Homeಮುಖಪುಟರ‍್ಯಾಲಿಯಲ್ಲಿ ಬೃಹತ್ ಜನಸ್ತೋಮ ಕಂಡು ಉಲ್ಲಸಿತರಾದ ಪ್ರಧಾನಿ: ಮೋದಿಯನ್ನು ರೋಮ್ ದೊರೆ ನೀರೊಗೆ ಹೋಲಿಸಿದ ಕಾಂಗ್ರೆಸ್

ರ‍್ಯಾಲಿಯಲ್ಲಿ ಬೃಹತ್ ಜನಸ್ತೋಮ ಕಂಡು ಉಲ್ಲಸಿತರಾದ ಪ್ರಧಾನಿ: ಮೋದಿಯನ್ನು ರೋಮ್ ದೊರೆ ನೀರೊಗೆ ಹೋಲಿಸಿದ ಕಾಂಗ್ರೆಸ್

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬಂಗಾಳದಲ್ಲಿ ಪ್ರಚಾರ ಮಾಡಿದ್ದು, ಅಸನ್ಸೋಲ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಹೆಚ್ಚಿನ ಜನಸಮೂಹವನ್ನು ನೋಡಿ, ನಾನು ಇಂತಹ ರ‍್ಯಾಲಿ ಎಂದೂ ನೋಡಿರಲಿಲ್ಲ ಎಂದು ಉದ್ಘರಿಸಿದ್ದಾರೆ. ನಂತರ ಕಾಂಗ್ರೆಸ್ ಸೇರಿದಂತೆ ಹಲವರು ಇದನ್ನು ವ್ಯಾಪಕವಾಗಿ ಟೀಕಿಸಿದ್ದು, ಕಾಂಗ್ರೆಸ್ ಪ್ರಧಾನಿಯವರನ್ನು ರೋಮ್ ದೊರೆ ನೀರೊಗೆ ಹೋಲಿಕೆ ಮಾಡಿದೆ.

ಒಂದು ದಿನದಲ್ಲಿ ಭಾರತವು 2.6 ಲಕ್ಷ ಹೊಸ ಕೋವಿಡ್ ಪ್ರಕರಣಗಳನ್ನು ದಾಖಲಿಸಿದೆ ಮತ್ತು ಸಕ್ರಿಯ ಪ್ರಕರಣಗಳು ಹೆಚ್ಚಿವೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 16.8 ಲಕ್ಷ ತಲುಪಿರುವಾಗ ಪ್ರಧಾನಿ ಭಾರಿ ಜನಸ್ತೋಮ ಸೇರಿದ್ದನ್ನು ಹೊಗಳಿದ್ದು ಕೆಲವರ ಟೀಕೆಗೆ ಕಾರಣವಾಗಿದೆ.
ಕಾಂಗ್ರೆಸ್ ಪ್ರಧಾನಿಯವರನ್ನು ರೋಮ್ ದೊರೆ ನೋರೊಗೆ ಹೋಲಿಸಿ ಟ್ವಿಟರ್‌ನಲ್ಲಿ ವಿಡಿಯೋ ಒಂದನ್ನು ಹಾಕಿ ವ್ಯಂಗ್ಯ ಮಾಡಿದೆ.

“ಲೋಕಸಭಾ ಚುನಾವಣೆಯ ಸಮಯದಲ್ಲಿ ನಾನು ಎರಡು ಬಾರಿ ಇಲ್ಲಿಗೆ ಬಂದಿದ್ದೇನೆ. ಕೊನೆಯ ಬಾರಿ ನಾನು ಬಾಬುಲ್ಜಿಗೆ (ಅಸನ್ಸೋಲ್ ಸಂಸದ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ) ಮತ ಕೇಳಲು ಬಂದಿದ್ದೆ. ಆಗ ಜನಸಮೂಹವು ಇದರಲ್ಲಿ ಕಾಲು ಭಾಗ ಮಾತ್ರವಿತ್ತು’ ಎಂದು ಅವರು ಹೇಳಿದರು.

“ಆದರೆ ಇಂದು, ಎಲ್ಲಾ ದಿಕ್ಕುಗಳಲ್ಲಿಯೂ ನಾನು ಅಪಾರ ಜನಸಂದಣಿಯನ್ನು ನೋಡುತ್ತಿದ್ದೇನೆ … ಮೊದಲ ಬಾರಿಗೆ ಇಂತಹ ರ‍್ಯಾಲಿಗೆ ಸಾಕ್ಷಿಯಾಗಿದ್ದೇನೆ… ಇಂದು, ನೀವು ನಿಮ್ಮ ಶಕ್ತಿಯನ್ನು ತೋರಿಸಿದ್ದೀರಿ. ಮುಂದಿನ ಹಂತವು ಹೆಚ್ಚು ಮುಖ್ಯವಾಗಿದೆ – ಹೋಗಿ ಮತ ಚಲಾಯಿಸಿ ಇತರರನ್ನು ಸಹ ನಿಮ್ಮ ಜೊತೆ ಕರೆದೊಯಿರಿ’ ಎಂದು ಪ್ರಧಾನಿ ಮೋದಿ ಹೇಳಿದರು. ಏಪ್ರಿಲ್ 26 ರಂದು ಅಸನ್ಸೋಲ್‌ನಲ್ಲಿ ಮತದಾನ ನಡೆಯಲಿದೆ.

ಸೋಂಕಿನ ಎರಡನೇ ಅಲೆಯನ್ನು ದೇಶವು ಎದುರಿಸುತ್ತಿರುವ ಕಾರಣ ಚುನಾವಣಾ ರ‍್ಯಾಲಿಗಳಲ್ಲಿ ಪ್ರಧಾನಮಂತ್ರಿ ನಿರಂತರವಾಗಿ ಸಕ್ರಿಯವಾಗಿ ಪಾಲ್ಗೊಳ್ಳುವುದನ್ನು ಪ್ರತಿಪಕ್ಷಗಳು ಪ್ರಶ್ನಿಸುತ್ತಿವೆ.
ರಾಜ್ಯ ಚುನಾವಣೆಗೆ ಪ್ರಚಾರ ಮಾಡುತ್ತಿರುವ ಪ್ರಧಾನಿ ಮತ್ತು ಇತರ ರಾಜಕೀಯ ಮುಖಂಡರನ್ನು ಸ್ಪಷ್ಟವಾಗಿ ಟೀಕಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೆಳಿಗ್ಗೆ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ: “ಇಂತಹ ದೊಡ್ಡ ಸಂಖ್ಯೆಯ ಅನಾರೋಗ್ಯ ಪೀಡಿತರು ಮತ್ತು ದಾಖಲೆಯ ಸಾವುಗಳು ಕಂಡುಬರುತ್ತಿರುವುದು ಇದೇ ಮೊದಲು” ಎಂದು ಅವರು ಪ್ರಧಾನಿಗೆ ಕುಟುಕಿದ್ದಾರೆ. ಅಲ್ಲದೇ ತಮ್ಮ ಬಂಗಾಳದ ಎಲ್ಲಾ ಚುನಾವಣಾ ರ‍್ಯಾಲಿಗಳನ್ನು ರಾಹುಲ್ ರದ್ದು ಮಾಡಿದ್ದಾರೆ.

“ರೋಮ್ ಸುಟ್ಟುಹೋದಾಗ (ಚಕ್ರವರ್ತಿ) ನೀರೋ ಪಿಟೀಲು ಬಾರಿಸಿದಂತೆ ಸಾಂಕ್ರಾಮಿಕ ಸಮಯದಲ್ಲಿ ಪ್ರಚಾರಕ್ಕೆ ಆದ್ಯತೆ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿಯನ್ನು ಟೀಕಿಸಿದ ಕಾಂಗ್ರೆಸ್ ಟ್ವಿಟ್ಟರ್‌ನಲ್ಲಿ ಎರಡೂವರೆ ನಿಮಿಷಗಳ ವೀಡಿಯೊವನ್ನು ಪೋಸ್ಟ್ ಮಾಡಿದೆ.
ಬಿಜೆಪಿ, ಕಾಂಗ್ರೆಸ್, ಮತ್ತು ಬಂಗಾಳದ ಆಡಳಿತಾರೂಡ ತೃಣಮೂಲ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ಚುನಾವಣಾ ರ‍್ಯಾಲಿಗಳಲ್ಲಿ ಕೊವಿಡ್ ಮಾರ್ಗಸೂಚಿಗಳು ಪಾಲನೆಯಾಗುತ್ತಿಲ್ಲ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಕಾರಣಕ್ಕೆ ಬಂಗಾಳದ ನನ್ನ ಎಲ್ಲಾ ಚುನಾವಣಾ ರ್ಯಾಲಿಗಳನ್ನು ರದ್ದುಗೊಳಿಸುತ್ತೇನೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...