Homeಮುಖಪುಟನಾನು ಟ್ವೀಟ್‌ ಮಾಡಿದ್ದು, ನಾಗರಿಕನ ಕರ್ತವ್ಯವಾಗಿತ್ತು. ಆದರೆ ಕೋರ್ಟನ್ನು ಗೌರವಿಸಿ 1 ರೂ ದಂಡ ಕಟ್ಟುತ್ತೇನೆ:...

ನಾನು ಟ್ವೀಟ್‌ ಮಾಡಿದ್ದು, ನಾಗರಿಕನ ಕರ್ತವ್ಯವಾಗಿತ್ತು. ಆದರೆ ಕೋರ್ಟನ್ನು ಗೌರವಿಸಿ 1 ರೂ ದಂಡ ಕಟ್ಟುತ್ತೇನೆ: ಪ್ರಶಾಂತ್ ಭೂಷಣ್

ಸೆಪ್ಟಂಬರ್ 15 ರೊಳಗೆ 1 ರೂ ದಂಡ ಕಟ್ಟಬೇಕು, ತಪ್ಪಿದ್ದಲ್ಲಿ ಮೂರು ತಿಂಗಳ ಜೈಲುವಾಸ ಮತ್ತು ಮೂರು ತಿಂಗಳ ವಕೀಲ ವೃತ್ತಿಗೆ ನಿ‍ಷೇಧ” ಎಂದು ಸುಪ್ರೀಂ ಕೋರ್ಟ್ ಇಂದು ಬೆಳಿಗ್ಗೆ ತೀರ್ಪು ನೀಡಿತ್ತು.

- Advertisement -
- Advertisement -

ನಾನು ಈ ಮೊದಲೇ ಹೇಳಿದ್ದೇ. ಸುಪ್ರೀಂ ಕೋರ್ಟ್ ಯಾವ ಶಿಕ್ಷೆ ನೀಡಿದರೂ ಅದನ್ನು ಖುಷಿಯಿಂದ ಒಪ್ಪಿಕೊಳ್ಳುತ್ತೇನೆ ಎಂದು. ಏಕೆಂದರೆ ಸುಪ್ರೀಂಕೋರ್ಟು ಜನರು ನ್ಯಾಯಕ್ಕಾಗಿ ತಲುಪಬಲ್ಲ ಅತ್ಯುನ್ನತ ಅಂಗವಾಗಿದ್ದು, ಅದು ದುರ್ಬಲವಾದರೆ, ಗಣರಾಜ್ಯವೇ ದುರ್ಬಲವಾದಂತೆ.

ಆದರೆ, ನಾನು ಯಾವ ಟ್ವೀಟ್‌ ಗಳನ್ನು ಮಾಡಿದ್ದಕ್ಕಾಗಿ ನನ್ನನ್ನು ತಪ್ಪಿತಸ್ಥನೆಂದು ಘೋಷಿಸಿದೆಯೋ, ಅದು ಈ ದೇಶದ ನಾಗರಿಕನ ಅತ್ಯುನ್ನತ ಕರ್ತವ್ಯವಾಗಿತ್ತು ಎಂದೇ ನಾನು ಭಾವಿಸುತ್ತೇನೆ ಎಂದು ತಮ್ಮ ಈ ಹಿಂದಿನ ನಿಲುವನ್ನು ಅವರು ಪುನರುಚ್ಚರಿಸಿದ್ದಾರೆ.

ತನ್ನ ಪರವಾಗಿ ನಿಂತ ನಾಗರಿಕರು ಮತ್ತು ವಕೀಲರಿಗೆ ಅವರು ಕೃತಜ್ಞತೆಗಳನ್ನು ಸಲ್ಲಿಸಿ, ಸುಪ್ರೀಂಕೋರ್ಟು ಪ್ರಬಲವಾಗಬೇಕು ಮತ್ತು ಸ್ವತಂತ್ರವಾಗಿರಬೇಕು ಎಂದು ನಾನು ಬಯಸುತ್ತೇನೆ.

ಹಾಲಿ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ ಕಾರ್ಯವೈಖರಿ ಹಾಗೂ ಹಿಂದಿನ ನಾಲ್ಕು ಮುಖ್ಯ ನ್ಯಾಯಮೂರ್ತಿಗಳ ಬಗ್ಗೆ ಟೀಕಿಸಿದ್ದಕ್ಕಾಗಿನ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಭೂಷಣ್ “ಸೆಪ್ಟಂಬರ್ 15 ರೊಳಗೆ 1 ರೂ ದಂಡ ಕಟ್ಟಬೇಕು, ತಪ್ಪಿದ್ದಲ್ಲಿ ಮೂರು ತಿಂಗಳ ಜೈಲುವಾಸ ಮತ್ತು ಮೂರು ವರ್ಷಗಳ ವಕೀಲ ವೃತ್ತಿಗೆ ನಿ‍ಷೇಧ” ಎಂದು ಸುಪ್ರೀಂ ಕೋರ್ಟ್ ಇಂದು ಬೆಳಿಗ್ಗೆ ತೀರ್ಪು ನೀಡಿತ್ತು.

ತೀರ್ಪಿನಲ್ಲಿ 1 ರೂ ದಂಡ ಅಥವಾ ಮೂರು ತಿಂಗಳ ಜೈಲು ಹಾಗೂ ವಕೀಲಿ ವೃತ್ತಿ ನಿ‍ಷೇಧಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಭೂಷಣ್ ಯಾವುದು ಆಯ್ದುಕೊಳ್ಳಲಿದ್ದಾರೆ ಎಂದು ಹಲವರು ಚರ್ಚಿಸಿದ್ದರು. ಅದಕ್ಕೆ ತೆರೆ ಎಳೆದಿರುವ ಪ್ರಶಾಂತ್ ಭೂಷಣ್‌ರವರು “1 ರೂ ದಂಡವನ್ನು ಕಟ್ಟುತ್ತೇನೆಂದು’ ಘೋಷಿಸಿದ್ದಾರೆ.

ತೀರ್ಪಿನ ಕುರಿತು ಪ್ರತಿಕ್ರಿಯಿಸಿರುವ ಪ್ರಶಾಂತ್ ಭೂಷಣ್‌ರವರ ತಂದೆ ಶಾಂತಿ ಭೂಷಣ್‌ “ದೇಶದ ದನಿಯನ್ನು ಸುಪ್ರೀಂಕೋರ್ಟು ಕೇಳಲಿ ಎಂದು ನಾನು ಕೋರಿದ್ದೆ. ಈಗ ನಾನು ದೇಶದ ಪ್ರತಿಯೊಬ್ಬ ನಾಗರಿಕರು ಒಂದು ರೂಪಾಯಿಯನ್ನು ಸುಪ್ರೀಂಕೋರ್ಟಿಗೆ ಕಳಿಸಲಿ ಎಂದು ಕೋರುತ್ತೇನೆ” ಎಂದು ಭಾರತದ ಮಾಜಿ ಕಾನೂನು ಸಚಿವರು ಹಾಗೂ ಇಂದಿರಾಗಾಂಧಿಯವರ ವಿರುದ್ಧ ಐತಿಹಾಸಿಕ ಮೊಕದ್ದಮೆಯಲ್ಲಿ ವಾದಿಸಿದ್ದ ಶಾಂತಿ ಭೂಷಣ್ ಹೇಳಿದ್ದರು.

“ಇಂದಿನ ನ್ಯಾಯಾಂಗ ನಿಂದನೆಯ ತೀರ್ಪು ಹೊರಬಂದ ಕೂಡಲೇ ನನ್ನ ವಕೀಲರೂ ಮತ್ತು ಹಿರಿಯ ಸಹೋದ್ಯೋಗಿಗಳೂ ಆದ ರಾಜೀವ್ ಧವನ್ ಅವರು ನನಗೆ 1 ರೂಪಾಯಿ ದೇಣಿಗೆ ನೀಡಿದರು, ಮತ್ತು ನಾನದನ್ನು ಕೃತಜ್ಞಾಪೂರ್ವಕವಾಗಿ ಸ್ವೀಕರಿಸಿದೆ” ಎಂದು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದರು. ಇದಕ್ಕೆ ನ್ಯಾಯಾಂಗವನ್ನು ಟೀಕೆ ಮಾಡಬೇಕು, ಅಪಹಾಸ್ಯ ಮಾಡಬಾರದು ಎಂದು ಪರ ವಿರೋಧದ ಅಭಿಪ್ರಾಯಗಳು ದಾಖಲಾಗಿದ್ದವು.

ಪತ್ರಿಕಾ ಗೋಷ್ಟಿಯಲ್ಲಿ ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಯಾದವ್ ಮತ್ತು ಅಂಜಲಿ ಭಾರದ್ವಾಜ್ ಭಾಗವಹಿಸಿದ್ದರು.


ಇದನ್ನೂ ಓದಿ: ಪ್ರಶಾಂತ್ ಭೂಷಣ್‌ಗೆ 1 ರೂ ದಂಡ ಅಥವಾ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...