Homeಮುಖಪುಟ'ಐ ಲವ್ ಮುಹಮ್ಮದ್' ವಿವಾದ: ದೇಶದಾದ್ಯಂತ 3000ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

‘ಐ ಲವ್ ಮುಹಮ್ಮದ್’ ವಿವಾದ: ದೇಶದಾದ್ಯಂತ 3000ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

- Advertisement -
- Advertisement -

ದೇಶದಾದ್ಯಂತ ಇದುವರೆಗೆ ‘ಐ ಲವ್ ಮುಹಮ್ಮದ್’ ಬ್ಯಾನರ್ ವಿವಾದಕ್ಕೆ ಸಂಬಂಧಿಸಿದ 28 ಎಫ್‌ಐಆರ್‌ಗಳಲ್ಲಿ 3000ಕ್ಕೂ ಅಧಿಕ ಮುಸ್ಲಿಮರ ವಿರುದ್ದ ಪ್ರಕರಣದ ದಾಖಲಾಗಿದೆ. ಸುಮಾರು 120 ಜನರನ್ನು ಬಂಧಿಸಲಾಗಿದೆ

ಈದ್ ಮೀಲಾದ್ ಪ್ರಯುಕ್ತ ಸೆಪ್ಟೆಂಬರ್ 4ರಂದು ಕಾನ್ಪುರದಲ್ಲಿ ನಡೆದ ಮೆರವಣಿಗೆಯಲ್ಲಿ ಮುಸ್ಲಿಮರ ಗುಂಪೊಂದು “ಐ ಲವ್ ಮುಹಮ್ಮದ್” ಬ್ಯಾನರ್ ಹಿಡಿದಾಗಿನಿಂದ ವಿವಾದ ಉಂಟಾಗಿದೆ. ಹಿಂದುತ್ವ ಗುಂಪುಗಳು ಮೆರವಣಿಗೆಯಲ್ಲಿ ಹೊಸ ಸಂಪ್ರದಾಯವನ್ನು ಪರಿಚಯಿಸಲಾಗುತ್ತಿದೆ ಎಂದು ಆರೋಪಿಸಿ ಬ್ಯಾನರ್‌ಗೆ ಆಕ್ಷೇಪ ವ್ಯಕ್ತಪಡಿಸಿತ್ತು. ಆ ಬಳಿಕ ಪೊಲೀಸರು ಯುವಕರನ್ನು ಬಂಧಿಸಿದ್ದರು.

ಧಾರ್ಮಿಕ ಮೆರವಣಿಗೆಗಳಲ್ಲಿ ಹೊಸ ಪದ್ಧತಿಗಳನ್ನು ಪರಿಚಯಿಸುವುದನ್ನು ಸರ್ಕಾರಿ ನಿಯಮಗಳು ನಿಷೇಧಿಸುತ್ತದೆ ಎಂದು ಕಾನ್ಪುರ ಉಪ ಪೊಲೀಸ್ ಆಯುಕ್ತ ದಿನೇಶ್ ತ್ರಿಪಾಠಿ ಹೇಳಿದ್ದರು.

ಮೆರವಣಿಗೆಯ ಸಮಯದಲ್ಲಿ ಹೊಸ ಪದ್ಧತಿಯನ್ನು ಪರಿಚಯಿಸಿದ ಮತ್ತು ಕೋಮು ಸಾಮರಸ್ಯವನ್ನು ಕದಡುವ ಪ್ರಯತ್ನ ಮಾಡಿದ ಆರೋಪದ ಮೇಲೆ ಸೆಪ್ಟೆಂಬರ್ 9ರಂದು ಪೊಲೀಸರು 24 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ಪೈಕಿ 15 ಮಂದಿಯನ್ನು ಗುರುತಿಸಲಾಗಿರಲಿಲ್ಲ.

ಆದರೆ, ಮತ್ತೊಂದೆಡೆ ಬ್ಯಾನರ್ ಹಾಕಿದ್ದಕ್ಕಾಗಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಕಾನ್ಪುರ ಪೊಲೀಸರು ಹೇಳಿದ್ದರು. ಹೊಸ ಸ್ಥಳದಲ್ಲಿ ಬ್ಯಾನರ್ ಹಾಕಿದ್ದಕ್ಕಾಗಿ ಮತ್ತು ಇನ್ನೊಂದು ಗುಂಪಿನ ಪೋಸ್ಟರ್‌ಗಳನ್ನು ಹರಿದು ಹಾಕಿದ್ದಕ್ಕಾಗಿ ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದ್ದರು.

ಆದಾಗ್ಯೂ, ಪೊಲೀಸರ ಕ್ರಮ ಖಂಡಿಸಿ ಉತ್ತರ ಪ್ರದೇಶದ ಇತರ ಜಿಲ್ಲೆಗಳು ಮತ್ತು ಇತರ ರಾಜ್ಯಗಳಲ್ಲಿ “ಐ ಲವ್ ಮುಹಮ್ಮದ್” ಬ್ಯಾನರ್‌ಗಳೊಂದಿಗೆ ಪ್ರತಿಭಟನೆ, ಮೆರವಣಿಗೆಗಳು ನಡೆದಿವೆ. ಕೆಲವು ಪ್ರತಿಭಟನೆಗಳಲ್ಲಿ ಪೊಲೀಸರೊಂದಿಗೆ ಘರ್ಷಣೆ ಉಂಟಾದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಪ್ರಕರಣಗಳು ದಾಖಲಾಗಿವೆ.

ಪ್ರತಿಭಟನೆಗಳಿಗೆ ಸಂಬಂಧಿಸಿದ ಹೆಚ್ಚಿನ ಪ್ರಕರಣಗಳು ಉತ್ತರ ಪ್ರದೇಶದಲ್ಲಿ ದಾಖಲಾಗಿದ್ದು, 2,700ಕ್ಕೂ ಹೆಚ್ಚು ಜನರ ಮೇಲೆ 20 ಎಫ್‌ಐಆರ್‌ಗಳು ದಾಖಲಿಸಲಾಗಿದೆ.

ಇವುಗಳಲ್ಲಿ ಉನ್ನಾವ್ (ಎಂಟು ಪ್ರಕರಣಗಳು, 85 ಆರೋಪಿಗಳು, ಐವರ ಬಂಧನ), ಬಾಗ್‌ಪತ್ (150 ಆರೋಪಿಗಳು, ಇಬ್ಬರ ಬಂಧನ), ಕೈಸರ್‌ಗಂಜ್ (355 ಆರೋಪಿಗಳು), ಶಹಜಹಾನ್‌ಪುರ (200 ಆರೋಪಿಗಳು) ಮತ್ತು ಕೌಶಾಂಬಿ (24 ಆರೋಪಿಗಳು, ಮೂವರು ಬಂಧನ) ಸೇರಿವೆ.

ಉತ್ತರಾಖಂಡದ ಕಾಶಿಪುರದಲ್ಲಿಯೂ ಒಂದು ಪ್ರಕರಣ ದಾಖಲಾಗಿದೆ. ಇದರಲ್ಲಿ ಪೊಲೀಸರು 401 ಆರೋಪಿಗಳನ್ನು ಹೆಸರಿಸಿ, ಏಳು ಜನರನ್ನು ಬಂಧಿಸಿದ್ದಾರೆ.

ಗುಜರಾತ್‌ನ ಗೋಧ್ರಾದಲ್ಲಿ (88 ಜನರ ಮೇಲೆ ಆರೋಪ, 17 ಜನರ ಬಂಧನ) ಮತ್ತು ಬರೋಡಾದಲ್ಲಿ (ಒಬ್ಬ ವ್ಯಕ್ತಿಯ ಮೇಲೆ ಆರೋಪ ಮತ್ತು ಬಂಧನ) ಪ್ರಕರಣ ದಾಖಲಾಗಿದೆ. ಮುಂಬೈನ ಬೈಕುಲ್ಲಾ ಪ್ರದೇಶದಲ್ಲಿ, ಒಬ್ಬ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಉತ್ತರ ಪ್ರದೇಶದ ಬರೇಲಿಯಲ್ಲಿ ಶುಕ್ರವಾರ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು ಮತ್ತು ಪೊಲೀಸರು 1700ರಷ್ಟು ಜನರ ಮೇಲೆ ಪ್ರಕರಣದ ದಾಖಲಿಸಿ, 50 ಜನರನ್ನು ಬಂಧಿಸಿದ್ದಾರೆ.

ಹಾಗಾಗಿ, ಇತ್ತೀಚಿನ ವರದಿಗಳ ಪ್ರಕಾರ, ದೇಶದಾದ್ಯಂತ ಸುಮಾರು 28 ಎಫ್ಐಆರ್‌ಗಳಲ್ಲಿ 3000ಕ್ಕೂ ಅಧಿಕ ಮುಸ್ಲಿಮರ ಮೇಲೆ ಪ್ರಕರಣ ದಾಖಲಿಸಲಾಗಿದೆ.

“ಪ್ರವಾದಿಯವರ ಮೇಲಿನ ಪ್ರೀತಿ ಮತ್ತು ಗೌರವವನ್ನು ವ್ಯಕ್ತಪಡಿಸುವ ಜನರನ್ನು ಗುರಿಯಾಗಿಸಿಕೊಳ್ಳುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಶಾಂತಿಯುತ ಧಾರ್ಮಿಕ ಅಭಿವ್ಯಕ್ತಿಯನ್ನು ಎಂದಿಗೂ ಅಪರಾಧೀಕರಿಸಬಾರದು” ಎಂದು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌ನ ಕಾರ್ಯದರ್ಶಿ ನದೀಮ್ ಖಾನ್ ಹೇಳಿದ್ದಾರೆ.

ವಾಂಗ್‌ಚುಕ್ ಬಂಧನವು ಲಡಾಖ್‌ನ ದೃಢಸಂಕಲ್ಪವನ್ನು ತಡೆಯುವುದಿಲ್ಲ: ಕಾಂಗ್ರೆಸ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...