Homeಮುಖಪುಟರಾಜೀನಾಮೆ ನೀಡುವಂತೆ ಯಾರು ಒತ್ತಡ ತಂದಿಲ್ಲ: ಬಿ.ಎಸ್ ಯಡಿಯೂರಪ್ಪ

ರಾಜೀನಾಮೆ ನೀಡುವಂತೆ ಯಾರು ಒತ್ತಡ ತಂದಿಲ್ಲ: ಬಿ.ಎಸ್ ಯಡಿಯೂರಪ್ಪ

- Advertisement -
- Advertisement -

ರಾಜೀನಾಮೆ ನೀಡುವಂತೆ ಯಾರೂ ನನ್ನ ಮೇಲೆ ಒತ್ತಡ ಹೇರಿಲ್ಲ. 2 ವರ್ಷಗಳ ಸರಕಾರ ಪೂರ್ಣಗೊಂಡ ನಂತರ ಬೇರೊಬ್ಬರು ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳುವುದಕ್ಕಾಗಿ ನಾನು ಸ್ವಂತ ನಿರ್ಧಾರ ತೆಗೆದುಕೊಂಡು ರಾಜೀನಾಮೆ ನೀಡಿದ್ದೇನೆ ಎಂದು ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ನಂತರ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ನನ್ನ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ.I have resigned voluntarily. Nobody forced me to quit ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ನಾನು ಕೆಲಸ ಮಾಡುತ್ತೇನೆ. ನನ್ನ ನಂತರ ಉತ್ತರಾಧಿಕಾರಿಯಾದ ಯಾರ ಹೆಸರನ್ನು ನಾನು ಸೂಚಿಸಿಲ್ಲ ಎಂದು ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಪಕ್ಷದ ಹೈಕಮಾಂಡ್‌ ಯಾರನ್ನು ಹೊಸ ಸಿಎಂ ಆಗಿ ನೇಮಿಸುತ್ತದೆಯೋ ಅವರ ಅಡಿಯಲ್ಲಿ ನಾವು ಕೆಲಸ ಮಾಡುತ್ತೇವೆ. ನಾನು ನನ್ನ 100% ಸಮಯವನ್ನು ಪಕ್ಷ ಬಲವರ್ಧನೆಗೆ ನೀಡುತ್ತೇನೆ ಮತ್ತು ನನ್ನ ಬೆಂಬಲಿಗರು ಸಹ ತಮ್ಮ 100% ಅನ್ನು ಸಹ ನೀಡುತ್ತಾರೆ. ರಾಜೀನಾಮೆ ಕುರಿತು ನನಗೆ ಯಾವುದೇ ಅಸಮಾಧಾನ ಇಲ್ಲ ಎಂದು ಬಿಎಸ್‌ವೈ ತಿಳಿಸಿದ್ದಾರೆ.

“75 ವರ್ಷ ದಾಟಿದ ಯಡಿಯೂರಪ್ಪನವರನ್ನು ಮತ್ತೆ ಎರಡು ವರ್ಷ ಮುಖ್ಯಮಂತ್ರಿ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ, ಅಮಿತ್‌ ಶಾರವರಿಗೆ, ಜೆ.ಪಿ ನಡ್ಡಾರವರಿಗೆ ಧನ್ಯವಾದ ತಿಳಿಸುತ್ತೇನೆ ಅವರಿಗೆ ನಾನು ಋಣಿಯಾಗಿದ್ದೇನೆ. ಮುಂದೆಯೇ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ಅವರ ನಿರೀಕ್ಷೆಯಂತೆ ಕೆಲಸ ಮಾಡೋಣ. ನಾನು ದುಃಖದಿಂದ ರಾಜೀನಾಮೆ ನೀಡುತ್ತಿಲ್ಲ ಬದಲಿಗೆ ಸಂತೋಷದಿಂದ ರಾಜೀನಾಮೆ ನೀಡುತ್ತಿದ್ದೇನೆ” ಎಂದು ವಿಧಾನಸೌಧದಲ್ಲಿ ಈ ಮೊದಲು ಘೋಷಿಸಿದ್ದರು.


ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ಎಸ್ ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...