Homeಕರ್ನಾಟಕಬೊಮ್ಮಾಯಿಯವರು ಅವಿವೇಕದ ತುತ್ತತುದಿಗೆ ಏರಿದ್ದಾರೆ: ದಿನೇಶ್ ಗುಂಡೂರಾವ್ ವಾಗ್ದಾಳಿ

ಬೊಮ್ಮಾಯಿಯವರು ಅವಿವೇಕದ ತುತ್ತತುದಿಗೆ ಏರಿದ್ದಾರೆ: ದಿನೇಶ್ ಗುಂಡೂರಾವ್ ವಾಗ್ದಾಳಿ

- Advertisement -
- Advertisement -

”ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನಾನು ಪ್ರಾಜ್ಞರು ಹಾಗೂ ಪ್ರಜ್ಞಾವಂತರೆಂದು ಭಾವಿಸಿದ್ದೆ ಆದರೆ ಅವರು ಕೋಮುವಾದಿಗಳ ಸಹವಾಸ ಮಾಡಿ ಅವಿವೇಕದ ತುತ್ತತುದಿಗೆ ಏರಿದ್ದಾರೆ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಅತಿ ಶೀಘ್ರದಲ್ಲೇ ತುರ್ತು ಪರಿಸ್ಥಿತಿ ತಲೆದೋರಬಹುದು ಎಂದು ಬೊಮ್ಮಾಯಿ ಅವರು ಹೇಳಿಕೆ ನೀಡಿದ ಬಳಿಕ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಸರಣಿ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದರು. ಬಿಜೆಪಿ ನಾಯಕರು ಅಧಿಕಾರ ಕಳೆದುಕೊಂಡ ಬಳಿಕ ಬಾಲ ಸುಟ್ಟ ಬೆಕ್ಕಿನಂತಾಗಿದ್ದಾರೆ ಎಂದು ಕೆಣಕಿದ್ದರು. ಅದಕ್ಕೆ ಪ್ರತಿಯಾಗಿ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದರು. ಇದೀಗ ಬೊಮ್ಮಾಯಿ ಹಾಗೂ ದಿನೇಶ್ ಗುಂಡೂರಾವ್ ನಡುವೆ ಟ್ವಿಟ್ಟರ್ ವಾರ್ ಶುರುವಾಗಿದೆ.

ಗುಂಡುರಾವ್ ಅವರ ಟ್ವೀಟ್‌ಗೆ ಪ್ರತಿ ಟ್ವೀಟ್ ಮಾಡಿದ್ದ ಬೊಮ್ಮಾಯಿ ಅವರು, ”ಕೇಂದ್ರದಲ್ಲಿ ಇಷ್ಟು ದಿನ ಅಪರಾಧಗಳನ್ನು ಮಾಡಿ ರಾಜಕೀಯ ರಕ್ಷಣೆಯನ್ನು ಯುಪಿಎ ಕಾಲದಲ್ಲಿ ಪಡೆಯುತ್ತಿದ್ದರು. ಈಗ ಕೇಂದ್ರ ಸರ್ಕಾರ ಅಪರಾಧ ಮಾಡಿದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಂಡಿದೆ‌. ಇವೆಲ್ಲವೂ ಕೂಡ ನ್ಯಾಯಾಂಗದ ಪರಿಶೀಲನೆಯಲ್ಲಿ ನಡೆಯುತ್ತಿದೆ. ಇಲ್ಲಿ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಹದಿನೈದು ದಿನಗಳು ಕಳೆದಿಲ್ಲ‌ ಬರಿ ಮಾತನಾಡಿದರೆ ಜೈಲಿಗೆ ಹಾಕುತ್ತೇವೆ ಎಂದು ಮಂತ್ರಿಗಳ ಬಾಯಲ್ಲಿ ಬರುತ್ತಿರುವುದು, ವಿರೋಧಿಗಳನ್ನು ನಿಮ್ಮ ಅಧಿಕಾರ ಬಲದಿಂದ ದಮನ ಮಾಡುವ ತಂತ್ರ 1975 ರ ಎಮರ್ಜನ್ಸಿಯನ್ನು ನೆನಪಿಸುತ್ತದೆ. ಆರಂಭದಲ್ಲಿಯೇ ಅಧಿಕಾರದ ಮದದಿಂದ ಜನ ಕೊಟ್ಟ ಅಧಿಕಾರ ವಿರೋಧಿಗಳ ದಮನಕ್ಕಾಗಿ ಇದೆ ಎಂದು ತಾವು ಭಾವಿಸಿದ್ದರೆ ಖಂಡಿತವಾಗಿಯೂ ಇದಕ್ಕೆ ಬೆಲೆ ತೆರಬೇಕಾಗುತ್ತದೆ” ಎಂದಿದ್ದರು.

ಇದೀಗ ಬೊಮ್ಮಾಯಿ ಅವರ ಟ್ವೀಟ್‌ಗೆ ಪ್ರತಿ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ಅವರು, ”ಬೊಮ್ಮಾಯಿ ಅವರನ್ನು ನಾನು ಪ್ರಾಜ್ಞರು ಹಾಗೂ ಪ್ರಜ್ಞಾವಂತರೆಂದು ಭಾವಿಸಿದ್ದೆ. ಆದರೆ, ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ ಎಂಬಂತೆ ಜನತಾ ಪರಿವಾರದ ಬೊಮ್ಮಾಯಿ, ಕೋಮುವಾದಿಗಳ ಸಹವಾಸ ಮಾಡಿ ಅವಿವೇಕದ ತುತ್ತತುದಿಗೆ ಏರಿದ್ದಾರೆ. ಬೊಮ್ಮಾಯಿಯವರೇ, ನೀವು ಮುಖ್ಯಮಂತ್ರಿ ಆಗಿದ್ದವರು. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ತಪ್ಪೇ” ಎಂದು ಗುಂಡೂರಾವ್ ಪ್ರಶ್ನಿಸಿದ್ದಾರೆ.

”ಬೊಮ್ಮಾಯಿಯವರೇ, UPA ಅವಧಿಯಲ್ಲಿ ಅಪರಾಧಿಗಳ ರಕ್ಷಣೆಯಾಗುತಿತ್ತು ಎಂದು ಹೇಳಿದ್ದೀರಿ‌. ನಮ್ಮ ಅವಧಿಯಲ್ಲಿ ಯಾವ ಅಪರಾಧಿಯ ರಕ್ಷಣೆಯಾಗಿದೆ ಎಂದು ಹೇಳಿ? ನಾರಾಯಣ ರಾಣೆ, ಸುವೇಂದು ಅಧಿಕಾರಿಯನ್ನು ಮಹಾಭ್ರಷ್ಟರೆಂದು ಬಿಂಬಿಸಿದ್ದು ನಿಮ್ಮ ಪಕ್ಷವೇ ಅಲ್ಲವೇ? ಅವರೀಗ ನಿಮ್ಮ ಪಕ್ಷದ ಸದಸ್ಯರು, ಬೇರೆ ಪಕ್ಷದಲ್ಲಿದ್ದಾಗ ಮಹಾಭ್ರಷ್ಟರು. ಈಗ ಅವರೇನು?” ಎಂದು ಸರಣಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಅಧಿಕಾರ ಕಳೆದುಕೊಂಡ ಬಿಜೆಪಿಯವರು ಬಾಲ ಸುಟ್ಟ ಬೆಕ್ಕಿನಂತೆ ಚಡಪಡಿಸುತ್ತಿದ್ದಾರೆ‌: ಬೊಮ್ಮಾಯಿಗೆ ದಿನೇಶ್ ಗುಂಡೂರಾವ್ ತಿರುಗೇಟು

ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಂಗಳವಾರ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿ ಮಾತನಾಡಿದ ಸಚಿವರು, ”ಮಂಗಳೂರಿನಲ್ಲಿ ಎದುರಿಸುತ್ತಿರುವ ಸವಾಲುಗಳು ಮತ್ತು ಸಮಸ್ಯೆಗಳನ್ನು ಪರಿಶೀಲಿಸಿದ್ದೇನೆ. ಇದು ನನಗೆ ಹೊಸ ಹುದ್ದೆ ಅಲ್ಲ. ಹೊಸ ಸವಾಲುಗಳು ಹುಟ್ಟಿಕೊಂಡಿವೆ ಮತ್ತು ಸಮಾಜದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಪೊಲೀಸ್ ಇಲಾಖೆಗೂ ಹೊಸ ಸವಾಲುಗಳು ಎದುರಾಗಿವೆ” ಎಂದರು.

”ನೈತಿಕ ಪೊಲೀಸ್​ಗಿರಿ ತಡೆಯಲು ಮಂಗಳೂರು ಕಮಿಷನರೇಟ್​ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಎಂಬ ಹೊಸ ಘಟಕ ಸ್ಥಾಪಿಸುತ್ತೇವೆ. ಆ್ಯಂಟಿ ಕಮ್ಯುನಲ್ ವಿಂಗ್​ನಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ” ಎಂದರು.

”ಈ ಭಾಗದಲ್ಲಿ ಒಳ್ಳೆಯ ಜನರು ಇದ್ದಾರೆ ಎಂದು ನಂಬಿದ್ದೇವೆ. ಈ ಭಾಗದಲ್ಲಿ ಭಯದ ವಾತಾವರಣವಿದೆ ಎಂದು ಜನ ಮಾತನಾಡುತ್ತಿದ್ದಾರೆ. ಕೋಮು ಸೌಹಾರ್ದತೆಯನ್ನು ತರಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದರು.

”ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್​ಗಿರಿ ತುಂಬಾ ನಡೆಯುತ್ತಿದೆ. ಇದನ್ನು ತಡೆಯದಿದ್ದರೆ ಇಲಾಖೆ ಮತ್ತು ರಾಜ್ಯಕ್ಕೆ ಕೆಟ್ಟ ಹೆಸರು. ಹಾಗಾಗಿ ನೈತಿಕ ಪೊಲೀಸ್​ಗಿರಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆಗಸ್ಟ್ 15ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ ಪ್ರದೇಶವಾಗಬೇಕು” ಎಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

0
ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಅವಿರೋಧವಾಗಿ ಗೆದ್ದುಕೊಂಡಿದೆ. ಇದರ ಬೆನ್ನಲ್ಲಿ ಅಮಿತ್ ಶಾ ಪ್ರತಿನಿಧಿಸುವ ಗಾಂಧಿನಗರ ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಗುಜರಾತ್‌ನ...