Homeಕರ್ನಾಟಕ'ಮಹಾನ್ ನಾಯಕ ಡಿ.ಕೆ ಶಿವಕುಮಾರ್ ವಿರುದ್ಧ ಕನಕಪುರಕ್ಕೆ ಬಂದು ಹೋರಾಡುತ್ತೇನೆ': ರಮೇಶ್ ಜಾರಕಿಹೊಳಿ

‘ಮಹಾನ್ ನಾಯಕ ಡಿ.ಕೆ ಶಿವಕುಮಾರ್ ವಿರುದ್ಧ ಕನಕಪುರಕ್ಕೆ ಬಂದು ಹೋರಾಡುತ್ತೇನೆ’: ರಮೇಶ್ ಜಾರಕಿಹೊಳಿ

ಡಿ.ಕೆ ಶಿವಕುಮಾರ್ ಸೋಲಿಸಲು ಕುಮಾರಸ್ವಾಮಿಗೆ ಬೆಂಬಲ ನೀಡಲು ಸಿದ್ದನಿದ್ದೇನೆ. ನನ್ನ ತಮ್ಮನನ್ನು ಕನಕಪುರದಲ್ಲಿ ಕಣಕ್ಕಿಳಿಸುತ್ತೇನೆ..

- Advertisement -
- Advertisement -

ಲೈಂಗಿಕ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ವಾಗ್ದಾಳಿ ನಡೆಸಿದ್ದು, ಆತನೇ ಮಹಾನ್ ನಾಯಕನಾಗಿದ್ದು, ಕನಕಪುರಕ್ಕೆ ಬಂದು ಹೋರಾಡುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ನಮ್ಮ ಬಳಿ 11 ಆಧಾರಗಳಿವೆ. ಆ ಮಹಾನ್ ನಾಯಕ ನರೇಶ್ ಜೊತೆ ಸಂಬಂಧವಿರುವುದನ್ನು ಒಪ್ಪಿಕೊಂಡಿದ್ದಾರೆ. ಆ ಯುವತಿ ನಮ್ಮ ಮನೆಗೆ ಬಂದಿದ್ದಳು ಎಂಬುದನ್ನು ಒಪ್ಪಿಕೊಂಡಿದ್ದಾರೆ. ಹಾಗಾಗಿ ಅವರನ್ನು ಒದ್ದು ಒಳಗೆ ಹಾಕಬೇಕು, ಆ ಯುವತಿಯ ಮೇಲೆ ಕ್ರಮ ಕೈಗೊಳ್ಳಬೇಕು. ನಾನು ತಪ್ಪು ಮಾಡಿದ್ದರೆ ನನ್ನನ್ನು ಒದ್ದು ಒಳಗೆ ಹಾಕಬೇಕು” ಎಂದಿದ್ದಾರೆ.

ಆ ಯುವತಿ ಎಸ್ಟಿ ಜಾತಿ ಎಂಬುದು ನನಗೆ ಗೊತ್ತಿರಲಿಲ್ಲ. ಇಂದು ಆಕೆಯ ಪೋಷಕರು ಬಂದು ಪತ್ರಿಕಾಗೋಷ್ಠಿ ನಡೆಸಿ ಅದನ್ನು ಬಹಿರಂಗಪಡಿಸಿದ್ದಾರೆ. ಹಾಗಾಗಿ ಅಟ್ರಾಸಿಟಿ ಕಾಯ್ದೆ ಮೂಲಕ ಡಿ.ಕೆ ಶಿವಕುಮಾರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಆತ ಒಬ್ಬ ಗಾಂಡು, ಅವ ಗಂಡಸಲ್ಲ, ನಾನು ಗಂಡಸು ರಾಜಕಾರಣಿ ಆಗಲಿಕ್ಕೆ ನಾಲಾಯಕ್, ಅವನಿಗೆ ಮಾಫಿ ಎನ್ನುವುದು ಇಲ್ಲ. ಆತನನ್ನು ರಾಜೀನಾಮೆ ಕೊಡಿಸುವಂತೆ ಕಾಂಗ್ರೆಸ್ ನಾಯಕರಲ್ಲಿ ಮನವಿ ಮಾಡುತ್ತೇನೆ ಎಂದರು.

ಆ ಯುವತಿಯ ಪೋಷಕರಿಗೆ ನಾನು ಧನ್ಯವಾದ ಹೇಳುತ್ತೀನಿ. ಆಕೆಯ ಸಹೋದರನೇ ಎಲ್ಲಾ ಹೇಳಿದ್ದೇನೆ. ಅವರಿಗೆ ಮತ್ತೊಮ್ಮೆ ಥ್ಯಾಂಕ್ಸ್ ಹೇಳುತ್ತೀನಿ ಎಂದು ಪೋಷಕರಿಗೆ ಪದೇ ಪದೇ ಧನ್ಯವಾದ ತಿಳಿಸಿದರು.

ಆ ಪೋಷಕರನ್ನು ಕರೆತಂದು ನೀವೆ ಪ್ರೆಸ್ ಮೀಟ್ ಮಾಡಿಸಿದ್ದೀರಿ ಅಂತ ಆರೋಪವಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇರಬಹುದು ಎಂದರು. ಆದರೆ ನಮ್ಮ ಕುಟುಂಬ ಯಾವ ಹುಡುಗಿಗೂ ಮೋಸ ಮಾಡಿಲ್ಲ. ನನಗೆ ಹೆದರಿಕೆ ಇಲ್ಲ.. ನಾನು ಕನಕಪುರಕ್ಕೆ ಬಂದು ತೋರಿಸುತ್ತೇನೆ, ಅವನ ವಿರುದ್ಧ ಹೋರಾಡುತ್ತೇನೆ. ಅವನನ್ನು ಸೋಲಿಸಲು ಕುಮಾರಸ್ವಾಮಿಗೆ ಬೆಂಬಲ ನೀಡಲು ಸಿದ್ದನಿದ್ದೇನೆ. ನನ್ನ ತಮ್ಮನನ್ನು ಕನಕಪುರದಲ್ಲಿ ಕಣಕ್ಕಿಳಿಸುತ್ತೇನೆ ಎಂದರು.

ದೂರನ್ನು ಡಿಕೆಶಿ ವಿರುದ್ಧ ದೂರು ನೀಡುತ್ತೇನೆ. ಅಟ್ರಾಸಿಟಿ ಮೂಲಕ ಒಳಗೆ ಹಾಕಿಸುತ್ತೇನೆ. ನನ್ನ ಬಳಿ 11 ದಾಖಲೆಗಳಿವೆ, ಎಸ್‌ಐಟಿಗೆ ನೀಡುತ್ತೇನೆ ಎಂದರು.

ನಿಮ್ಮ ಹೆಸರೇಳಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಯುವತಿ ಹೇಳಿದ್ದಾಳೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಏನೇ ಆದರೂ ಡಿ.ಕೆ.ಶಿ ಕಾರಣ.. ಗಣಪತಿ ಕೇಸ್ ಏನಾಯ್ತು? ಕಾನೂನು ಇದೆ ದೇಶದಲ್ಲಿ ಎಂದರು.

ರಮೇಶ್ ಜಾರಕಿಹೊಳಿ ಪತ್ರಿಕಾಗೋಷ್ಠಿಗು ಮುನ್ನವೇ ಯುವತಿಯು ಪೋಷಕರು ಪತ್ರಿಕಾಗೋಷ್ಠಿ ನಡೆಸಿ ನಮ್ಮ ಮಗಳನ್ನು ನಮಗೆ ಒಪ್ಪಿಸಿ ಎಂದಿದ್ದಾರೆ. ಯುವತಿಯ ತಂದೆ ಮಾತನಾಡಿ ನಾವು ಎಸ್ಟಿ ಜನ ಎಂದು ತಿಳಿದು ನಮ್ಮನ್ನು ಹೀಗೆ ನಡೆಸಿಕೊಳ್ಳಲಾಗುತ್ತಿದೆ. ನಮ್ಮ ಬಳಿ ಆಡಿಯೋ ಇದೆ. ಅವಳನ್ನು ಒತ್ತೆಯಾಳು ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.

ಯುವತಿಯ ಸಹೋದರ ಮಾತನಾಡಿ, ನಮ್ಮ ಅಕ್ಕನನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದೀರಿ. ಈ ರೀತಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಸಂತ್ರಸ್ತೆಗೆ ಭಯ ಹುಟ್ಟಿಸುತ್ತಿರುವ ರಮೇಶ್ ಜಾರಕಿಹೊಳಿ ಬಂಧಿಸಿ: ಮಹಿಳಾ ಕಾಂಗ್ರೆಸ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...