Homeಕರ್ನಾಟಕಜಾತಿ ಗಣತಿಗೆ ನನ್ನ ವಿರೋಧವಿಲ್ಲ, ಸಮೀಕ್ಷೆ ವೈಜ್ಞಾನಿಕವಾಗಿರಬೇಕು: ಡಿ.ಕೆ. ಶಿವಕುಮಾರ್

ಜಾತಿ ಗಣತಿಗೆ ನನ್ನ ವಿರೋಧವಿಲ್ಲ, ಸಮೀಕ್ಷೆ ವೈಜ್ಞಾನಿಕವಾಗಿರಬೇಕು: ಡಿ.ಕೆ. ಶಿವಕುಮಾರ್

- Advertisement -
- Advertisement -

ನಾನು ಜಾತಿ ಗಣತಿಗೆ ಎಲ್ಲಿಯೂ ವಿರೋಧ ವ್ಯಕ್ತಪಡಿಸಿಲ್ಲ. ಆದರೆ, ಜಾತಿ ಗಣತಿ ಸಮೀಕ್ಷೆಯು ವೈಜ್ಞಾನಿಕ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು ಎಂಬುದಷ್ಟೇ ನಮ್ಮ ಅಭಿಮತ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದರು.

ನಿನ್ನೆ ರಾಜ್ಯಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ‘ಕರ್ನಾಟಕದಲ್ಲಿ ಜಾತಿ ಗಣತಿ ಜಾರಿ ವಿಚಾರವಾಗಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ’ ಎಂದು ಹೇಳಿದ್ದರು. ಈ ಬಗ್ಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದರು.

‘ಜಾತಿ ಗಣತಿ ಸಮೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ನಮ್ಮ ಅನೇಕ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮನೆ-ಮನೆಗೆ ತೆರಳಿ ಸಮೀಕ್ಷೆ ನಡೆಸಿಲ್ಲ ಎಂಬ ದೂರುಗಳು ಬಂದಿವೆ. ಎಲ್ಲ ಸಮುದಾಯಗಳು ಅವರ ಜನಸಂಖ್ಯೆಗೆ ಅನುಗುಣವಾಗಿ ತಮ್ಮ ಹಕ್ಕನ್ನು ಪಡೆಯಬೇಕು. ಅಲ್ಪಸಂಖ್ಯಾತರು, ಪರಿಶಿಷ್ಟರು ಸೇರಿದಂತೆ ಎಲ್ಲರೂ ತಮ್ಮ ಜನಸಂಖ್ಯೆ ಅನುಗುಣವಾಗಿ ಹಕ್ಕು ಹಾಗೂ ಅನುದಾನ ಕೇಳುತ್ತಾರೆ. ಈ ಜಾತಿ ಗಣತಿಯನ್ನು ವೈಜ್ಞಾನಿಕವಾಗಿ ಮಾಡಲಾಗಿದೆಯೇ ಎಂಬ ವಿಚಾರವಾಗಿ ನಾವು ಸ್ಪಷ್ಟೀಕರಣ ಕೇಳಿದ್ದೇವೆ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಮೇಲೆ ನಾವು ನಂಬಿಕೆ ಇಟ್ಟಿದ್ದೇವೆ. ಸಮಾಜದ ಎಲ್ಲ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಿಕೊಡುವ ಕಾಂಗ್ರೆಸ್ ಪಕ್ಷದ ಬದ್ಧತೆಗೆ ನಾನು ಬೆಂಬಲವಾಗಿ ನಿಲ್ಲುತ್ತೇನೆ. ಕೇಂದ್ರ ಸರ್ಕಾರದ ವರ್ಗಿಕರಣದ ಅನ್ವಯ ನಾನು ಕೂಡ ಇತರೆ ಹಿಂದುಳಿದ ವರ್ಗದ ಸಮುದಾಯದ ನಾಯಕ. ಪಕ್ಷದ ಅಧ್ಯಕ್ಷನಾಗಿ ನಾನು ಎಲ್ಲ ವರ್ಗದ ಜನರನ್ನು ಸಮಾನವಾಗಿ ನೋಡಬೇಕು’ ಎಂದರು.

ಜಾತಿ ಗಣತಿಯ ಕೆಲವು ದಾಖಲೆಗಳು ಕಾಣೆಯಾಗಿವೆ ಎಂಬ ವಿಚಾರವಾಗಿ ಮಾತನಾಡಿ, ‘ಈ ವಿಚಾರ ನನಗೆ ಗೊತ್ತಿಲ್ಲ. ಜಯಪ್ರಕಾಶ್ ಹೆಗ್ಡೆ ಅವರೊಂದಿಗೆ ಮಾತನಾಡಿದ್ದು, ವರದಿಗೆ ಕಾರ್ಯದರ್ಶಿಗಳ ಸಹಿ ಇಲ್ಲವೆಂಬ ಮಾಹಿತಿ ಪಡೆದಿದ್ದೇನೆ. ಕಾರ್ಯದರ್ಶಿಗಳ ಸಹಿ ಇಲ್ಲದೇ ಅದು ಹೇಗೆ ಸಿಂಧುವಾಗುತ್ತದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ’ ಎಂದು ಹೇಳಿದರು.

ಬೇರೆ ಪಕ್ಷಕ್ಕೆ ಹೋಗಲು ನಾನು ಹುಚ್ಚನಲ್ಲ:

ಲೋಕಸಭೆ ಚುನಾವಣೆ ನಂತರ ಪ್ರಭಾವಿ ಸಚಿವರು 50-60 ಶಾಸಕರೊಟ್ಟಿಗೆ ಬಿಜೆಪಿ ಸೇರುತ್ತಾರೆ ಎಂಬ ಕುಮಾರಸ್ವಾಮಿ ಹೇಳಿಕೆ ನಿಮ್ಮನ್ನೇ ಗುರಿ ಮಾಡಿರುವಂತಿದೆ ಎಂದು ಕೇಳಿದಾಗ, ‘ನಾನು ಹುಟ್ಟುತ್ತಲೇ ಕಾಂಗ್ರೆಸ್ಸಿಗ. ಬೇರೆ ಪಕ್ಷಕ್ಕೆ ಹೋಗಲು ನಾನು ಹುಚ್ಚನಲ್ಲ. ನನಗೆ ನನ್ನದೇ ಆದ ಮೂಲ ಆದರ್ಶಗಳಿವೆ. ನನಗೆ ಗಾಂಧಿ ಕುಟುಂಬ ಹಾಗೂ ಕಾಂಗ್ರೆಸ್ ಪಕ್ಷದ ಮೇಲೆ ಅಪಾರವಾದ ನಂಬಿಕೆ ಇದೆ. ಅವರು (ಕುಮಾರಸ್ವಾಮಿ) ಮಾತನಾಡಿದ್ದಕ್ಕೆಲ್ಲ ನಾನು ಬಾಧ್ಯಸ್ಥನಲ್ಲ. ಅವರು ಏನಾದರೂ ಹೇಳಿಕೊಂಡು ತಿರುಗಲಿ, ಆ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ’ ಎಂದರು.

ಇದನ್ನೂ ಓದಿ; ಎಲ್ಲ ಬಲಿಷ್ಠರು ‘ಜಾತಿ ಗಣತಿ’ ವಿರುದ್ಧ ಒಗ್ಗಟ್ಟಾಗಿದ್ದಾರೆ; ಡಿಕೆಶಿ ನಿಲುವು ವಿರೋಧಿಸಿದ ಖರ್ಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ಕಿರುಕುಳ ಪ್ರಕರಣ: ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣಗೆ ಮಧ್ಯಂತರ ಜಾಮೀನು

0
ಮನೆಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಗುರುವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 47ರ ಹರೆಯದ ಮನೆ ಕೆಲಸದಾಕೆಗೆ ಲೈಂಗಿಕ...