Homeಮುಖಪುಟ'ಪಕ್ಷಗಳನ್ನು ಲೆಕ್ಕಿಸದೆ ನಾನು ಮಹಿಳೆಯರಿಗೆ ಬೆಂಬಲ ನೀಡುತ್ತೇನೆ..'; ಸ್ವಾತಿ ಮಲಿವಾಲ್ ಮೇಲಿನ ಹಲ್ಲೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕಾ

‘ಪಕ್ಷಗಳನ್ನು ಲೆಕ್ಕಿಸದೆ ನಾನು ಮಹಿಳೆಯರಿಗೆ ಬೆಂಬಲ ನೀಡುತ್ತೇನೆ..’; ಸ್ವಾತಿ ಮಲಿವಾಲ್ ಮೇಲಿನ ಹಲ್ಲೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕಾ

- Advertisement -
- Advertisement -

“ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತರೊಬ್ಬರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದೆ ಸ್ವಾತಿ ಮಲಿವಾಲ್ ಅವರೊಂದಿಗೆ ನಾನು ನಿಂತಿದ್ದೇನೆ” ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಗುರುವಾರ ಹೇಳಿದ್ದಾರೆ.

‘ಪಕ್ಷಗಳನ್ನು ಲೆಕ್ಕಿಸದೆ ಮಹಿಳೆಯರನ್ನು ಬೆಂಬಲಿಸುತ್ತೇನೆ’ ಎಂದು ಹೇಳಿದ ಪ್ರಿಯಾಂಕಾ, ‘ಎಎಪಿ ಈ ವಿಷಯವನ್ನು ಪರಿಹರಿಸುತ್ತದೆ ಮತ್ತು ಪರಿಹಾರವನ್ನು ಕಂಡುಕೊಳ್ಳುತ್ತದೆ’ ಎಂದು ಭರವಸೆ ವ್ಯಕ್ತಪಡಿಸಿದರು.

ಎಎಪಿ ರಾಜ್ಯಸಭಾ ಸಂಸದೆ ಮಲಿವಾಲ್ ಅವರು ಇತ್ತೀಚೆಗೆ ಮುಖ್ಯಮಂತ್ರಿಯ ಅಧಿಕೃತ ನಿವಾಸದಲ್ಲಿ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದರು.

“ಪ್ರಸ್ತುತ ನಾನು ಉತ್ತರ ಪ್ರದೇಶದಲ್ಲಿರುವುದರಿಂದ ಹೆಚ್ಚು ಗಮನಿಸಿಲ್ಲ, ಯಾವುದೇ ಮಹಿಳೆಯ ಮೇಲೆ ದೌರ್ಜನ್ಯ ನಡೆದರೆ ನಾನು ಮಹಿಳೆಯ ಪರವಾಗಿ ಮಾತ್ರ ಮಾತನಾಡುತ್ತೇನೆ. ಯಾವುದೇ ತಪ್ಪು ನಡೆದರೂ ನಾನು ಮಹಿಳೆಯ ಪರವಾಗಿ ನಿಲ್ಲುತ್ತೇನೆ” ಎಂದು ಹೇಳಿದ್ದಾರೆ.

“ಘಟನೆ ನಿಜವಾಗಿದ್ದರೆ, ಏನಾದರೂ ತಪ್ಪಾಗಿದ್ದರೆ, ನಾನು ಆ ಮಹಿಳೆಯೊಂದಿಗೆ ನಿಲ್ಲುತ್ತೇನೆ” ಎಂದು ಪ್ರತಿಪಾದಿಸಿದ ಅವರು, “ಸ್ವಾತಿ ಮಲಿವಾಲ್ ನನ್ನೊಂದಿಗೆ ಮಾತನಾಡಲು ಬಯಸಿದರೆ, ನಾನು ಮಾತನಾಡುತ್ತೇನೆ” ಎಂದು ಹೇಳಿದರು.

“ಈ ವಿಷಯ ಕೇಜ್ರಿವಾಲ್ ಅವರಿಗೆ ತಿಳಿದಿದ್ದರೆ, ಕೇಜ್ರಿವಾಲ್ ಅವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಸ್ವಾತಿ ಮಲಿವಾಲ್ ಅವರಿಗೆ ಸ್ವೀಕಾರಾರ್ಹವಾದ ಪರಿಹಾರವನ್ನು ಕೇಜ್ರಿವಾಲ್ ಅವರು ಕಂಡುಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದರು

ಹತ್ರಾಸ್ ಮತ್ತು ಉನ್ನಾವೋ (ಗ್ಯಾಂಗ್ರೇಪ್) ಪ್ರಕರಣಗಳಲ್ಲಿ ಪಕ್ಷವು ಏನನ್ನೂ ಮಾಡದಿರುವಾಗ, ಬಿಜೆಪಿ ನಾಯಕರು ಈ ವಿಷಯದ ಬಗ್ಗೆ ಹೇಗೆ ಮಾತನಾಡುತ್ತಾರೆ ಎಂದು ಅವರು ಪ್ರಶ್ನಿಸಿದ್ದಾರೆ. ನಮ್ಮ ಮಹಿಳಾ ಕುಸ್ತಿಪಟುಗಳ ವಿಷಯದಲ್ಲಿ ಬಿಜೆಪಿ ಏನನ್ನೂ ಮಾಡಿಲ್ಲ ಎಂದು ಅವರು ಸ್ವಾತಿ ಮಲಿವಾಲ್ ವಿಚಾರದಲ್ಲಿ ಮಾತನಾಡುತ್ತಿರುವ ಬಿಜೆಪಿ ವಿರುದ್ಧ ಕಿಡಿಕಾರಿದರು.

ಸೋಮವಾರ ಬೆಳಗ್ಗೆ ನವದೆಹಲಿಯ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ ತೆರಳಿದ ಮಲಿವಾಲ್, ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಕೇಜ್ರಿವಾಲ್ ಅವರ ವೈಯಕ್ತಿಕ ಸಿಬ್ಬಂದಿಯೊಬ್ಬರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದರು. ಆದರೆ, ಆಕೆ ಔಪಚಾರಿಕವಾಗಿ ದೂರು ದಾಖಲಿಸಿಲ್ಲ. ಮಲಿವಾಲ್ ಅವರ ಆರೋಪದ ನಂತರ, ಹಿರಿಯ ಎಎಪಿ ನಾಯಕ ಸಂಜಯ್ ಸಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಗಳನ್ನು ಒಪ್ಪಿಕೊಂಡಿದ್ದು, ಕೇಜ್ರಿವಾಲ್ ಈ ವಿಷಯದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು. ಈ ಬಗ್ಗೆ ದೆಹಲಿ ಮುಖ್ಯಮಂತ್ರಿ ಸಾರ್ವಜನಿಕವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಕೇಜ್ರಿವಾಲ್ ಅವರನ್ನು ಗುರಿಯಾಗಿಸಿ ಬಿಜೆಪಿ, “ಅವರು ಮೌನವಾಗಿದ್ದಾರೆ, ಗೂಂಡಾನಂತೆ ವರ್ತಿಸುತ್ತಿದ್ದಾರೆ” ಎಂದು ಆರೋಪಿಸಿದರು. ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ದೂರಿನಲ್ಲಿ ಎಎಪಿ ಮುಖ್ಯಸ್ಥರು ಪ್ರಮುಖ “ಅಪರಾಧಿ” ಎಂದು ಹೇಳಿದ್ದಾರೆ.

ಈ ಬೆಳವಣಿಗೆಗಳ ನಡುವೆ, ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡ ಇಂದು ಮುಂಜಾನೆ ಮಲಿವಾಲ್ ಅವರ ಮನೆಗೆ ತಲುಪಿದೆ. ಮಲಿವಾಲ್ ಅವರ ಆರೋಪದ ಮೇಲೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡ್ಲ್ಯೂ) ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರಿಗೆ ಸಮನ್ಸ್ ನೀಡಿದೆ.

ಇದನ್ನೂ ಓದಿ; ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಅರವಿಂದ್ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿಗೆ ಎನ್‌ಸಿಡಬ್ಲ್ಯೂ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...