. ಬಿಜೆಪಿಯವರು ದುರುದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದು, ರಾಜಕೀಯವಾಗಿ ಇದನ್ನು ಎದಿರುಸುತ್ತೇವೆ. ಈ ಪಿತೂರಿಯ ವಿರುದ್ಧ ಕಾನೂನು ಹಾಗೂ ರಾಜಕೀಯ ಹೋರಾಟವನ್ನು ಕೈಗೊಳ್ಳುತ್ತೇವೆ. ಇಂತಹ ರಾಜಕೀಯ ಹೋರಾಟಗಳನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದು, ಇನ್ನೂ ಹೆಚ್ಚಿನ ಸ್ಪೂರ್ತಿಯೊಂದಿಗೆ ಹೋರಾಡುತ್ತೇನೆ” ಎಂದರು.

“ನಾನು ಬಡಜನರ ಪರವಾಗಿರುವುದೇ ಪ್ರತಿಪಕ್ಷಗಳ ಭಯಕ್ಕೆ ಕಾರಣವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿರುವುದು ಅವರನ್ನು ಕಾಡುತ್ತಿದೆ. ಸಿದ್ದರಾಮಯ್ಯನನ್ನು ರಾಜಕೀಯವಾಗಿ ಮುಗಿಸಿದರೆ, ಕಾಂಗ್ರೆಸ್ ಪಕ್ಷವನ್ನು ಮುಗಿಸಬಹುದು ಎಂಬ ಭ್ರಮೆಯಲ್ಲಿ ಪ್ರತಿಪಕ್ಷಗಳಿವೆ” ಎಂದು ವಾಗ್ದಾಳಿ ನಡೆಸಿದರು.

ಅಶೋಕ್ ಮತ್ತೊಮ್ಮೆ ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬ ವಿಧಾನ ಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರ ಆಗ್ರಹಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, “ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾಗ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲವೇ? ಈಗ ಸಿದ್ದರಾಮಯ್ಯನವರು ಯಾಕೆ ರಾಜೀನಾಮೆ ನೀಡುತ್ತಿಲ್ಲ?” ಎಂದು ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಅವರು ಮತ್ತೊಮ್ಮೆ ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ,  “ಆರ್ ಅಶೋಕ ಅವರೇ, ಈ ರೀತಿ ಬೇಕಾಬಿಟ್ಟಿ ಹೇಳಿಕೆ ನೀಡುವ ಮೊದಲು ವಾಸ್ತವಾಂಶವನ್ನು ಪರಿಶೀಲಿಸಿಕೊಂಡು ಮಾತನಾಡಿ. ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು 2011ರ ಜನವರಿ 21ರಂದು; ಅವರ ವಿರುದ್ಧ ಅರ್ಜಿದಾರರು ನೀಡಿದ್ದ 1600 ಪುಟಗಳ ಪ್ರಬಲ ದಾಖಲೆಗಳ ಸಾಕ್ಷ್ಯ ಕೂಡಾ ಇತ್ತು. ಹಾಗಿದ್ದರೂ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ. ಅಶೋಕ್ ಅವರೇ, ಆ ಕಾಲದಲ್ಲಿ ನೀವೇ ಅಲ್ಲವೇ ಯಡಿಯೂರಪ್ಪನವರು ರಾಜೀನಾಮೆ ಯಾಕೆ ನೀಡಬೇಕು ಎಂದು ಪ್ರಶ್ನಿಸಿದ್ದವರು. ಈಗ ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ” ಎಂದು ಪ್ರಶ್ನಿಸಿದ್ದಾರೆ.

“ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು 2011ರ ಆಗಸ್ಟ್ ನಾಲ್ಕರಂದು. ಅದು ನ್ಯಾ.ಸಂತೋಷ್ ಹೆಗ್ಡೆ ಅವರ ನೇತೃತ್ವದ ಲೋಕಾಯುಕ್ತವು ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರಿಗೆ ಸಲ್ಲಿಸಿದ ನಂತರ. ಅಕ್ರಮ ಗಣಿಗಾರಿಕೆಯಿಂದಾಗಿ ರಾಜ್ಯದ ಬೊಕ್ಕಸಕ್ಕೆ 16,500 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಹೇಳಿತ್ತು. ಅಶೋಕ್ ಅವರೇ, ಹಳೆಯದ್ದನ್ನೆಲ್ಲವನ್ನೂ ನೆನಪಿಸಿಕೊಳ್ಳಿ, ಆಗ ನೀವೆಲ್ಲರೂ ಸೇರಿ ಯಡಿಯೂರಪ್ಪ ವಿರುದ್ಧವೇ ಏನೆಲ್ಲ ಕುತಂತ್ರ ಮಾಡಿದ್ದೀರಿ ಎನ್ನುವುದೂ ನೆನಪಾಗಬಹುದು” ಎಂದು ಟೀಕಿಸಿದ್ದಾರೆ.

“ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಚೇನಹಳ್ಳಿ ಡಿನೋಟಿಫಿಕೇಷನ್ ಹಗರಣದ ತನಿಖೆ ನಡೆಸಿದ್ದ ನ್ಯಾ.ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತವೇ ಆರೋಪಗಳೆಲ್ಲವನ್ನು ಸಾಬೀತುಪಡಿಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರ ನ್ಯಾಯಯುತವಾಗಿತ್ತು ಎಂದು ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರೇ ದೃಡೀಕರಿಸಿದ್ದರಲ್ಲವೇ? ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಒಂದಲ್ಲ ಎರಡಲ್ಲ ಹದಿನೈದು ಡಿನೋಟಿಫಿಕೇಷನ್ ಹಗರಣಗಳ ತನಿಖೆಗೆ ಅನುಮತಿ ನೀಡಿದ್ದರು. ಹೆಚ್ಚಿನ ಮಾಹಿತಿಗೆ ನ್ಯಾ.ಸಂತೋಷ್ ಹೆಗ್ಡೆ ಅವರು ನೀಡಿದ್ದ ಅಕ್ರಮ ಗಣಿಗಾರಿಕೆಯ ತನಿಖಾ ವರದಿಯನ್ನು ತೆಗೆದು ಓದಿಕೊಳ್ಳಿ” ಎಂದು ಹೇಳಿದ್ದಾರೆ.

“ಇಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಪರವಾಗಿ ಕಣ್ಣೀರು ಸುರಿಸುತ್ತಿರುವ ಬಿಜೆಪಿ ನಾಯಕರಿಗೆ 2011ರಲ್ಲಿ ಆಗಿನ ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರ ಬಗ್ಗೆ ಅವಹೇಳನ ಮಾಡಿದ್ದೆಲ್ಲ ಮರೆತುಹೋದಂತಿದೆ. ನಮ್ಮ ಪಕ್ಷದ ಕಾರ್ಯಕರ್ತರು ಶಾಂತಿಯುತವಾಗಿ ನಡೆಸಿರುವ ಪ್ರತಿಭಟನೆಯನ್ನು ಪ್ರಶ್ನಿಸುತ್ತಿರುವ ಬಿಜೆಪಿ ನಾಯಕರಿಗೆ 2011ರಲ್ಲಿ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದೂ ಕೂಡಾ ಮರೆತುಹೋಗಿದೆ” ಎಂದು ಹಳೆ ಘಟನೆಗಳನ್ನು ಸಿಎಂ ಬಿಜೆಪಿ ನಾಯಕರಿಗೆ ನೆನಪಿಸಿದ್ದಾರೆ.

ಇದನ್ನೂ ಓದಿ; ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಒಪ್ಪಿಗೆ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ಸಿದ್ದರಾಮಯ್ಯ; ಇಂದು ಮಧ್ಯಾಹ್ನ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...