Homeಕರ್ನಾಟಕಮುಸ್ಲಿಮರು ಸೇರಿದಂತೆ ಎಲ್ಲರಿಗೂ ರಕ್ಷಣೆ ಕೊಡುತ್ತೇವೆ ಎಂದಿದ್ದೆ, ಇದರಲ್ಲಿ ತಪ್ಪೇನಿದೆ?: ಸಿಎಂ ಸಿದ್ದರಾಮಯ್ಯ

ಮುಸ್ಲಿಮರು ಸೇರಿದಂತೆ ಎಲ್ಲರಿಗೂ ರಕ್ಷಣೆ ಕೊಡುತ್ತೇವೆ ಎಂದಿದ್ದೆ, ಇದರಲ್ಲಿ ತಪ್ಪೇನಿದೆ?: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮುಸ್ಲಿಮರು ಸೇರಿದಂತೆ ಎಲ್ಲರಿಗೂ ರಕ್ಷಣೆ ಕೊಡುತ್ತೇವೆ ಎಂದಿದ್ದೆ,ಇದರಲ್ಲಿ ತಪ್ಪೇನಿದೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಹುಬ್ಬಳ್ಳಿಯ ಸಮಾವೇಶದಲ್ಲಿ ನೀಡಿರುವ ಹೇಳಿಕೆ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಅವರು, “ನಾನು ಎಲ್ಲರಿಗೂ ರಕ್ಷಣೆ ಕೊಡುತ್ತೇವೆ ಎಂದಿದ್ದೆ. ಅದನ್ನು ಬಿಟ್ಟು ಬರೆದರೆ ನಾನೇನು ಮಾಡುವುದು?” ಎಂದು ಪ್ರಶ್ನಿಸಿದ್ದಾರೆ.

“ನನ್ನ ಹೇಳಿಕೆಗೆ ಉಪ್ಪು, ಖಾರ ಹಾಕಿ ಪ್ರಚಾರ ಮಾಡುತ್ತಿದ್ದಾರೆ. ನಾನು ಮುಸ್ಲಿಮರು ಸೇರಿದಂತೆ ಎಲ್ಲರಿಗೂ ರಕ್ಷಣೆ ಕೊಡುತ್ತೇವೆ ಎಂದಿದ್ದೆ” ಎಂದು ಸಿಎಂ ಪುನರುಚ್ಚರಿಸಿದ್ದಾರೆ.

ಸೋಮವಾರ ಹುಬ್ಬಳ್ಳಿಯಲ್ಲಿ ನಡೆದ ದಕ್ಷಿಣ ಭಾರತ ಮುಸ್ಲಿಂ ಧರ್ಮ ಗುರುಗಳ ಸಮಾವೇಶದಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, “ಹುಬ್ಬಳ್ಳಿಯ ಪೀರ್ ಬಾಷಾ ದರ್ಗಾಕ್ಕೆ ಅನುದಾನ ಕೊಡುತ್ತೇನೆ. ನಾನು ಹೇಳಿದ ಮೇಲೆ ಕೊಟ್ಟೇ ಕೊಡುತ್ತೇನೆ. ಅಲ್ಪ ಸಂಖ್ಯಾತ ಇಲಾಖೆಗೆ ಈಗಾಗಲೇ 4 ಸಾವಿರ ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಇದನ್ನು ಹಂತ ಹಂತವಾಗಿ 10 ಸಾವಿರ ಕೋಟಿಗೆ ಹೆಚ್ಚಿಸಬೇಕು. ನಿಮ್ಮ ಧಾರ್ಮಿಕ ಕೇಂದ್ರಗಳಿಗೆ ಅನುದಾನ ಸಿಗಬೇಕು. ನೀವು ಭಾರತೀಯರು. ನಿಮಗೂ ಈ ದೇಶದ ಸಂಪತ್ತಿನಲ್ಲಿ ಹಕ್ಕಿದೆ. ನಿಮಗೆ ಅನ್ಯಾಯವಾಗಲು ಬಿಡುವುದಿಲ್ಲ” ಎಂದಿದ್ದರು.

“ಕೇವಲ ಅಕ್ಷರ ಕಲಿತರೆ ಸಾಲದು. ವೈಚಾರಿಕತೆಯಿಂದ ಕೂಡಿದ ಶಿಕ್ಷಣ ನಮಗೆಲ್ಲ ಸಿಗಬೇಕು. ಹಿಂದೂ, ಮುಸ್ಲಿಮರು ಒಂದೇ ತಾಯ ಮಕ್ಕಳು. ಕಾಯಿಲೆ ಬಂದರೆ ನಮ್ಮ ಜಾತಿಯವನ ರಕ್ಷ ಕೊಡಿ ಎಂದು ಕೇಳುತ್ತೇವಾ? ಯಾವುದೇ ರಕ್ತ ಆಗಬಹುದು ಬದುಕಿದರೆ ಸಾಕು ಎನ್ನುತ್ತೇವೆ” ಎಂದು ಸಿಎಂ ಹೇಳಿದ್ದರು.

ಸಿಎಂರಿಂದ ತುಷ್ಟೀಕರಣದ ರಾಜಕಾರಣ : ಬಸವರಾಜ ಬೊಮ್ಮಾಯಿ

ಸಿಎಂ ಹೇಳಿಕೆಗೆ ಬಿಜೆಪಿ ನಾಯಕರು ಅಪಸ್ವರ ಎತ್ತಿದ್ದರು. ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, “ಮುಖ್ಯಮಂತ್ರಿಗಳು ನಿನ್ನೆ ಸಭೆಯೊಂದರಲ್ಲಿ ರಾಷ್ಟ್ರದ ಸಂಪತ್ತಿನಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷವಾಗಿರುವ ಹಕ್ಕು ಕೊಡುವ ಮಾತನಾಡಿದ್ದಾರೆ. ಇದು ತುಷ್ಟೀಕರಣದ ರಾಜಕಾರಣ ಮತ ಬ್ಯಾಂಕಿನ ರಾಜಕಾರಣ. ಮುಖ್ಯಮಂತ್ರಿಯಾಗಿ ಎಲ್ಲರಿಗೂ ನ್ಯಾಯ ಕೊಡುವ ಅವರ ಕರ್ತವ್ಯವನ್ನು ಮರೆತಂತಿದೆ” ಎಂದು ಹೇಳಿದ್ದರು.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ಈಗಾಗಲೇ ಅಲ್ಪಸಂಖ್ಯಾತರಿಗೆ ವಕ್ಪ್ ಬೊರ್ಡ್, ಮೈನಾರಿಟಿ ಕಾರ್ಪೊರೇಷನ್, ಮೈನಾರಿಟಿ ಕಮಿಷನ್ ನಿಂದ ಹಲವಾರು ಕಾರ್ಯಕ್ರಮಗಳ ಮೂಲಕ ಅನುದಾನ ಬರುತ್ತಿದೆ.‌ ಅವರೂ ಕೂಡ ಶಿಕ್ಷಣವನ್ನು ಪಡೆದು ಸ್ವಾವಲಂಬಿ ಆಗಬೇಕೆಂಬ ಆಸೆ ಎಲ್ಲ ಸರ್ಕಾರಗಳ ಉದ್ದೇಶವಾಗಿದೆ. ಆದರೆ, ಇತರ ಸಮುದಾಯಗಳ ಮೇಲೆ ಸವಾರಿ ಮಾಡುವ ರೀತಿಯ ಮುಖ್ಯಮಂತ್ರಿಯ ಮಾತು ಖಂಡನೀಯ ಎಂದು ಎಂದಿದ್ದಾರೆ.

ಎಸ್ಸಿ, ಎಸ್ಟಿ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟಿರುವ ಎಸ್ಸಿಎಸ್ಪಿ, ಟಿಎಸ್‌ಪಿ ಹಣವನ್ನು ಗ್ಯಾರಂಟಿಗಳಿಗೆ ವರ್ಗಾವಣೆ ಮಾಡಿ, ಅವರಿಗೆ ಅನ್ಯಾಯ ಮಾಡಿದ್ದೀರಿ. ಬರ ಪರಿಹಾರಕ್ಕೆ ಹಣ ನೀಡದೇ ಮುಸ್ಲಿಮರ ಓಲೈಕೆಗಾಗಿ ಹೆಚ್ಚಿನ ಅನುದಾನ‌ ನೀಡುವುದಾಗಿ ಹೇಳುತ್ತೀರಿ. ಇದರಿಂದ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗುವುದಲ್ಲದೇ, ಸಾಮಾಜಿಕವಾಗಿ ತಾರತಮ್ಯ ಮಾಡಿದಂತಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬೆಳಗಾವಿ: ಕಾಂಗ್ರೆಸ್-ಬಿಜೆಪಿ ನಡುವೆ ರಾಜಕೀಯ ಕಿತ್ತಾಟಕ್ಕೆ ಕಾರಣವಾದ ಚಾಕು ಇರಿತ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...