Homeಮುಖಪುಟ"ನಾನು ಈ ಬಗ್ಗೆ ಪರಿಶೀಲಿಸುತ್ತೇನೆ": ಬೀದಿ ನಾಯಿಗಳ ಕುರಿತ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಸಿಜೆಐ...

“ನಾನು ಈ ಬಗ್ಗೆ ಪರಿಶೀಲಿಸುತ್ತೇನೆ”: ಬೀದಿ ನಾಯಿಗಳ ಕುರಿತ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಸಿಜೆಐ ಪ್ರತಿಕ್ರಿಯೆ

- Advertisement -
- Advertisement -

ಬೀದಿ ನಾಯಿಗಳಿಗೆ ಸಂಬಂಧಿಸಿದ ಅರ್ಜಿಯನ್ನು ತುರ್ತು ವಿಚಾರಣೆಗಾಗಿ ಬುಧವಾರ (ಆ.13) ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ನೇತೃತ್ವದ ಪೀಠದ ಮುಂದೆ ಪ್ರಸ್ತಾಪಿಸಲಾಯಿತು.

ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ. “ನಾನು ಈ ಬಗ್ಗೆ ಪರಿಶೀಲಿಸುತ್ತೇನೆ” ಎಂದು ಅರ್ಜಿದಾರರಿಗೆ ಭರವಸೆ ನೀಡಿದರು.

ಕಾನ್ಫರೆನ್ಸ್ ಫಾರ್ ಹ್ಯೂಮನ್ ರೈಟ್ಸ್ (ಇಂಡಿಯಾ) ಸಂಸ್ಥೆಯ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರ ಪೀಠದ ಮುಂದೆ ಸಂಸ್ಥೆಯ ಪರ ವಕೀಲ ಪ್ರಸ್ತಾಪಿಸಿದರು. ಬೀದಿ ನಾಯಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಮತ್ತೊಂದು ಪೀಠವು ಈಗಾಗಲೇ ಆದೇಶವನ್ನು ನೀಡಿದೆ ಎಂದು ಸಿಜೆಐ ಗಮನಸೆಳೆದರು.

ಆಗಸ್ಟ್ 11ರಂದು, ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರ ಪೀಠವು, “ನಾಯಿ ಕಡಿತದ ಪ್ರಕರಣಗಳು ‘ಅತ್ಯಂತ ಭೀಕರ’ ಪರಿಸ್ಥಿತಿಗೆ ಕಾರಣವಾಗಿವೆ ಎಂದಿತ್ತು. ದೆಹಲಿ-ಎನ್‌ಸಿಆರ್‌ನಲ್ಲಿರುವ ಎಲ್ಲಾ ಬೀದಿನಾಯಿಗಳನ್ನು ‘ಸಾಧ್ಯವಾದಷ್ಟು ಬೇಗ’ ಶಾಶ್ವತವಾಗಿ ಸ್ಥಳಾಂತರಿಸಲು ಆದೇಶಿಸಿತ್ತು.

ಬೀದಿ ನಾಯಿಗಳ ಸಮಸ್ಯೆಗೆ ಸಂಬಂಧಿಸಿದ ಅರ್ಜಿಗಳನ್ನು ಆಯಾ ಹೈಕೋರ್ಟ್‌ಗಳಿಗೆ ವರ್ಗಾಯಿಸಿ ನ್ಯಾಯಮೂರ್ತಿ ಜೆ.ಕೆ ಮಹೇಶ್ವರಿ ನೇತೃತ್ವದ ಪೀಠವು ಮೇ 2024ರಲ್ಲಿ ಹೊರಡಿಸಿದ ಆದೇಶವನ್ನು ಬುಧವಾರ ವಕೀಲರು ಸಿಜೆಐ ಪೀಠದ ಮುಂದೆ ಉಲ್ಲೇಖಿಸಿದರು. ‘ಈ ಬಗ್ಗೆ ನಾವು ಪರಿಶೀಲಿಸುತ್ತೇವೆ’ ಎಂದು ಸಿಜೆಐ ಹೇಳಿದರು.

ಬೀದಿ ನಾಯಿಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದನ್ನು ನಿಯಂತ್ರಿಸಲು ನಿಯಮಿತ ಸಂತಾನಹರಣ ಮತ್ತು ರೋಗನಿರೋಧಕ ಕಾರ್ಯಕ್ರಮಗಳನ್ನು ಕಡ್ಡಾಯಗೊಳಿಸುವ 2001ರ ಪ್ರಾಣಿಗಳ ಜನನ ನಿಯಂತ್ರಣ (ನಾಯಿ) ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಕಾನ್ಫರೆನ್ಸ್ ಫಾರ್ ಹ್ಯೂಮನ್ ರೈಟ್ಸ್ (ಇಂಡಿಯಾ) ಸಲ್ಲಿಸಿದ ಅರ್ಜಿಯಲ್ಲಿ ಹೇಳಿದೆ.

ಆಗಸ್ಟ್ 11ರ ತನ್ನ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ನಾಯಿ ಆಶ್ರಯಗಳನ್ನು ಕಾಲಾನಂತರದಲ್ಲಿ ಹೆಚ್ಚಿಸಬೇಕಾಗುತ್ತದೆ ಎಂದು ಹೇಳಿತ್ತು. ಆರರಿಂದ ಎಂಟು ವಾರಗಳಲ್ಲಿ ಸುಮಾರು 5,000 ನಾಯಿಗಳ ಆಶ್ರಯವನ್ನು ಸ್ಥಾಪಿಸುವ ಮೂಲಕ ಈ ಕಾರ್ಯ ಪ್ರಾರಂಭಿಸಲು ದೆಹಲಿ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ಇದಲ್ಲದೆ, ನಾಯಿಗಳ ಸ್ಥಳಾಂತರ ಕಾರ್ಯಾಚರಣೆ ವೇಳೆ ಯಾವುದೇ ರೀತಿಯ ಅಡಚಣೆ ಉಂಟಾದರೆ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ನ್ಯಾಯಪೀಠ ಎಚ್ಚರಿಸಿತ್ತು. ಇದು ನ್ಯಾಯಾಲಯವು ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಕಾರಣವಾಗಬಹುದು ಎಂದಿತ್ತು

ನಾಯಿ ಕಡಿತ ಪ್ರಕರಣ: ಬಿಬಿಎಂಪಿ ವ್ಯಾಪ್ತಿಯ ಆರು ತಿಂಗಳಲ್ಲಿ 13,800 ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...