Homeಕರ್ನಾಟಕಬುದ್ಧ, ಬಸವ, ಅಂಬೇಡ್ಕರ್ ಹೇಳಿರುವುದನ್ನೇ ನಾನು ಹೇಳಿದ್ದೇನೆ, ಬ್ರಾಹ್ಮಣರನ್ನು ಅವಮಾನಿಸಿಲ್ಲ: ಹೆಚ್‌ಡಿಕೆ ಸ್ಪಷ್ಟನೆ

ಬುದ್ಧ, ಬಸವ, ಅಂಬೇಡ್ಕರ್ ಹೇಳಿರುವುದನ್ನೇ ನಾನು ಹೇಳಿದ್ದೇನೆ, ಬ್ರಾಹ್ಮಣರನ್ನು ಅವಮಾನಿಸಿಲ್ಲ: ಹೆಚ್‌ಡಿಕೆ ಸ್ಪಷ್ಟನೆ

- Advertisement -
- Advertisement -

ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಕುಮಾರಸ್ವಾಮಿ ಅವರು, ಪ್ರಹ್ಲಾದ್ ಜೋಶಿಯವರ ಬಗ್ಗೆ ಮಾತನಾಡುತ್ತ ಬ್ರಾಹ್ಮಣ ಸಮುದಾಯದ ಬಗ್ಗೆ ಮಾತನಾಡಿದ್ದರು. ಇದನ್ನು ಬಿಜೆಪಿ ನಾಯಕರು, ಕುಮಾರಸ್ವಾಮಿ ಬ್ರಾಹ್ಮಣರ ವಿರೋಧಿ ಎಂದು ಆರೋಪಿಸಿದ್ದರು. ಅದಕ್ಕೆ ಇದೀಗ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.

ಕುಮಾರಸ್ವಾಮಿ ಅವರು ಮಾತನಾಡುವ ವೇಳೆ, ”ಪ್ರಹ್ಲಾದ್ ಜೋಶಿಯವರು ನಮ್ಮ ದಕ್ಷಿಣ ಕರ್ನಾಟಕದ ಬ್ರಾಹ್ಮಣರಿದ್ದರಲ್ಲ, ಆ ಸಂಸ್ಕೃತಿಯ ಬ್ರಾಹ್ಮಣರಲ್ಲ. ಬ್ರಾಹ್ಮಣರ ಸಂಸ್ಕಾರದಲ್ಲಿಯೂ ಎರಡು ಮೂರು ಥರ ಇವೆ. ಇವರು ಶೃಂಗೇರಿಯ ಮಠ ಒಡೆದ, ಅಲ್ಲಿನ ವಿಗ್ರಹ ಕೆಡವಿದ ದೇಶಸ್ಥ ಬ್ರಾಹ್ಮಣರ ಗುಂಪಿಗೆ ಸೇರಿದವರು. ಮಹಾತ್ಮ ಗಾಂಧಿಯನ್ನು ಕೊಂದಂತಹ ವರ್ಗಕ್ಕೆ ಸೇರಿದವರು” ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದರು.

ಬಿಜೆಪಿಯು ಹೆಚ್‌ಡಿಕೆ ಅವರನ್ನು ಬ್ರಾಹ್ಮಣ ವಿರೋಧಿ ಎಂದು ಬಿಂಬಿಸಿತ್ತು. ಈ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಕುಮಾರಸ್ವಾಮಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

”ಪೇಶ್ವೆಗಳ ವಂಶಾವಳಿಗೆ ಸಂಬಂಧಪಟ್ಟ ವ್ಯಕ್ತಿಯನ್ನು ಬಿಜೆಪಿ ಪಕ್ಷ ಮುಂದಿನ ಮುಖ್ಯಮಂತ್ರಿ ಮಾಡಲು ಹುನ್ನಾರ ನಡೆಸಿದೆ ಎಂಬುದು ನನ್ನ ಹೇಳಿಕೆ ಆಗಿತ್ತು. ನನ್ನ ಹೇಳಿಕೆಯಲ್ಲಿ ಗೊಂದಲ ಇಲ್ಲ, ಸ್ಪಷ್ಟತೆ ಇತ್ತು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಗಾಂಧಿ ಕೊಂದ, ಶೃಂಗೇರಿ ಮಠ ಒಡೆದ ಬ್ರಾಹ್ಮಣರ ಬಗ್ಗೆ ಎಚ್ಚರಿಕೆಯಿಂದಿರಿ: ಪ್ರಹ್ಲಾದ್ ಜೋಶಿ ವಿರುದ್ಧ ಹೆಚ್‌ಡಿಕೆ ಆಕ್ರೋಶ

”ಕರ್ನಾಟಕ ರಾಜ್ಯದ ಮೇಲೆ, ಅದರಲ್ಲೂ ನಾವೆಲ್ಲರೂ ಶ್ರದ್ಧೆ, ಭಕ್ತಿಯಿಂದ ನಡೆದುಕೊಳ್ಳುವ ಶ್ರೀ ಶೃಂಗೇರಿ ಪೀಠ, ಮತ್ತೂ ಅಲ್ಲಿನ ದೇವಾಲಯಗಳ ಮೇಲೆ ಪೇಶ್ವೆಗಳಿಂದ ಪೈಶಾಚಿಕ ದಾಳಿ ನಡೆದಿತ್ತು. ಇದು ಇತಿಹಾಸ, ಈ ಇತಿಹಾಸವನ್ನು ತಿರುಚಿ ಹೇಳುವ ಅಗತ್ಯ ನನಗಿಲ್ಲ” ಎಂದಿದ್ದಾರೆ.

”ನಾನು ಹೇಳಿದ್ದೇ ಒಂದು, ಕೆಲವರು ತಿರುಚಿ ಅಪಪ್ರಚಾರ ನಡೆಸುತ್ತಿರುವುದೇ ಇನ್ನೊಂದು. ಈ ಒಂದು ಇನ್ನೊಂದರ ನಡುವೆ ಅಜಗಜಾಂತರ ವ್ಯತ್ಯಾಸವಿದೆ. ಸತ್ಯಕ್ಕೂ ಸುಳ್ಳಿಗೂ ಇರುವಷ್ಟೇ ದೂರವಿದೆ. ಪಾಪ.. ಕೆಲವರಿಗೆ ತಿರುಚುವುದೇ ಕೆಲಸ, ಅದೇ ಅವರಿಗೆ ಸರ್ವಸ್ವ. ನಾನು ಏನು ಮಾಡಲಿ? ಸತ್ಯ ಹೇಳಿದ್ದೇನೆ, ಚರ್ಚೆಯಾಗಲಿ” ಎಂದು ಅವರು ಹೇಳಿದ್ದಾರೆ.

”ಶಿವಾಜಿ ಮಹಾರಾಜರು, ಜಗಜ್ಯೋತಿ ಬಸವೇಶ್ವರರು, ಗೌತಮ ಬುದ್ಧ, ಮಹಾತ್ಮ ಗಾಂಧೀಜಿ ಮತ್ತು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನೇ ಬಿಡದವರು ಇವರು. ಇನ್ನು ನನ್ನನ್ನು ಬಿಟ್ಟಾರೆಯೇ? ಕೀಳು ನಿಂದನೆ, ಚಿತಾವಣೆಯಷ್ಟೇ ಇವರ ಆಯುಧಗಳು. ನಿಂದನೆ ಮತ್ತು ನಿಂದಕರ ಬಗ್ಗೆ ನಾನು ಅಂಜುವ ಪೈಕಿ ಅಲ್ಲ” ಎಂದಿದ್ದಾರೆ.

”ನಾನು ಎತ್ತಿದ ವಿಚಾರಕ್ಕೆ ಸಂಬಂಧವೇ ಇಲ್ಲದಂತೆ ಬಿಜೆಪಿಯವರು ಅವೇಶಭರಿತರಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆದರೆ, ವಿಧಾನಸೌಧದಲ್ಲಿ ಬಿಜೆಪಿಯು ಪೇಶ್ವೆಗಳ ವಂಶಾವಳಿಯ ನಾಯಕನ ಪ್ರತಿಷ್ಠಾಪನೆ ಮಾಡಲು ಹೊರಟಿರುವ ನನ್ನ ಪ್ರಶ್ನೆಗೆ ಉತ್ತರ ಕೊಡುವ ದಮ್ಮು ತಾಕತ್ತು ತೋರಿಸುತ್ತಿಲ್ಲ, ಯಾಕೆ? ಇಂಥ ವಿಕೃತಿಗಳಿಗೆ ನಾನು ಸೊಪ್ಪು ಹಾಕುವುದಿಲ್ಲ.”

”ಯಾರೋ ಮಾಡಿದ ಆದೇಶ, ಕಟ್ಟಪ್ಪಣೆಗೆ ಅಂಜಿ ನನ್ನ ಬಗ್ಗೆ ಬಿಜೆಪಿ ನಾಯಕರು ಸರಣಿ ಹೇಳಿಕೆ ನೀಡಬಹುದು. ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿಸಬಹುದು. ಆದರೆ, ಅವರೆಲ್ಲ ತಮ್ಮ ಆತ್ಮಸಾಕ್ಷಿಯನ್ನು ಒಮ್ಮೆ ಪ್ರಶ್ನೆ ಮಾಡಿಕೊಳ್ಳಲಿ. ಪೇಶ್ವೆ ವಂಶಾವಳಿ ನಾಯಕನ ಸರಣಿ ಹುನ್ನಾರಗಳ ಬಗ್ಗೆ ಮಾತನಾಡುವ ಧೈರ್ಯ ಅವರು ತೋರುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ.

”ನನಗೆ ಸೋಲುವ ಭಯವಂತೆ, ಹತಾಶೆಯಂತೆ ಎಂದು ಬೊಗಳೆ ಬಿಟ್ಟುಕೊಂಡು ಕೇಕೆ ಹಾಕಿದರೆ ಜನ ನಂಬುವುದಿಲ್ಲ, ಅವರಿಗೂ ಗರ್ಭಗುಡಿಯಲ್ಲಿ ಏನು ನಡೆಯುತ್ತಿದೆ ಎಂಬುದು ಚೆನ್ನಾಗಿ ಗೊತ್ತು. ಸತ್ಯ ಸಾಯುವುದೂ ಇಲ್ಲ… ಅಲ್ಲವೇ?”

”ಜಗಜ್ಯೋತಿ ಬಸವೇಶ್ವರರು, ಗೌತಮ ಬುದ್ಧ, ಮಹಾತ್ಮ ಗಾಂಧೀಜಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದನ್ನೇ ನಾನು ಹೇಳಿದ್ದೇನೆ. ಇನ್ನು, ಬ್ರಾಹ್ಮಣ ಸಮೂಹವನ್ನು ನಿಂದಿಸುವ ಪ್ರಶ್ನೆ ಎಲ್ಲಿ? ನಾನು ನಿಂದಿಸಿಲ್ಲ, ನಿಂದಿಸುವುದೂ ಇಲ್ಲ. ಮತ್ತೆ ಮತ್ತೆ ಸ್ಪಷ್ಟನೆ ಅನಗತ್ಯ” ಎಂದು ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...