Homeಮುಖಪುಟ2017ರಲ್ಲಿಯೇ ಆಕ್ಸಿಜನ್ ಕೊರತೆ ಬಗ್ಗೆ ದನಿಯೆತ್ತಿದ್ದೆ, ಆದರೆ ನನ್ನನ್ನು ಜೈಲಿಗೆ ಹಾಕಲಾಯಿತು: ಡಾ.ಕಫೀಲ್ ಖಾನ್ ಬೇಸರ

2017ರಲ್ಲಿಯೇ ಆಕ್ಸಿಜನ್ ಕೊರತೆ ಬಗ್ಗೆ ದನಿಯೆತ್ತಿದ್ದೆ, ಆದರೆ ನನ್ನನ್ನು ಜೈಲಿಗೆ ಹಾಕಲಾಯಿತು: ಡಾ.ಕಫೀಲ್ ಖಾನ್ ಬೇಸರ

2017ರಲ್ಲಿ ಗೋರಖ್ ಪುರದ ಬಿಆರ್‌ಡಿ ವೈದ್ಯಕೀಯ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯುಂಟಾಗಿ ತಾಯಂದಿರ ಎದುರೇ 70 ಎಳೆಗೂಸುಗಳು ಜೀವಬಿಟ್ಟಿದ್ದವು.

- Advertisement -
- Advertisement -

ದೇಶದಲ್ಲಿ ಉದ್ಭವಿಸಿರುವ ಕೋವಿಡ್ ಎರಡನೇ ಅಲೆಯಿಂದಾಗಿ ದೇಶದ ಆರೋಗ್ಯ ವ್ಯವಸ್ಥೆ ಬಿಕ್ಕಟ್ಟಿಗೆ ಸಿಲುಕಿದೆ.  ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಿದಂತೆಲ್ಲಾ ಬೆಡ್‌ಗಳ ಕೊರತೆ, ಆಕ್ಸಿಜನ್, ರೆಮ್‌ಡಿಸಿವಿರ್, ಲಸಿಕೆ ಕೊರತೆಯ ಆಹಾಕಾರ ಎದ್ದಿದೆ. ಕೊರೊನಾ ದೇಶಕ್ಕೆ ಪರಿಚಯವಾಗಿ 15 ತಿಂಗಳಾದರೂ ಏಕೆ ಸರ್ಕಾರಗಳು ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲಿಲ್ಲ ಎಂಬ ಗಂಭೀರ ಪ್ರಶ್ನೆಗಳು ಕೇಳಿಬಂದಿವೆ. ಇದೇ ಸಂದರ್ಭದಲ್ಲಿ 2017ರಲ್ಲಿಯೇ ಆಕ್ಸಿಜನ್ ಕೊರತೆ ಬಗ್ಗೆ ದನಿಯೆತ್ತಿದ್ದೆ, ಆದರೆ ನನ್ನನ್ನು ಜೈಲಿಗೆ ಹಾಕಲಾಯಿತು ಎಂದು ಉತ್ತರ ಪ್ರದೇಶದ ಜನಪರ ವೈದ್ಯ ಡಾ.ಕಫೀಲ್ ಖಾನ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸೋಮವಾರ ರಾತ್ರಿ ಟ್ವೀಟ್ ಮಾಡಿರುವ ಅವರು, “2017ರಲ್ಲಿ ಆಕ್ಸಿಜನ್ ಸಂಗ್ರಹ ಕೊರತೆಯ ಬಿಕ್ಕಟ್ಟಿನ ಬಗ್ಗೆ ಪ್ರಶ್ನೆ ಎತ್ತಿದ್ದಾಗ ಯಾರೂ ನನ್ನನ್ನು ಗಂಭೀರವಾಗಿ ಪರಿಗಣಿಸಲಿಲ್ಲ, ಬದಲಿಗೆ ನನ್ನನ್ನು ಜೈಲಿಗೆ ಹಾಕಲಾಯಿತು. ಅಂದಿನಿಂದಲೂ ಹಲವಾರು ಜನ ‘ಎಲ್ಲರಿಗೂ ಉತ್ತಮ ಆರೋಗ್ಯ ವ್ಯವಸ್ಥೆ ಮತ್ತು ನೀತಿಗಾಗಿ’ ಒತ್ತಾಯಿಸುತ್ತಲೇ ಇದ್ದೇವೆ. ಇಂದು ಇಡೀ ದೇಶವು ಆಕ್ಸಿಜನ್ ಕೊರತೆಯಿಂದ ಬಳಲುತ್ತಿದೆ. ಆರೋಗ್ಯ ಸಚಿವ ಹರ್ಷವರ್ಧನ್‌ರವರೆ ದಯವಿಟ್ಟು ಎಚ್ಚರಗೊಳ್ಳಿ” ಎಂದು ಮನವಿ ಮಾಡಿದ್ದಾರೆ.

2017ರಲ್ಲಿ ಗೋರಖ್ ಪುರದ ಬಿಆರ್‌ಡಿ ವೈದ್ಯಕೀಯ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯುಂಟಾಗಿ ತಾಯಂದಿರ ಎದುರೇ 70 ಎಳೆಗೂಸುಗಳು ಜೀವಬಿಟ್ಟಿದ್ದವು. ತಮ್ಮ ಮಕ್ಕಳನ್ನು ಬದುಕಿಸಿಕೊಡುವಂತೆ ತಾಯಂದಿರು ಗೋಗರೆಯುತ್ತಿದ್ದರು, ಆದರೆ ಒಂದೇ ಒಂದು ಸಿಲಿಂಡರ್ ಇತ್ತು ಹೀಗಾಗಿ ಕೆಲ ಮಕ್ಕಳನ್ನು ಮಾತ್ರವೇ ಬದುಕಿಸಲಾಯಿತು ಮತ್ತು ಇತರ ಮಕ್ಕಳು ಸಾವನಪ್ಪಿದ್ದರು. ಈ ಮಕ್ಕಳ ದುರಂತದ ಪ್ರಕರಣದಲ್ಲಿ ಬಿಆರ್‌ಡಿ ವೈದ್ಯಕೀಯ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಮತ್ತು ವೈದ್ಯಕೀಯ ನಿರ್ಲಕ್ಷ್ಯದ ಆರೋಪದ ಮೇಲೆ ಡಾ. ಕಫೀಲ್‌ ಖಾನ್ ಅವರು‌ ಅಮಾನತು ಮತ್ತು 9 ತಿಂಗಳ ಜೈಲುವಾಸಕ್ಕೆ ಒಳಗಾಗಿದ್ದರು. ಆದರೆ ನ್ಯಾಯಾಲಯ ಅವರು ಅಮಾಯಕರು ಮತ್ತು ಉದ್ದೇಶಪೂರ್ವಕವಾಗಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿ ಪ್ರಕರಣ ಕೈಬಿಟ್ಟಿತ್ತು.

ಇದನ್ನೂ ಓದಿ: ಬಿಆರ್‌ಡಿ ಆಸ್ಪತ್ರೆಯಲ್ಲಿ ಮಕ್ಕಳ ಸಾವಿನ ದುರಂತ: ಡಾ.ಕಫೀಲ್ ಖಾನ್ ಆರೋಪಮುಕ್ತ. ಆದರೆ…

ಆಗ ಡಾ.ಕಫೀಲ್ ಖಾನ್ ದೇಶಾದ್ಯಂತದ ಎಲ್ಲಾ ಆಸ್ಪತ್ರೆಗಳಲ್ಲಿ ಆಕ್ಸಿಜನ ಕೊರತೆ ನೀಗಿಸಲು ದೊಡ್ಡ ಮಟ್ಟದ ಸಂಗ್ರಹಕ್ಕೆ ಆಗ್ರಹಿಸಿದ್ದರು. ಅಲ್ಲದೇ ಜನಪರ ಆರೋಗ್ಯ ನೀತಿಗಾಗಿ ಒತ್ತಾಯಿಸಿದ್ದರು. ಆದರೆ ಸಿಎಎ ವಿರುದ್ಧ ಅವರು ಮಾತನಾಡಿದ್ದಕ್ಕಾಗಿ ಅವರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಅವರನ್ನು ಮತ್ತೊಮ್ಮೆ ಜೈಲಿಗೆ ಹಾಕಲಾಗಿತ್ತು. ತದನಂತರವು ಅವರು ನಿರಪರಾಧಿಗಳಾಗಿ ಬಿಡುಗಡೆಯಾಗಿದ್ದಾರೆ.

ಈಗ ಕೊರೊನಾ ಸಾಂಕ್ರಾಮಿಕ ಉಲ್ಭಣಿಸಿರುವ ಹಿನ್ನೆಲೆಯಲ್ಲಿ ಆಕ್ಸಿಜನ್ ಕೊರತೆ ವಿಷಯ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಆಕ್ಸಿಜನ್ ಇಲ್ಲದ ಕಾರಣಕ್ಕಾಗಿಯೇ ಸಾವಿರಾರು ಜನ ಪ್ರಾಣ ಬಿಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.


ಇದನ್ನೂ ಓದಿ: ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಕೊರತೆ: ಸರ್ಕಾರ ಮಾಡುತ್ತಿರುವುದೇನು? ಮಾಡಬೇಕಾದುದ್ದೇನು?

Also Read: Dr. Kafeel Khan: Shocking status of Indian Health System- Solutions and Approach

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...