Homeಮುಖಪುಟರೈತರ ವಿರುದ್ದ ಹಾಡು ಬರೆಯದ್ದಕ್ಕೆ ವಿಶೇಷ ಪ್ರಚಾರ ಸಮಿತಿಯ ಅಧ್ಯಕ್ಷನನ್ನು ವಜಾ ಮಾಡಿದ ಹರ್ಯಾಣ ಸರ್ಕಾರ!

ರೈತರ ವಿರುದ್ದ ಹಾಡು ಬರೆಯದ್ದಕ್ಕೆ ವಿಶೇಷ ಪ್ರಚಾರ ಸಮಿತಿಯ ಅಧ್ಯಕ್ಷನನ್ನು ವಜಾ ಮಾಡಿದ ಹರ್ಯಾಣ ಸರ್ಕಾರ!

ಪ್ರಧಾನಿ ನರೇಂದ್ರ ಮೋದಿಯ ಪರ ಹಾಡು ರಚಿಸುವುದಕ್ಕಾಗಿ ನನಗೆ ತಿಂಗಳಿಗೆ ಒಂದು ಲಕ್ಷ ರೂ. ವೇತನ ನೀಡಲಾಗುತ್ತಿತ್ತು ಎಂದು ರಾಕಿ ಮಿತ್ತಲ್ ಹೇಳಿದ್ದಾರೆ

- Advertisement -
- Advertisement -

ರೈತರ ವಿರುದ್ಧ ಹಾಡುಗಳನ್ನು ಬರೆಯದ ಕಾರಣಕ್ಕಾಗಿ ಹರ್ಯಾಣ ಸರಕಾರದ ವಿಶೇಷ ಪ್ರಚಾರ ಸಮಿತಿಯ ಅಧ್ಯಕ್ಷರಾಗಿದ್ದ ತನ್ನನ್ನು ಅಧ್ಯಕ್ಷ ಸ್ಥಾನದಿಂದ ವಜಾ ಮಾಡಿದ್ದಾರೆ ಎಂದು ಸ್ವತಃ ರಾಕಿ ಮಿತ್ತಲ್( ಜೈ ಭಗವಾನ್) ಸ್ಪಷ್ಟನೆ ನೀಡಿದ್ದಾರೆ. ವಿಶೇಷ ಪ್ರಚಾರ ಸಮಿತಿಯ ಅಧ್ಯಕ್ಷಾಗಿದ್ದ ಅ‌‌ವರನ್ನು ಸೋಮವಾರದಂದು ಹರ್ಯಾಣ ಸರಕಾರ ತತ್‌ಕ್ಷಣಕ್ಕೆ ಜಾರಿಗೆ ಬರುವಂತೆ ಅಧಿಕಾರದಿಂದ ವಜಾ ಮಾಡಿತ್ತು.

ಹರ್ಯಾಣದ ಮಾಹಿತಿ, ಸಾರ್ವಜನಿಕ ಸಂಪರ್ಕ ಮತ್ತು ಭಾಷೆ ವಿಭಾಗದ ಸಹಾಯಕ ಪ್ರಧಾನ ಕಾರ್ಯದರ್ಶಿಯಾಗಿರುವ ಧೀರ ಖಂಡೇಲ್ವಾಲ್ ಎಂಬವರು ರಾಕಿ ಮಿತ್ತಲ್ ಅವರನ್ನು ವಿಶೇಷ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನದಿಂದ ತತ್‌‌ಕ್ಷಣಕ್ಕೆ ಜಾರಿಗೆ ಬರುವಂತೆ ವಜಾ ಮಾಡಿ ಆದೇಶ ಹೊರಡಿಸಿದ್ದರು. ಆದರೆ ಅವರನ್ನು ಹುದ್ದೆಯಿಂದ ಕೆಳಗಿಳಿಸಿದ್ದಕ್ಕೆ ಕಾರಣ ನೀಡಿರಲಿಲ್ಲ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ್ದ ಟ್ರೂಡೊ: ಭಾರತ-ಕೆನಡಾ ರಾಜಕೀಯ ಸಂಬಂಧದಲ್ಲಿ ಬಿರುಕು!

“ಡಿಸೆಂಬರ್‌ 4 ರಂದು ಬಿಜೆಪಿಯ ಹಿರಿಯ ಕಾರ್ಯಕಾರಿಯೋರ್ವರನ್ನು ಭೇಟಿಯಾಗಲು ತೆರಳಿದ್ದ ವೇಳೆ, ಅವರು ’ರೈತ ಆಂದೋಲನದ ವಿರುದ್ಧ ಹಾಡೊಂದನ್ನು ರಚಿಸು’ ಎಂದಿದ್ದರು. ನಾನೊಬ್ಬ ರೈತ ಹಾಗೂ ಮಧ್ಯವರ್ತಿಯೂ ಆಗಿರುವುದರಿಂದ ನನ್ನಿಂದ ರೈತರ ವಿರುದ್ಧ ಹಾಡು ರಚಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾಗಿ ಅವರು ಹೇಳಿದ್ದಾರೆ.

“ಹಾಡು ರಚಿಸಿ, ಆ ಹಾಡಿನ ಮುಖಾಂತರ ರೈತರಿಗೆ ಮತ್ತು ಮಧ್ಯವರ್ತಿಗಳಿಗೆ ಸರಕಾರದ ನೂತನ ಕೃಷಿ ಕಾಯ್ದೆಯು ನಿಮಗೆ ಲಾಭವನ್ನೇ ತರುತ್ತದೆ ಎಂದು ಪೊಳ್ಳು ಮನವರಿಕೆ ಮಾಡಿಸಬೇಕಿತ್ತು. ನನ್ನ ತಂದೆ ಓರ್ವ ದಲ್ಲಾಳಿಯಾಗಿದ್ದರು ಮತ್ತು ನಮ್ಮದು ರೈತ ಕುಟುಂಬ. ನಾನು ಓಲೈಕೆಗೆ ಮಣಿದು ನಮ್ಮವರ ಬೆನ್ನಿಗೆ ಚೂರಿ ಇರಿಯಲು ಹೇಗೆ ಸಾಧ್ಯ? ನಾನು ರೈತರ ವಿರುದ್ಧ ಹಾಡು ರಚಿಸದ್ದು ನನ್ನ ತಪ್ಪೇ? ಪ್ರಧಾನಿ ನರೇಂದ್ರ ಮೋದಿಯ ಪರ ಹಾಡು ರಚಿಸುವುದಕ್ಕಾಗಿ ನನಗೆ ತಿಂಗಳಿಗೆ ಒಂದು ಲಕ್ಷ ರೂ. ವೇತನ ನೀಡಲಾಗುತ್ತಿತ್ತು” ಎಂದು ರಾಕಿ ಮಿತ್ತಲ್ ಹೇಳಿಕೆಯನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌‌ಪ್ರೆಸ್ ವರದಿ ಮಾಡಿದೆ.

ರಾಕಿ ಮಿತ್ತಲ್ 2014 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನರೇಂದ್ರ ಮೋದಿಯ ಪರವಾಗಿ ಹಾಡುಗಳನ್ನು ರಚಿಸಿದ ಬಳಿಕ ‘ಮೋದಿ ಭಗತ್’ ಎಂದೇ ಪ್ರಸಿದ್ಧರಾಗಿದ್ದರು. ಅವರನ್ನು ವಜಾ ಮಾಡಿರುವ ಕುರಿತು ಬಿಜೆಪಿಯ ಪ್ರಮುಖ ನಾಯಕರಲ್ಲಿ ಪ್ರಶ್ನಿಸಿದ್ದು, ಅವರು ’ನಮಗೆ ಅದರ ಅರಿವಿಲ್ಲ’ ಎಂದಿದ್ದಾರೆಂದು ದಿ ಇಂಡಿಯನ್ ಎಕ್ಸ್‌‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ರೈತರು ವಿಷ ಸೇವಿಸಿದಾಗ ಕಾಳಜಿ ವಹಿಸದವರು ಪಿಜ್ಜಾ ತಿನ್ನುವಾಗ ಟೀಕೆ ಮಾಡುತ್ತಾರೆ – ದಿಲ್ಜಿತ್ ದೋಸಾಂಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...