Homeಮುಖಪುಟಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು :...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

- Advertisement -
- Advertisement -

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10) ತನಿಖೆ ಆರಂಭಿಸಿದ್ದಾರೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ತನಿಖಾಧಿಕಾರಿಗಳು ಕಾರ್ಯಾಚರಣೆಯ ಸಮಯದಲ್ಲಿ ಎರಡೂ ಸ್ಥಳಗಳಲ್ಲಿ ಹಾಜರಿದ್ದ ಇಡಿ ಸಿಬ್ಬಂದಿಯನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಗಳು ಹೇಳಿವೆ.

ಶನಿವಾರ ಬೆಳಿಗ್ಗೆ, ಕೋಲ್ಕತ್ತಾದ ಶೇಕ್ಸ್‌ಪಿಯರ್ ಸರನಿ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರತೀಕ್ ಜೈನ್ ಅವರ ಮನೆಗೆ ಭೇಟಿ ನೀಡಿ ಸಿಸಿಟಿವಿ ದೃಶ್ಯಾವಳಿಗಳು ಮತ್ತು ಡಿವಿಆರ್ ರೆಕಾರ್ಡಿಂಗ್‌ಗಳನ್ನು ಸಂಗ್ರಹಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

“ಮನೆಯ ಸಿಬ್ಬಂದಿ ಮತ್ತು ಭದ್ರತಾ ಸಿಬ್ಬಂದಿಯ ಹೇಳಿಕೆಗಳನ್ನು ಸಹ ದಾಖಲಿಸಲಾಗಿದೆ. ಗುರುತಿಸುವಿಕೆ ಪೂರ್ಣಗೊಂಡ ನಂತರ, ಆರೋಪಿಗಳಿಗೆ ನೋಟಿಸ್ ನೀಡಲಾಗುವುದು” ಎಂದು ಅಧಿಕಾರಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನೀಡಿದ ದೂರುಗಳ ಆಧಾರದ ಮೇಲೆ ಪೊಲೀಸರು ಅಪರಿಚಿತ ಇಡಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಗುರುವಾರ (ಜ.8) ಜೈನ್ ಅವರ ಲೌಡನ್ ಸ್ಟ್ರೀಟ್‌ನ ಮನೆ ಮತ್ತು ಅವರ ಸಾಲ್ಟ್ ಲೇಕ್ ಕಚೇರಿ ಮೇಲೆ ಇಡಿ ತಂಡ ನಡೆಸಿದ ದಾಳಿಗೆ ಸಂಬಂಧಿಸಿದಂತೆ, ಶೇಕ್ಸ್‌ಪಿಯರ್ ಸರನಿ ಪೊಲೀಸ್ ಠಾಣೆಯಲ್ಲಿ ಅಪರಿಚಿತ ಇಡಿ ಅಧಿಕಾರಿಗಳು ಮತ್ತು ಸಿಆರ್‌ಪಿಎಫ್ ಸಿಬ್ಬಂದಿಗಳ ವಿರುದ್ಧ ಮತ್ತು ಬಿಧಾನ್‌ನಗರ ಪೊಲೀಸ್ ವ್ಯಾಪ್ತಿಯ ಎಲೆಕ್ಟ್ರಾನಿಕ್ ಕಾಂಪ್ಲೆಕ್ಸ್ ಪಿಎಸ್‌ನಲ್ಲಿರುವ ಅಪರಿಚಿತ ಇಡಿ ಅಧಿಕಾರಿಗಳ ವಿರುದ್ಧ ಮಮತಾ ಬ್ಯಾನರ್ಜಿ ದೂರು ನೀಡಿದ್ದಾರೆ.

ಶೇಕ್ಸ್‌ಪಿಯರ್ ಸರನಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್‌ಗಳ ಅಡಿಯಲ್ಲಿ ಕ್ರಿಮಿನಲ್ ಬೆದರಿಕೆ, ಕಳ್ಳತನ ಮತ್ತು ಕ್ರಿಮಿನಲ್ ಅತಿಕ್ರಮಣಕ್ಕೆ ಸಂಬಂಧಿಸಿದ ಪ್ರಕರಣಗಳು ಹಾಗೂ ಕಂಪ್ಯೂಟರ್ ಸಂಬಂಧಿತ ಅಪರಾಧಗಳನ್ನು ನಿರ್ವಹಿಸುವ ಐಟಿ ಕಾಯ್ದೆಯ ಸೆಕ್ಷನ್ 66 ರ ಅಡಿಯಲ್ಲಿ ಅನಧಿಕೃತ ಪ್ರವೇಶ ಅಥವಾ ಡೇಟಾ ಹಾನಿಯಂತಹ ಅಪ್ರಾಮಾಣಿಕ ಅಥವಾ ಮೋಸದ ಕೃತ್ಯಗಳನ್ನು ಅಪರಾಧೀಕರಿಸುವ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇದಲ್ಲದೆ, ಗುರುವಾರ ಸಂಜೆ ತಡರಾತ್ರಿ ಪೊಲೀಸರು ಅದೇ ಪೊಲೀಸ್ ಠಾಣೆಯಲ್ಲಿ ಇಡಿ ವಿರುದ್ಧ ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನೀಡುತ್ತಾ, ಗುರುವಾರ ಬೆಳಿಗ್ಗೆ 6:15ರ ಸುಮಾರಿಗೆ ಪ್ರತೀಕ್ ಜೈನ್ ಅವರ ಲೌಡನ್ ಸ್ಟ್ರೀಟ್ ಅಪಾರ್ಟ್‌ಮೆಂಟ್‌ನಲ್ಲಿ ಕೇಂದ್ರೀಯ ಸಂಸ್ಥೆಯ ಸಿಬ್ಬಂದಿ ಶೋಧ ನಡೆಸಿದ್ದರು. ಆದರೆ, ಐದು ಗಂಟೆಗಳ ನಂತರವೇ ಕೋಲ್ಕತ್ತಾ ಪೊಲೀಸರಿಗೆ ಇಮೇಲ್ ಮೂಲಕ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

“ಶೋಧದ ಸುದ್ದಿ ತಿಳಿದ ಕೂಡಲೇ, ಉಪ ಪೊಲೀಸ್ ಆಯುಕ್ತರು (ದಕ್ಷಿಣ) ಸೇರಿದಂತೆ ಪೊಲೀಸ್ ಅಧಿಕಾರಿಗಳು ಇಡಿ ಅಧಿಕಾರಿಗಳೊಂದಿಗೆ ಮಾತನಾಡಲು ಪ್ರತೀಕ್ ಅವರ ಮನೆಗೆ ಹೋದರು. ಅಲ್ಲಿದ್ದ ಇಡಿ ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಅವರನ್ನು ತಡೆದರು, ಒಂದು ಹಂತದಲ್ಲಿ ಅಧಿಕಾರಿಗಳ ಮೇಲೆ ಲಾಠಿ ಪ್ರಹಾರ ನಡೆಸಿದರು” ಎಂದು ಅಧಿಕಾರಿ ಆರೋಪಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಚುನಾವಣೆಗೆ ಸಂಬಂಧಿಸಿದ ದಾಖಲೆಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿಯವರ ಆರೋಪದ ನಂತರ ತನಿಖೆಯನ್ನು ಪ್ರಾರಂಭಿಸಲಾಗಿದೆ.

ಮಮತಾ ಬ್ಯಾನರ್ಜಿಯ ದೂರಿನ ಪ್ರಕಾರ, ಅಪರಿಚಿತ ಇಡಿ ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಜೈನ್ ಅವರ ಅಪಾರ್ಟ್‌ಮೆಂಟ್‌ ಮತ್ತು ಸಾಲ್ಟ್ ಲೇಕ್ ಸೆಕ್ಟರ್ 4ರಲ್ಲಿರುವ ಐ-ಪ್ಯಾಕ್ ಕಚೇರಿಗೆ ಪ್ರವೇಶಿಸಿ, ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಡೇಟಾವನ್ನು ಕದ್ದಿದ್ದಾರೆ ಎಂದು ಆರೋಪಿಸಲಾಗಿದೆ.

ಇಡಿ ಅಧಿಕಾರಿಗಳು ಗುರುತಿನ ಚೀಟಿಗಳನ್ನು ತೋರಿಸಿಲ್ಲ ಮತ್ತು ಶೋಧದ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿಲ್ಲ. ಪೊಲೀಸರು ನ್ಯಾಯಾಲಯ ಹೊರಡಿಸಿದ ಶೋಧ ವಾರಂಟ್ ಸೇರಿದಂತೆ ವಿವರಗಳನ್ನು ಕೋರಿದಾಗ, ಅವರನ್ನು ತಳ್ಳಿ ಒಳಗೆ ಬರದಂತೆ ತಡೆದಿದ್ದಾರೆ ಎಂದು ಹೇಳಲಾಗಿದೆ.

ತನಿಖೆ ಮುಂದುವರೆದಿದ್ದು, ಇಡಿ ಸಿಬ್ಬಂದಿಯ ಪಾತ್ರ ಸೇರಿದಂತೆ ಎಲ್ಲಾ ಅಂಶಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ನಡುವೆ, ಇಡಿ ದಾಳಿಗಳಿಗೆ ಸಂಬಂಧಿಸಿದಂತೆ ತನ್ನ ವಿಚಾರಣೆ ನಡೆಸದೆ ಯಾವುದೇ ಆದೇಶವನ್ನು ಹೊರಡಿಸಬಾರದು ಎಂದು ಕೋರಿ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದೆ.

ಗುರುವಾರ ಬೆಳಿಗ್ಗೆಯಿಂದ ಪಶ್ಚಿಮ ಬಂಗಾಳದ ಆರು ಸ್ಥಳಗಳಲ್ಲಿ ಇಡಿ ದಾಳಿ ನಡೆಸಿದ್ದು, ಲೌಡನ್ ಸ್ಟ್ರೀಟ್‌ನಲ್ಲಿರುವ ಐ-ಪ್ಯಾಕ್‌ ಮತ್ತು ಟಿಎಂಸಿ ಐಟಿ ಸೆಲ್ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮತ್ತು ಕೋಲ್ಕತ್ತಾದ ಸೆಕ್ಟರ್ 4ರ ಗೋದ್ರೇಜ್ ವಾಟರ್‌ಸೈಡ್ ಕಟ್ಟಡದಲ್ಲಿರುವ ಕಂಪನಿಯ ಕಚೇರಿ ಸೇರಿದಂತೆ ವಿವಿದೆಡೆ ದಾಳಿ ನಡೆಸಲಾಗಿದೆ.

ಇಡಿ ಶೋಧದ ಸಮಯದಲ್ಲಿ ಜೈನ್ ಅವರ ನಿವಾಸಕ್ಕೆ ಭೇಟಿ ನೀಡಿದ ಮಮತಾ ಬ್ಯಾನರ್ಜಿ, ಇಡಿ ಅಧಿಕಾರಿಗಳು ಟಿಎಂಸಿಯ ಸೂಕ್ಷ್ಮ ಸಾಂಸ್ಥಿಕ ಡೇಟಾವನ್ನು ಒಳಗೊಂಡಿರುವ ಹಾರ್ಡ್ ಡಿಸ್ಕ್‌ಗಳು ಮತ್ತು ಆಂತರಿಕ ದಾಖಲೆಗಳನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಮತ್ತೊಂದೆಡೆ, ಜೈನ್ ಅವರ ಮನೆಯ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಪೊಲೀಸರ ಸಹಾಯದಿಂದ ಇಡಿ ವಶದಿಂದ ದೋಷಾರೋಪಣೆಗೆ ಸಂಬಂಧಿಸಿದ ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿ, ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಕಲ್ಕತ್ತಾ ಹೈಕೋರ್ಟ್‌ನ ಮೊರೆ ಹೋಗಿ ಸಿಬಿಐ ತನಿಖೆ ನಡೆಸುವಂತೆ ಕೋರಿದೆ. ಇದರ ವಿಚಾರಣೆಯನ್ನು ಹೈಕೋರ್ಟ್‌ ಜನವರಿ 14ಕ್ಕೆ ಮುಂದೂಡಿದೆ.

ಶನಿವಾರ ಇಡಿ ಸುಪ್ರೀಂ ಕೋರ್ಟ್‌ಗೂ ಅರ್ಜಿ ಸಲ್ಲಿಸಿದ್ದು, ಮಮತಾ ಬ್ಯಾನರ್ಜಿ ಸರ್ಕಾರ ತನ್ನ ಕರ್ತವ್ಯಕ್ಕೆ ಅಡ್ಡಿಪಡಿಸಿದೆ ಎಂದು ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...