Homeಮುಖಪುಟಎನ್‌ಎಎಲ್‌ಎಸ್‌ಎಆರ್‌ ಘಟಿಕೋತ್ಸವದ ಆಹ್ವಾನವನ್ನು ನಾನು ಸ್ವೀಕರಿಸಿರಲೇ ಇಲ್ಲ: ಸಿಜೆಐ ಸೂರ್ಯ ಕಾಂತ್

ಎನ್‌ಎಎಲ್‌ಎಸ್‌ಎಆರ್‌ ಘಟಿಕೋತ್ಸವದ ಆಹ್ವಾನವನ್ನು ನಾನು ಸ್ವೀಕರಿಸಿರಲೇ ಇಲ್ಲ: ಸಿಜೆಐ ಸೂರ್ಯ ಕಾಂತ್

- Advertisement -
- Advertisement -

ಎನ್‌ಎಎಲ್‌ಎಸ್‌ಎಆರ್‌ ಕಾನೂನು ವಿಶ್ವವಿದ್ಯಾಲಯದ ಮುಂಬರುವ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ನಾನು ಎಂದಿಗೂ ಒಪ್ಪಿಗೆ ನೀಡಿರಲಿಲ್ಲ ಎಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳ ವಿರೋಧದ ನಡುವೆಯೂ ಅವರು ಹೈದರಾಬಾದ್ ಕಾನೂನು ಶಾಲೆಯ ಸಮಾರಂಭದಲ್ಲಿ ಭಾಗವಹಿಸುತ್ತಾರೆಯೇ ಎಂಬ ಬಗ್ಗೆ ಹಲವು ದಿನಗಳಿಂದ ಇದ್ದ ಊಹಾಪೋಹಗಳಿಗೆ ಅಂತ್ಯ ಹಾಡಿದ್ದಾರೆ.

“ನಾನು ಘಟಿಕೋತ್ಸವಕ್ಕೆ ಹಾಜರಾಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ” ಎಂದು ಸೂರ್ಯ ಕಾಂತ್ ಅವರನ್ನು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. “ಮೊದಲಿಗೆ ನಾನು ವಿಶ್ವವಿದ್ಯಾಲಯದ ಆಹ್ವಾನವನ್ನು ಸ್ವೀಕರಿಸಿಲ್ಲ” ಎಂದು ಹೇಳಿದ್ದಾರೆ.

ಸಂಪ್ರದಾಯದಂತೆ, ಆಗಸ್ಟ್ ಅಂತ್ಯ ಅಥವಾ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ಸಿಜೆಐ ಅವರನ್ನು ಆಹ್ವಾನಿಸಿರುವುದಾಗಿ ಎನ್‌ಎಎಲ್‌ಎಸ್‌ಎಆರ್‌ ನಾಲ್ಕು ದಿನಗಳ ಹಿಂದೆ ದೃಢಪಡಿಸಿತ್ತು. ವಿಶ್ವವಿದ್ಯಾಲಯದ ಸುಮಾರು 1,400 ವಿದ್ಯಾರ್ಥಿಗಳಲ್ಲಿ ಸುಮಾರು 400 ಮಂದಿ ಅವರ ಉಪಸ್ಥಿತಿಯನ್ನು ವಿರೋಧಿಸಿದ್ದರು. ಜುಲೈ 20 ರಂದು ಸಂಸತ್ತಿಗೆ ವಿದ್ಯಾರ್ಥಿಗಳು ನಡೆಸಿದ ಮೆರವಣಿಗೆಗೆ ಸಂಬಂಧಿಸಿದ ಅರ್ಜಿಗಳನ್ನು ವಿಚಾರಣೆ ನಡೆಸುವಾಗ ಮತ್ತು ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಗಳ ಕುರಿತ ಅವರ ಹೇಳಿಕೆಗಳನ್ನು ಉಲ್ಲೇಖಿಸಿದ್ದ ವಿದ್ಯಾರ್ಥಿಗಳು, ಸೂರ್ಯಕಾಂತ್ ಅವರು ಅತಿಥಿಯಾಗಿ ಬರುವುದನ್ನು ವಿರೋಧಿಸಿದ್ದರು.

ಬಿಜೆಪಿಯ ಸಂಸದರೂ ಆಗಿರುವ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಅಧ್ಯಕ್ಷರೂ ಆದ ಮನನ್ ಕುಮಾರ್ ಮಿಶ್ರಾ ಅವರು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಎನ್‌ಎಎಲ್‌ಎಸ್‌ಎಆರ್‌ನ 2026 ಪದವೀಧರರನ್ನು ದಾಖಲಿಸಿಕೊಳ್ಳದಂತೆ ನಿರ್ದೇಶಿಸಿದ ನಂತರ ವಿವಾದ ಹೆಚ್ಚಾಯಿತು. ವಿರೋಧದ ನಂತರ ಮಿಶ್ರಾ ತಮ್ಮ ನಿರ್ದೇಶನವನ್ನು ಹಿಂತೆಗೆದುಕೊಂಡು ವಿದ್ಯಾರ್ಥಿಗಳ ಕ್ಷಮೆಯಾಚಿಸಿದರು.

ಆಗಸ್ಟ್ 14 ರಂದು ಬಿಸಿಐನ ಕ್ರಮವನ್ನು ಸೂರ್ಯಕಾಂತ್ ಅವರೇ ಟೀಕಿಸಿದರು. “ಸಂಪೂರ್ಣವಾಗಿ ಅನಗತ್ಯ” ಎಂದು ಕರೆದ ಅವರು, ವಿದ್ಯಾರ್ಥಿಗಳು ಪ್ರತಿಭಟಿಸುವ ಹಕ್ಕನ್ನು ಹೊಂದಿದ್ದಾರೆ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅದಾನಿ-ಎಲ್‌ಐಸಿ ತನಿಖಾ ವರದಿ: ಪತ್ರಕರ್ತ ರವಿ ನಾಯರ್ ಮನೆಗಳ ಮೇಲೆ ಗುಜರಾತ್ ಪೊಲೀಸರ ದಾಳಿ, ಡಿಜಿಟಲ್ ಉಪಕರಣಗಳ ವಶ

ಅದಾನಿ ಸಮೂಹ ಹಾಗೂ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ (ಎಲ್‌ಐಸಿ) ನಡುವಿನ ಹೂಡಿಕೆ ವ್ಯವಹಾರಕ್ಕೆ ಸಂಬಂಧಿಸಿದಂತೆ ವಾಷಿಂಗ್ಟನ್ ಪೋಸ್ಟ್‌ನಲ್ಲಿ ತನಿಖಾ ವರದಿ ಪ್ರಕಟಿಸಿದ್ದ ಸ್ವತಂತ್ರ ಪತ್ರಕರ್ತ ರವಿ ನಾಯರ್ ಅವರ ದೆಹಲಿ ಮತ್ತು ಕೇರಳದಲ್ಲಿರುವ...

ಗುಜರಾತ್ | ನಕಲಿ ಸರ್ಕಾರಿ ಕಚೇರಿಗಳನ್ನು ಸ್ಥಾಪಿಸಿ ಸರ್ಕಾರದ ಅನುದಾನ ಲೂಟಿ; ಬೃಹತ್ ಹಗರಣ ಬಯಲು

ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ನೀರಾವರಿ ಮತ್ತು ಜಲಸಂಪನ್ಮೂಲ ಇಲಾಖೆಯ ಹೆಸರಿನಲ್ಲಿ 6 ನಕಲಿ ಸರ್ಕಾರಿ ಕಚೇರಿಗಳನ್ನು ಸೃಷ್ಟಿಸಿ, ಕೋಟ್ಯಂತರ ರೂಪಾಯಿ ಸರ್ಕಾರಿ ಅನುದಾನವನ್ನು ಲೂಟಿ ಮಾಡಿರುವುದು ಪತ್ತೆಯಾಗಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ...

ಎರಡು ವರ್ಷಗಳ ವಿಳಂಬದ ನಂತರ ಹಣಕಾಸು ವರದಿ ಬಿಡುಗಡೆ ಮಾಡಿದ ಪಿಎಂ ಕೇರ್ಸ್

ಎರಡು ವರ್ಷಗಳ ವಿಳಂಬದ ನಂತರ ಪಿಎಂ ಕೇರ್ಸ್ ನಿಧಿಯು ತನ್ನ 2023-24 ಮತ್ತು 2024-25ರ ಹಣಕಾಸು ವರ್ಷಗಳ ಆಡಿಟ್ ವರದಿಗಳನ್ನು (ಲೆಕ್ಕಪರಿಶೋಧನಾ ವರದಿ) ಆಗಸ್ಟ್ 17ರಂದು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. ಪಿಎಂ...

ಭಾರತ ಚುನಾವಣಾ ವ್ಯವಸ್ಥೆಯನ್ನು ಹೊಗಳಿದ ಟ್ರಂಪ್: ಜ್ಞಾನೇಶ್ ಕುಮಾರ್ ಜೊತೆಗೆ EVMಅನ್ನು ತೆಗೆದುಕೊಂಡು ಹೋಗಿ ಎಂದು ಕಾಲೆಳೆದ ಕಾಂಗ್ರೆಸ್

ಭಾರತದ ಚುನಾವಣಾ ವ್ಯವಸ್ಥೆ ಹಾಗೂ ಮತದಾರರ ಫೋಟೋ ಗುರುತಿನ ಚೀಟಿ (Voter ID) ಕಡ್ಡಾಯ ನಿಯಮವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಆದರೆ, ಟ್ರಂಪ್ ಅವರ ಈ ಹೇಳಿಕೆಯನ್ನು ಇಟ್ಟುಕೊಂಡು...

ಬಿಜೆಪಿ ವಿರುದ್ಧ ಹೋರಾಟಕ್ಕೆ ಕರೆ ನೀಡಿದ ತ್ರಿಪುರ ಮಾಜಿ ಸಿಎಂ ಮಾಣಿಕ್ ಸರ್ಕಾರ್ ವಿರುದ್ಧ ಪ್ರಕರಣ ದಾಖಲು: ಬಿಜೆಪಿಯ ಕೀಳು ಮಟ್ಟದ ರಾಜಕೀಯ ಎಂದ ಸಿಪಿಐ(ಎಂ)

ತ್ರಿಪುರದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಐ(ಎಂ) ಪಾಲಿಟ್‌ಬ್ಯೂರೋ ಹಿರಿಯ ಸದಸ್ಯ ಮಾಣಿಕ್ ಸರ್ಕಾರ್ ಅವರು ಇತ್ತೀಚೆಗೆ ಸಾರ್ವಜನಿಕ ರ್ಯಾಲಿಯೊಂದರಲ್ಲಿ ನೀಡಿದ್ದ ಹೇಳಿಕೆಯನ್ನು ಆಧರಿಸಿ, ಅವರ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಣಿ...

ಮುಹಮ್ಮದ್ ದೀಪಕ್‌ಗೆ 2026 ನೇ ಸಾಲಿನ ‘ರೆಹಮತ್-ಎ-ಆಲಂ ಶಾಂತಿ ಪ್ರಶಸ್ತಿ’

ಆಲ್ ಇಂಡಿಯಾ ಬಾಜ್ಮ್-ಎ-ರೆಹಮತ್-ಎ-ಆಲಂ ಸಂಘಟನೆಯು, ಮುಹಮ್ಮದ್ ದೀಪಕ್ ಎಂದೇ ಜನಪ್ರಿಯರಾಗಿರುವ ದೀಪಕ್ ಕುಮಾರ್ ಅವರಿಗೆ 2026 ರ ರೆಹಮತ್-ಎ-ಆಲಂ ಶಾಂತಿ ಪ್ರಶಸ್ತಿಯನ್ನು ಘೋಷಿಸಿದೆ. ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನಾಚರಣೆಯಾದ ಮಿಲಾದ್-ಉನ್-ನಬಿಯನ್ನು ಗುರುತಿಸಲು ಆಯೋಜಿಸಲಾದ...

ಸ್ವಾತಂತ್ರ್ಯ ದಿನಾಚರಣೆಯಲ್ಲಿ ದಲಿತರಿಗೆ ಅವಮಾನ; ಬಲವಂತವಾಗಿ ನೆಲದ ಮೇಲೆ ಕೂರಿಸಿದ ಐವರ ವಿರುದ್ಧ ಪ್ರಕರಣ ದಾಖಲು

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ದಲಿತ ಸಮುದಾಯದ ಇಬ್ಬರಿಗೆ ಜಾತಿ ನಿಂದನೆ ಮಾಡಿದ್ದು, ಅವರು ಕುಳಿತಿದ್ದ ಕುರ್ಚಿಗಳನ್ನು ಖಾಲಿ ಮಾಡಿಸಿ ನೆಲದ ಮೇಲೆ ಕೂರಿಸಿದ್ದಾರೆ. ಈ ಬಗ್ಗೆ...

ಬಿಹಾರ NEET ಪ್ರತಿಭಟನೆ: ವಿದ್ಯಾರ್ಥಿಗಳ ವಿರುದ್ಧ AK-47 ಬಳಸಿದ್ದನ್ನು ಸುಪ್ರೀಂನಲ್ಲಿ ಒಪ್ಪಿಕೊಂಡ ಬಿಹಾರ ಸರ್ಕಾರ

ಬಿಹಾರದಲ್ಲಿ ನಡೆದ NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು AK-47 ರೈಫಲ್‌ನಿಂದ ಗಾಳಿಯಲ್ಲಿ ನಾಲ್ಕು ಸುತ್ತು ಗುಂಡು ಹಾರಿಸಿರುವುದಾಗಿ ಬಿಹಾರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ...

ಕರಿಯಪ್ಪ ಗುಡಿಮನಿ ಸೇರಿದಂತೆ ಮೂವರು ಹೋರಾಟಗಾರರಿಗೆ ಹಂಪಿ ವಿವಿ ಸನ್ಮಾನ

ಹಂಪಿ ಕನ್ನಡ ವಿಶ್ವವಿದ್ಯಾಲಯ ಆಗಸ್ಟ್‌ 15 ರಂದು ಹಿರಿಯ ದಲಿತ ಹೋರಾಟಗಾರರಾದ ಕರಿಯಪ್ಪ ಗುಡಿಮನೆ, ದೇಸಾಯಿ ಗುಂಡೂರಾವ್‌, ಹೆಚ್.‌ ಪಿ. ಶಿಕಾರಿ ಮತ್ತು ಶೇಖಪ್ಪರನ್ನು ಸಾಮಾಜಿಕ ಹೋರಾಟಕ್ಕೆ ತಮ್ಮ ಜೀವನವನ್ನು ಸವೆಸಿದ ಹಿನ್ನೆಲೆಯಲ್ಲಿ...

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಯಲು ಸರ್ಕಾರ ಮಧ್ಯಪ್ರವೇಶಿಸಬೇಕು; ಮುಖ್ಯಮಂತ್ರಿಗಳಿಗೆ ನಾಗರಿಕ ಸಂಘಟನೆಗಳ ಮನವಿ

"ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದ್ದು, ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು" ಎಂದು ನಾಗರಿಕ ಸಂಘಟನೆಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ...