Homeಕರ್ನಾಟಕಕಂಪೆನಿ ಹಠಮಾರಿ ದೋರಣೆ ಕೈಬಿಡದಿದ್ದರೆ ನಾನೇ ಹೋರಾಟಕ್ಕಿಳಿಯುತ್ತೇನೆ: ಟೊಯೊಟಾ ಕಾರ್ಮಿಕರ ಬೆಂಬಲಕ್ಕೆ ಡಿಕೆ. ಸುರೇಶ್

ಕಂಪೆನಿ ಹಠಮಾರಿ ದೋರಣೆ ಕೈಬಿಡದಿದ್ದರೆ ನಾನೇ ಹೋರಾಟಕ್ಕಿಳಿಯುತ್ತೇನೆ: ಟೊಯೊಟಾ ಕಾರ್ಮಿಕರ ಬೆಂಬಲಕ್ಕೆ ಡಿಕೆ. ಸುರೇಶ್

ಹೋರಾಟ 46 ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಮ್‌ ಆದ್ಮಿ ಪಕ್ಷ ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ

- Advertisement -
- Advertisement -

ಟೊಯೊಟಾ ಕಿರ್ಲೋಸ್ಕರ್‌ ಆಡಳಿತ ಮಂಡಳಿಯ ವಿರುದ್ದ ಅಲ್ಲಿನ ಕಾರ್ಮಿಕರುವ ನಡೆಸುತ್ತಿರುವ ಹೋರಾಟಕ್ಕೆ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಬೆಂಬಲ ನೀಡಿದ್ದು, “ಕಂಪೆನಿ ತನ್ನ ಹಠಮಾರಿ ದೋರಣೆ ಕೈಬಿಟ್ಟು, ಕಾರ್ಮಿಕರ ಅಮಾನತು ಆದೇಶ ಹಿಂಪಡೆಯಬೇಕು, ಇಲ್ಲವಾದರೆ ನಾನೇ ಹೋರಾಟದ ನೇತೃತ್ವ ವಹಿಸುತ್ತೇನೆ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಟೊಯೊಟಾ ಕಿಲೋಸ್ಕರ್‌ ಆಡಳಿತ ಮಂಡಳಿಯ ದುರ್ವರ್ತನೆಯ ವಿರುದ್ದ ಕಾರ್ಮಿಕರು ನಡೆಸುತ್ತಿರುವ ಹೋರಾಟ ಇಂದಿಗೆ 46 ನೇ ದಿನಕ್ಕೆ ಕಾಲಿಟ್ಟಿದ್ದು, ಬುಧವಾರ ಸ್ಥಳೀಯ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಹೋರಾಟ ನಿರತ ಕಾರ್ಮಿಕರನ್ನು ಬೇಟಿ ಮಾಡಿ ಬೆಂಬಲ ಘೋಷಿಸಿದರು.

ಇದನ್ನೂ ಓದಿ:  ಟೊಯೋಟಾ ಬಿಕ್ಕಟ್ಟು ಶಮನಕ್ಕೆ ಸರ್ಕಾರ ಮಧ್ಯಪ್ರವೇಶಿಸಬೇಕು: ಕುಮಾರಸ್ವಾಮಿ

ಪ್ರತಿಭಟನಾ ನಿರತ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, “ಮೊದಲ ದಿನದಿಂದಲೂ ನಿಮ್ಮ ಹೋರಾಟದ ಬಗ್ಗೆ ಮಾಹಿತಿ ಪಡೆಯುತ್ತಿದ್ದೆ, ಕಾರ್ಮಿಕರು ಹಾಗೂ ಆಡಳಿತ ಮಂಡಳಿಯ ಸಂಬಂಧ ಕೌಟುಂಬಿಕವಾದುದು ಅವರವರೆ ಕುಳಿತು ಮಾತನಾಡಿ ಬಗೆಹರಿಸಿ ಕೊಳ್ಳಲಿ, ನಾವು ಬಂದರೆ ರಾಜಕಾರಣವಾಗುತ್ತದೆ ಎಂದು ಭಾವಿಸಿದ್ದೆ. ಆದರೆ ಆ ರೀತಿ ಆಗಲಿಲ್ಲ, ಕಾರ್ಮಿಕ ಇಲಾಖೆಯಾಗಲಿ, ಸರ್ಕಾರವಾಗಲಿ ಬಗೆಹರಿಸದಿರುವುದನ್ನು ಕಂಡು ನಾನೆ ಬಂದಿದ್ದೇನೆ” ಎಂದು ಹೇಳಿದ್ದಾರೆ.

“ಇಲ್ಲಿಗೆ ಬರುವ ಮುಂಚೆ ನಾನೇ ಆಡಳಿತ ಮಂಡಳಿಯ ಜೊತೆ 2 ಗಂಟೆ ಸಭೆ ಮಾಡಿ ಪ್ರಯತ್ನ ಪಟ್ಟೆ, ಆದರೆ ಆಡಳಿತ ಮಂಡಳಿಯ ಹಠಮಾರಿ ಧೋರಣೆಯಿಂದಾಗಿ ಸಮಸ್ಯೆ ಜಟಿಲವಾಗುತ್ತಿದೆ. ಆಡಳಿತ ಮಂಡಳಿಯು ಕಾರ್ಮಿಕ ಶೋಷಣೆ ಮಾಡುವುದರಲ್ಲಿ ಬೇರೆ ಸಂಸ್ಥೆಗಳಿಗೆ ಪ್ರೇರಣೆ ನೀಡುತ್ತಿದೆ. ಶೋಷಣೆಯನ್ನು ಈ ಕೂಡಲೇ ನಿಲ್ಲಿಸಬೇಕು. ನಮ್ಮ ನೆಲ, ಜಲ ಹಾಗೂ ಕಾರ್ಮಿಕರ ಬೆವರಿನ ಶಕ್ತಿಯಿಂದ ಇಂದು ಸಂಸ್ಥೆಯು ಈ ಮಟ್ಟಕ್ಕೆ ಬೆಳೆದಿದೆ. ಅಮಾನತಾದ 65 ಹಾಗೂ ವಜಾಗೊಂಡ 6 ಸದಸ್ಯರನ್ನು ಈ ಕೂಡಲೇ ಕೆಲಸ ತೆಗೆದುಕೊಳ್ಳಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಯಾವುದೇ ಕಾರ್ಮಿಕರಿಂದ ತಪ್ಪಾಗಿದ್ದರೆ ಕಾರ್ಮಿಕ ಸಂಘದ ಜೊತೆ ಮಾತನಾಡಿ ಸೂಕ್ತ ಕ್ರಮ ತೆಗೆದುಕೊಳ್ಳಲಿ, ಆಡಳಿತ ಮಂಡಳಿ 48 ಗಂಟೆಗಳಲ್ಲಿ ಸಮಸ್ಯೆಯನ್ನು ಕಾರ್ಮಿಕ ಸಂಘದ ಜೊತೆಗೆ ಮಾತನಾಡಿ ಇತ್ಯರ್ಥ ಪಡಿಸದಿದ್ದರೆ, ನಾನೇ ಕಾರ್ಮಿಕರ ಜೊತೆ ಸೇರಿ ಪ್ರತಿಭಟನೆ ಮಾಡುತ್ತೇನೆ. ಈ ಗೌರವದ ಬದುಕಿಗಾಗಿ ನಡೆಯುತ್ತಿರುವ ನ್ಯಾಯ ಸಮ್ಮತವಾದ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ, ನಿಮ್ಮ ಹೋರಾಟ ಯಶಸ್ವಿಯಾಗಲಿದೆ” ಎಂದು ಹೇಳಿದ್ದಾರೆ.

ಅಲ್ಲದೆ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಸುಧಾಕರ್ ಲಾಲ್ ಹೋರಾಟ ಸ್ಥಳಕ್ಕೆ ಭೇಟಿ ನೀಡಿ ತಮ್ಮ ಕೈಲಾದ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

ಮುಖ್ಯಮಂತ್ರಿಗಳೇ ಟೊಯೋಟಾ, ವಿಸ್ಟ್ರಾನ್ ಕಂಪೆನಿಗಳ ಕಾರ್ಮಿಕರ ಭವಿಷ್ಯ ಕಾಪಾಡಿ: ಆಮ್‌ ಆದ್ಮಿ ಆಗ್ರಹ

ಕೋರೋನಾ ನಂತರ ಚೈನಾ ಬಿಟ್ಟು ಭಾರತದ ಕಡೆ ಮುಖಮಾಡುತ್ತಿದ್ದ ವಿಶ್ವದ ಪ್ರತಿಷ್ಠಿತ ಕಂಪೆನಿಗಳು
ವಿಸ್ಟ್ರಾನ್ ಹಾಗೂ ಟೊಯೋಟಾ ಕಂಪೆನಿಗಳ ಬಿಕ್ಕಟ್ಟು ವಿಚಾರದಲ್ಲಿ ಕರ್ನಾಟಕ ಸರ್ಕಾರ ನಡೆದುಕೊಂಡ ಬೇಜವಾಬ್ದಾರಿ ನೀತಿಯಿಂದ ಭಾರತಕ್ಕೆ ಬರಲು ಹಿಂದೇಟು ಹಾಕುತ್ತಿವೆ. ಇದರಿಂದ ದೇಶದ, ಕರ್ನಾಟಕದ ಮಾನ ರಾಷ್ಟ್ರ ಮಟ್ಟದಲ್ಲಿ ಹರಾಜಾಗಿದೆ. ಈ ವೈಫಲ್ಯವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರೆ ಹೊರಬೇಕು, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕಾರ್ಮಿಕ ಮಂತ್ರಿ ಶಿವರಾಂ ಹೆಬ್ಬಾರ್ ಅಂತಹ ನಾಲಾಯಕ್ ಮಂತ್ರಿಗಳನ್ನು ಸಂಪುಟದಿಂದ ಕಿತ್ತೊಗೆಯಬೇಕು ಎಂದು ಆಮ್ ಆದ್ಮಿ ಪಕ್ಷ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಆಗ್ರಹಿಸಿದ್ದಾರೆ.

ಗುರುವಾರ ನಡೆದ ಪ್ರತಿಕಾ ಗೋಷ್ಠಿಯಲ್ಲಿ ಮಾತನಾಡಿ, ಕೊರೋನಾ ನಂತರ ಆಗಬಹುದಾಗಿದ್ದ ಔದ್ಯೋಗಿಕ ಕ್ರಾಂತಿಗೆ ಕರ್ನಾಟಕದಲ್ಲಿ ನಡೆದ ಘಟನೆಗಳಿಂದ ಲಕ್ಷಾಂತರ ಉದ್ಯೋಗ ನಷ್ಟವಾಗಿದೆ. 60 ಲಕ್ಷ ಉದ್ಯೋಗ ಸೃಷ್ಟಿಸುತ್ತೇನೆ ಎಂದು ಬೊಗಳೆ ಬಿಟ್ಟ ಮುಖ್ಯಮಂತ್ರಿಗಳೇ ಮೊದಲು ಟೊಯೋಟಾ ಹಾಗೂ ವಿಸ್ಟ್ರಾನ್ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿರುವ 20 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳ ಭವಿಷ್ಯ ಕಾಪಾಡಿ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಟೊಯೋಟಾ ಕಾರ್ಮಿಕರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...