Homeಮುಖಪುಟಐಟಿ ದಾಳಿ: ಅಪಾರ ಪ್ರಮಾಣದ ನಗದು ಪತ್ತೆ; ನೋಟು ಎನಿಸಲಾಗದೆ ಕೆಟ್ಟು ನಿಂತ ಯಂತ್ರಗಳು

ಐಟಿ ದಾಳಿ: ಅಪಾರ ಪ್ರಮಾಣದ ನಗದು ಪತ್ತೆ; ನೋಟು ಎನಿಸಲಾಗದೆ ಕೆಟ್ಟು ನಿಂತ ಯಂತ್ರಗಳು

- Advertisement -
- Advertisement -

ಒಡಿಶಾ ಮತ್ತು ಜಾರ್ಖಂಡ್‌ನ ಬೌಧ್ಧ್ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್‌ (ಬಿಡಿಪಿಎಲ್) ಸಂಸ್ಥೆಗೆ ಸೇರಿದ ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ(ಐಟಿ)ಯ ಅಧಿಕಾರಿಗಳು ದಾಳಿ ನಡೆಸಿದ್ದು, ಕಂಪನಿಗೆ ಸಂಬಂಧಿಸಿದ್ದು ಎನ್ನಲಾದ ಅಪಾರ ಪ್ರಮಾಣದ ನಗದು ವಶಪಡಿಸಿಕೊಂಡಿದ್ದಾರೆ.

ವರದಿಗಳ ಪ್ರಕಾರ, ಒಡಿಶಾದ ಬೋಲಂಗಿರ್ ಮತ್ತು ಸಂಬಲ್ಪುರ ಹಾಗೂ ಜಾರ್ಖಂಡ್‌ನ ರಾಂಚಿ, ಲೋಹರ್ದಗಾದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಂಪನಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.

ಐಟಿ ದಾಳಿ ವೇಳೆ ಸಿಕ್ಕ ಹಣದಲ್ಲಿ ನಿನ್ನೆಯವರೆಗೆ 50 ಕೋಟಿ ರೂಪಾಯಿಯ ನೋಟುಗಳ ಎಣಿಕೆ ಪೂರ್ಣಗೊಂಡಿದೆ. ಆದರೆ, ನೋಟುಗಳ ಸಂಖ್ಯೆ ತುಂಬಾ ಹೆಚ್ಚಾಗಿರುವುದರಿಂದ ಎಣಿಕೆ ಯಂತ್ರಗಳು ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿವೆ. ಸುಮಾರು 150 ಕೋಟಿ ರೂಪಾಯಿ ಹಣ ಕಂಪನಿಯಲ್ಲಿ ಪತ್ತೆಯಾಗಿರುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.

ಕಂಪನಿಯ ವೆಬ್‌ಸೈಟ್ ಪ್ರಕಾರ, ಬಿಡಿಪಿಎಲ್ ಗ್ರೂಪ್ ಒಡಿಶಾದಲ್ಲಿ ತನ್ನ ಪ್ರಧಾನ ಕಚೇರಿಯನ್ನು ಹೊಂದಿದೆ. 6 ವ್ಯಾಪಾರ ವಿಭಾಗಗಳಲ್ಲಿ 4 ಕಂಪನಿಗಳನ್ನು ಒಳಗೊಂಡಿದೆ. ಕಂಪನಿ ಒಡಿಶಾದಾದ್ಯಂತ ಕಾರ್ಯನಿರ್ವಹಿಸುತ್ತಿದೆ.

ಬಿಡಿಪಿಎಲ್ ಮಾತೃ ಸಂಸ್ಥೆಯಾಗಿದ್ದು, ಇದರ ಅಧೀನದಲ್ಲಿ ಬಾಲ್ಡಿಯೊ ಸಾಹು ಇನ್ಫ್ರಾ ಪ್ರೈವೇಟ್ ಲಿಮಿಟೆಡ್ (ಫ್ಲೈ ಆಶ್ ಬ್ರಿಕ್ಸ್) ಕ್ವಾಲಿಟಿ ಬಾಟ್ಲರ್ಸ್ ಪ್ರೈವೇಟ್ ಲಿಮಿಟೆಡ್ (ಐಎಂಎಫ್‌ಎಲ್ ಬಾಟ್ಲಿಂಗ್) ಮತ್ತು ಕಿಶೋರ್ ಪ್ರಸಾದ್ ಬಿಜಯ್ ಪ್ರಸಾದ್ ಬೆವರೇಜಸ್ ಪ್ರೈವೇಟ್ ಲಿಮಿಟೆಡ್ (ಸೇಲ್ಸ್ & ಬ್ರ್ಯಾಂಡ್ ಮಾರ್ಕೆಟಿಂಗ್) ಸಂಸ್ಥೆಗಳಿವೆ ಎಂದು ವೆಬ್‌ಸೈಟ್ ಹೇಳಿದೆ.

ಬಿಡಿಪಿಎಲ್ ಪ್ರಮುಖವಾಗಿ ಮದ್ಯ ತಯಾರಿಕಾ ಕಂಪನಿಯಾಗಿದ್ದು, ತೆರಿಗೆ ವಂಚನೆ ಆರೋಪದಡಿ ಕಂಪನಿಯ ಮೇಲೆ ಐಟಿ ದಾಳಿ ನಡೆದಿದೆ. ಈ ಹಿಂದೆ ಹಲವು ಬಾರಿ ಕಂಪನಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಂಪನಿಯು ಒಡಿಶ್ಶಾದ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸದಸ್ಯ ಧೀರಜ್ ಪ್ರಸಾದ್ ಸಾಹು ಅವರ ಜೊತೆ ವ್ಯಾವಹಾರಿಕ ಸಂಬಂಧ ಹೊಂದಿದೆ ಎಂದು ಹೇಳಲಾಗ್ತಿದೆ.

ಇದನ್ನೂ ಓದಿ : ಸೈಬರ್‌ ವಂಚನೆ: 100 ವೈಬ್‌ಸೈಟ್‌ಗಳನ್ನು ಬ್ಲಾಕ್‌ ಮಾಡಿದ ಕೇಂದ್ರ ಸರಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಗ್ನಿಪಥ ಯೋಜನೆ ಬಗ್ಗೆ ಮಾತನಾಡದಂತೆ ಚುನಾವಣಾ ಆಯೋಗ ಕಾಂಗ್ರೆಸ್‌ಗೆ ನಿರ್ದೇಶನ ನೀಡಿದ್ದು ತಪ್ಪು: ಚಿದಂಬರಂ

0
ಅಗ್ನಿಪಥ ಯೋಜನೆಯನ್ನು ರಾಜಕೀಯಗೊಳಿಸದಂತೆ ಚುನಾವಣಾ ಆಯೋಗವು ತನ್ನ ಪಕ್ಷಕ್ಕೆ ನಿರ್ದೇಶನ ನೀಡಿರುವುದು ಅತ್ಯಂತ ತಪ್ಪು, ಸರ್ಕಾರದ ನೀತಿಯನ್ನು ಟೀಕಿಸುವುದು ವಿರೋಧ ಪಕ್ಷದ ಹಕ್ಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಪ್ರತಿಪಾದಿಸಿದರು. ಚುನಾವಣಾ...