Homeಚಳವಳಿನನ್ನನ್ನು 4 ಗಂಟೆಗಳ ಕಾಲ ಪ್ರಶ್ನಿಸಲಾಯಿತು, ಹೋರಾಟ ಮುಂದುವರಿಯುತ್ತದೆ: ನಟ ಚೇತನ್

ನನ್ನನ್ನು 4 ಗಂಟೆಗಳ ಕಾಲ ಪ್ರಶ್ನಿಸಲಾಯಿತು, ಹೋರಾಟ ಮುಂದುವರಿಯುತ್ತದೆ: ನಟ ಚೇತನ್

- Advertisement -
- Advertisement -

ತಮ್ಮ ವಿಡಿಯೋ ಮತ್ತು ಬರಹಗಳಲ್ಲಿ ’ಬ್ರಾಹ್ಮಣ್ಯ’ ಎಂಬ ಪದ ಬಳಸಿರುವುದರ ವಿರುದ್ಧ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಂದು ಚಿತ್ರನಟ, ಸಾಮಾಜಿಕ ಹೋರಾಟಗಾರ ಚೇತನ್ ಬಸವನಗುಡಿ ಪೊಲೀಸ್‌ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ.

ನನ್ನನ್ನು 4 ಗಂಟೆಗಳ ಕಾಲ ಪ್ರಶ್ನಿಸಲಾಯಿತು. ನಾನು ಮಾಡುತ್ತಿರುವ ಕೆಲಸದ ಬಗ್ಗೆ ಹೆಮ್ಮೆ ಇದ್ದು ಹೋರಾಟ ಮುಂದುವರೆಯುತ್ತದೆ ಎಂದು ನಟ ಚೇತನ್ ವಿಚಾರಣೆ ನಂತರ ಹೇಳಿಕೆ ನೀಡಿದ್ದಾರೆ.

“ಇಂದು, ನನ್ನ ಸಾಮಾಜಿಕ ಜಾಲತಾಣದಲ್ಲಿನ ಬ್ರಾಹ್ಮಣ್ಯವನ್ನು ವಿರೋಧಿಸುವ ವೀಡಿಯೊಗಳು ಮತ್ತು ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಬಸವನಗುಡಿ ಪೊಲೀಸ್ ಠಾಣೆಯಲ್ಲಿ 4 ಗಂಟೆಗಳ ಕಾಲ ನನ್ನನ್ನು ಪ್ರಶ್ನಿಸಲಾಯಿತು.. ನಾನು ಸತ್ಯದ ಜೊತೆಗೆ ಮತ್ತು ಪ್ರಜಾಪ್ರಭುತ್ವಕ್ಕೆ ಬೆಂಬಲವಾಗಿ ನಿಂತಿದ್ದೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಸಮಾನತೆ, ನ್ಯಾಯ ಮತ್ತು ಅಹಿಂಸೆಗಾಗಿ ಜಾಗತಿಕ ಆಂದೋಲನಕ್ಕೆ ನನ್ನದೇ ಆದ ಸಣ್ಣ ರೀತಿಯಲ್ಲಿ ಕೊಡುಗೆ ನೀಡಿದ್ದಕ್ಕೆ ನನಗೆ ಹೆಮ್ಮೆ ಇದೆ. ಹೋರಾಟ ಮುಂದುವರಿಯುತ್ತದೆ! ಎಂದು ಚೇತನ್ ಘೋಷಿಸಿದ್ದಾರೆ.

ಇಂದು ಅವರು ಬಸವನಗುಡಿ ಪೊಲೀಸ್ ಠಾಣೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ನೂರಾರು ಬೆಂಬಲಿಗರು ಸಹ ಜೊತೆಗೂಡಿದ್ದಾರೆ. ಅವರು ಹೇಳಿಕೆ ದಾಖಲಿಸಿ ಹೊರಬರುತ್ತಿದ್ದಂತೆ ಅವರಿಗೆ ಹೂವಿನ ಹಾರ ಹಾಕಿ ಸನ್ಮಾನಿಸಿ ನಿಮ್ಮೊಡನೆ ನಾವಿದ್ದೇವೆ ಎಂದು ಬೆಂಬಲ ಸೂಚಿಸಿದ್ದಾರೆ.

ಇಂದು BAMCEF ರಾಷ್ಟ್ರೀಯ ಅಧ್ಯಕ್ಷ ವಾಮನ್ ಮೆಶ್ರಮ್‌ರವರು ನಟ ಚೇತನ್‌ರವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಬ್ರಾಹ್ಮಣ್ಯದ ವಿರುದ್ಧದ ಹೋರಾಟಕ್ಕಾಗಿ ನಾವು ನಿಮ್ಮನ್ನು ಸ್ವಾಗತಿಸುತ್ತೇವೆ ಮತ್ತು ನಿಮ್ಮ ದಿಟ್ಟ ನಿಲುವನ್ನು ನಾವು ಪ್ರಶಂಸಿಸುತ್ತೇವೆ. BAMCEF ಸಂಘಟನೆಯಾಗಿ ನಾವು ನಮ್ಮ ಸಂಪೂರ್ಣ ಸಾಂಸ್ಥಿಕ ಸಾಮರ್ಥ್ಯಗಳೊಂದಿಗೆ ನಿಮ್ಮೊಂದಿಗೆ ನಮ್ಮ ಸಹಾನುಭೂತಿ ಮತ್ತು ಐಕಮತ್ಯ ಸೂಚಿಸುತ್ತೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್: ಠಾಣೆಗೆ ಹೋಗುತ್ತೇನೆ, ಹೋರಾಟ ಮುಂದುವರೆಸುತ್ತೇನೆ ಎಂದ ನಟ ಚೇತನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...