Homeಕರ್ನಾಟಕನನಗೂ ಸಿಡಿ ಪ್ರಕರಣಕ್ಕೂ ಸಂಬಂಧವಿಲ್ಲ, ಯುವತಿ ನನ್ನ ಭೇಟಿ ಮಾಡಿಲ್ಲ: ಡಿ.ಕೆ ಶಿವಕುಮಾರ್

ನನಗೂ ಸಿಡಿ ಪ್ರಕರಣಕ್ಕೂ ಸಂಬಂಧವಿಲ್ಲ, ಯುವತಿ ನನ್ನ ಭೇಟಿ ಮಾಡಿಲ್ಲ: ಡಿ.ಕೆ ಶಿವಕುಮಾರ್

- Advertisement -
- Advertisement -

ನನಗೂ ಸಿಡಿ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಸಂತ್ರಸ್ತ ಯುವತಿ ನನ್ನನ್ನು ಭೇಟಿ ಮಾಡಿಲ್ಲ ಕಾನೂನು ಪ್ರಕಾರ ತನಿಖೆ ಮಾಡಲಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿ ಎಂದು ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ ಶಿವಕುಮಾರ್ ಶನಿವಾರ ಹೊಸೂರಿನಲ್ಲಿ ತಿಳಿಸಿದ್ದಾರೆ.

ಸಿಡಿ ಪ್ರಕರಣದಲ್ಲಿ ಯುವತಿಯನ್ನು ಬಳಸಿಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶನಿವಾರ ಸಂಜೆ ಆರೋಪಿಸಿದ್ದರು. ಅಲ್ಲದೆ ಸಂತ್ರಸ್ತ ಯುವತಿಯ ಪೋಷಕರು ಡಿ.ಕೆ. ಶಿವಕುಮಾರ್‌ ಅವರೇ ಇದಕ್ಕೆಲ್ಲ ಕಾರಣ ಎಂದು ನೇರವಾಗಿ ಆರೋಪ ಹೊರಿಸಿದ್ದರು.

ಇದನ್ನೂ ಓದಿ: ‘ರಮೇಶ್‌ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯುತ್ತೇನೆ’ – ಸಿಡಿ ಹಗರಣದ ಸಂತ್ರಸ್ತೆ ಯುವತಿ

ಈ ಬಗ್ಗೆ ಹೊಸೂರಿನಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, “ಪಾಪ, ಅವರು ಹತಾಶರಾಗಿದ್ದಾರೆ, ಬೇಸರದಲ್ಲಿದ್ದಾರೆ. ಅವರಿಗೆ ಅವರ ಸಮಸ್ಯೆ ಇದೆ. ಹೀಗಾಗಿ ಮಾತನಾಡುತ್ತಾರೆ. ಅವರಿಗೆ ಉತ್ತರ ಕೊಡಲು ಹೋಗುವುದಿಲ್ಲ. ಕಾನೂನಿದೆ, ಪೊಲೀಸ್ ಅಧಿಕಾರಿಗಳಿದ್ದಾರೆ. ತನಿಖೆ ನಡೆಯುತ್ತಿದೆ. ಎಲ್ಲ ವಿಚಾರಣೆ ಮುಗಿಯಲಿ” ಎಂದು ಹೇಳಿದ್ದಾರೆ.

“ನನಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಇದು ಅವರ ವೈಯಕ್ತಿಕ ಸಮಸ್ಯೆ. ಅವರೇ ಇದನ್ನು ಬಗೆಹರಿಸಿಕೊಳ್ಳಬೇಕು. ರಮೇಶ್ ಜಾರಕಿಹೊಳಿ ಅವರು ಇವತ್ತೊಂದು ಮಾತನಾಡುತ್ತಾರೆ, ನಾಳೆ ಒಂದು ಮಾತನಾಡುತ್ತಾರೆ, ನಾಡಿದ್ದು ಒಂದು ಮಾತನಾಡುತ್ತಾರೆ” ಎಂದು ಹೇಳಿದ್ದಾರೆ.

“ಅವಕ್ಕೆಲ್ಲ ಉತ್ತರ ಕೊಟ್ಟುಕೊಂಡು ಕೂರಲು ನಾನು ತಯಾರಿಲ್ಲ. ನನಗೆ ಅದರ ಅವಶ್ಯಕತೆಯೂ ಇಲ್ಲ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ಅವರದೇ ಸರ್ಕಾರ ಇದೆ. ಕಾನೂನು ಪ್ರಕಾರ ತನಿಖೆ ಮಾಡಲಿ. ತಪ್ಪು ಮಾಡಿರುವವರಿಗೆ ಶಿಕ್ಷೆ ನೀಡಲಿ. ನಾನು ಸಂತ್ರಸ್ತ ಯುವತಿಯನ್ನು ಭೇಟಿ ಮಾಡಿಲ್ಲ. ನನ್ನ ಬಳಿ ಯಾರೂ ಬಂದಿಲ್ಲ” ಎಂದು ಡಿ.ಕೆ. ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಡಿಕೆಶಿ,‌ ಸಿದ್ದರಾಮಯ್ಯ ಹೆಸರು; ಸಿಡಿ ಹಗರಣ ಹನಿಟ್ಯ್ರಾಪ್‌ ಸ್ವರೂಪ ಪಡೆಯುತ್ತಿದೆ – ಜೆಡಿಎಸ್‌‌ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...