Homeಮುಖಪುಟಪ್ರತಿಭಟನೆಯಿಂದ ನಾನು ಹಿಂದೆ ಸರಿದಿಲ್ಲ, ಮಾಧ್ಯಮಗಳೇ ಸುಳ್ಳು ಸುದ್ದಿ ಹಬ್ಬಿಸಬೇಡಿ: ಸಾಕ್ಷಿ ಮಲಿಕ್ ಟ್ವೀಟ್

ಪ್ರತಿಭಟನೆಯಿಂದ ನಾನು ಹಿಂದೆ ಸರಿದಿಲ್ಲ, ಮಾಧ್ಯಮಗಳೇ ಸುಳ್ಳು ಸುದ್ದಿ ಹಬ್ಬಿಸಬೇಡಿ: ಸಾಕ್ಷಿ ಮಲಿಕ್ ಟ್ವೀಟ್

- Advertisement -
- Advertisement -

ಸಾಕ್ಷಿ ಮಲಿಕ್ ಅವರು ಸೋಮವಾರ ಕುಸ್ತಿಪಟುಗಳ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ ಎಂದು ಮಾಧ್ಯಮಗಳು ಸುದ್ದಿ ಬಿತ್ತರಿಸುತ್ತಿವೆ. ಆದರೆ ಇದು ಸುಳ್ಳು ಸುದ್ದಿ ಎಂದು ಸಾಕ್ಷಿಮಲಿಕ್ ಹಾಗೂ ಬಜರಂಗ್ ಪುನಿಯಾ ಸ್ಪಷ್ಟಣೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ಈ ಸುದ್ದಿ ಸಂಪೂರ್ಣ ತಪ್ಪು. ನ್ಯಾಯಕ್ಕಾಗಿ ಹೋರಾಟದಲ್ಲಿ ನಾವೇನೂ ಹಿಂದೆ ಸರಿದಿಲ್ಲ, ನಾವೂ ಹಿಂದೆ ಸರಿಯುವುದಿಲ್ಲ. ಸತ್ಯಾಗ್ರಹದ ಜೊತೆಗೆ ರೈಲ್ವೆಯಲ್ಲಿ ನನ್ನ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ. ದಯವಿಟ್ಟು ಯಾವುದೇ ತಪ್ಪು ಸುದ್ದಿ ಹಬ್ಬಿಸಬೇಡಿ” ಎಂದು ಮಾಧ್ಯಮ ವರದಿಗಳು ಸುಳ್ಳು ಎಂದು ಹೇಳಿದ್ದಾರೆ.

ಬಜರಂಗ್ ಪುನಿಯಾ ಕೂಡ ಟ್ವೀಟ್ ಮಾಡಿದ್ದು, ”ಚಳವಳಿ ಹಿಂಪಡೆಯುವ ಸುದ್ದಿ ಕೇವಲ ವದಂತಿಯಾಗಿದೆ. ನಮಗೆ ಹಾನಿ ಮಾಡಲು ಈ ಸುದ್ದಿ ಹಬ್ಬಿಸಲಾಗುತ್ತಿದೆ. ನಾವು ಹಿಂದೆ ಸರಿದಿಲ್ಲ ಅಥವಾ ಚಳವಳಿಯನ್ನು ಹಿಂತೆಗೆದುಕೊಂಡಿಲ್ಲ. ಎಫ್‌ಐಆರ್‌ ದಾಖಲಿಸಿರುವುದನ್ನು ಮಹಿಳಾ ಕುಸ್ತಿಪಟುಗಳು ಹಿಂಪಡೆಯುತ್ತಾರೆ ಎಂಬ ಸುದ್ದಿಯೂ ಸುಳ್ಳು. ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ” ಎಂದು ತಿಳಿಸಿದ್ದಾರೆ.

ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ ಕಿರುಕುಳ ಆರೋಪ ಮಾಡಿದ್ದು, ಅವರನ್ನು ಕೂಡಲೇ ಬಂದಿಸುವಂತೆ ಒತ್ತಾಯಿಸಿ ಕಳೆದ ಒಂದು ತಿಂಗಳಿನಿಂದ ದೆಹಲಿಯ ಜಂತರ್​-ಮಂತರ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸಿದ ಕುಸ್ತಿಪಟುಗಳು ಶನಿವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು.

ದೆಹಲಿಯ ಅಮಿತ್ ಶಾ ಅವರ ನಿವಾಸದಲ್ಲಿ ಶನಿವಾರ ತಡರಾತ್ರಿ ಸಭೆ ನಡೆದಿದ್ದು, ಕುಸ್ತಿಪಟುಗಳು ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಅವರ ಬಂಧನಕ್ಕೆ ತಮ್ಮ ಬೇಡಿಕೆಯನ್ನು ಎತ್ತಿದ್ದರಿಂದ ರಾತ್ರಿಯವರೆಗೂ ಸಭೆ ನಡೆಯಿತು.

ಸಭೆಯು ರಾತ್ರಿ 11 ಗಂಟೆಗೆ ಪ್ರಾರಂಭವಾಯಿತು ಮತ್ತು ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು ಎಂದು ವರದಿಯಾಗಿದೆ. ಮೂಲಗಳ ಪ್ರಕಾರ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ಸಂಗೀತಾ ಫೋಗಟ್ ಮತ್ತು ಸತ್ಯವರ್ತ್ ಕಡಿಯಾನ್ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಮೆಡಲ್‌ಗಳನ್ನು ಗಂಗಾ ನದಿಗೆ ಎಸೆದು, ಆಮರಣಾಂತ ಉಪವಾಸ ಕೂರುತ್ತೇವೆ: ಕುಸ್ತಿಪಟು ಸಾಕ್ಷಿ ಮಲಿಕ್

”ನಾವು ಗೃಹ ಸಚಿವರಿಂದ ನಾವು ಬಯಸಿದ ಪ್ರತಿಕ್ರಿಯೆಯನ್ನು ಪಡೆಯಲಿಲ್ಲ. ಆದ್ದರಿಂದ ನಾವು ಸಭೆಯಿಂದ ಹೊರಬಂದೆವು. ನಾವು ಪ್ರತಿಭಟನೆಯ ಕಾರ್ಯತಂತ್ರವನ್ನು ರೂಪಿಸುತ್ತಿದ್ದೇವೆ. ನಾವು ಹಿಂದೆ ಸರಿಯುವುದಿಲ್ಲ” ಎಂದು ಕಡಿಯನ್ ಹೇಳಿದರು. ಕುಸ್ತಿಪಟುಗಳು ತಮ್ಮ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಪ್ರತಿಭಟನಾ ನಿರತ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಹಾಕಲು ಹರಿದ್ವಾರಕ್ಕೆ ಹೋದ ಕೆಲವು ದಿನಗಳ ನಂತರ ಸಭೆ ನಡೆಸಲಾಯಿತು. ಆದರೆ ರೈತರ ಮುಖಂಡ ನರೇಶ್ ಟಿಕಾಯತ್ ಅವರನ್ನು ಆ ಸಭೆಯಿಂದ ಹೊರಗಿಡಲಾಯಿತು. ಆ ನಂತರ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಜೂನ್ 9 ರೊಳಗೆ ಬಂಧಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಆಗ್ರಹಿಸಲಾಯಿತು.

ಅಮಿತ್ ಶಾ ಭೇಟಿಗೂ ಮುನ್ನ ಕುಸ್ತಿಪಟುಗಳು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿದ್ದರು. ಠಾಕೂರ್ ಅವರು ”ಕ್ರೀಡಾಪುಟಗಳು ಮಾಡಿರುವ ಆರೋಪಗಳ ಬಗ್ಗೆ ನ್ಯಾಯಯುತ ತನಿಖೆ ನಡೆಸುತ್ತೇವೆ” ಎಂದು ಭರವಸೆ ನೀಡಿದರು.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಅಪ್ರಾಪ್ತ ವಯಸ್ಕ ಸೇರಿದಂತೆ ಮಹಿಳಾ ಗ್ರಾಪ್ಲರ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಇಲ್ಲಿಯವರೆಗೆ, ಬ್ರಿಜ್ ಭೂಷಣ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಮತ್ತು ಅವರನ್ನು ಪೋಕ್ಸೋ ಕಾಯ್ದೆಯಡಿಯಲ್ಲಿ ದಾಖಲಿಸಲಾಗಿದೆ. ಆದರೆ ಈವರೆಗೂ ಬಂಧಿಸದಿರುವುದಕ್ಕೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ-2024: ಕುಗ್ಗಿದ ಮೋದಿ ವರ್ಚಸ್ಸು; ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವಲೋಕನ…

0
2014 ಮತ್ತು 2019ರ ಲೋಕಸಭೆ ಚುನಾವಣೆಗೆ ಹೋಲಿಕೆ ಮಾಡಿದರೆ 2024ರಲ್ಲಿ ದೇಶದಲ್ಲಿ ಮೋದಿ ವರ್ಚಸ್ಸು ಕಡಿಮೆಯಾಗಿದೆ. ಈ ಬಾರಿ ಬ್ರ್ಯಾಂಡ್ ಮೋದಿ ದುರ್ಬಲವಾಗುತ್ತಿದೆ, ಮೋದಿ ಕುರಿತು ನಿರೂಪಣೆಯಲ್ಲಿ ಬದಲಾವಣೆ ಇದೆ, ಜನರಲ್ಲಿ ಮೋದಿ...