Homeಮುಖಪುಟ5 ಜನ ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸುತ್ತೇನೆ : ರಮೇಶ್‌ ಜಾರಕಿಹೊಳಿ

5 ಜನ ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸುತ್ತೇನೆ : ರಮೇಶ್‌ ಜಾರಕಿಹೊಳಿ

- Advertisement -
- Advertisement -

ಅಧಿಕಾರಕ್ಕಾಗಿ ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿರುವ ಬೆನ್ನಿಗೆ ಹೊಸ ಬಾಂಬ್‌ ಸಿಡಿಸಿರುವ ಸಚಿವ ರಮೇಶ್‌ ಜಾರಕಿಹೊಳಿ, “ಬಿಜೆಪಿ ಹೈಕಮಾಂಡ್ ಅನುಮತಿ ನೀಡಿದರೆ ನಾನು ಈಗಲೂ 5 ಜನ ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸುತ್ತೇನೆ” ಎಂದು ಹೇಳುವ ಮೂಲಕ ಮತ್ತೊಮ್ಮೆ ಆಪರೇಷನ್‌ ಕಮಲದ ಭೀತಿಯನ್ನು ಮುಂದಿಟ್ಟಿದ್ದಾರೆ.

ಇಂದು ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಮಾತನಾಡಿದ ಅವರು, “ಈಗಾಗಲೇ ಕಾಂಗ್ರೆಸ್‌ ಪಕ್ಷದ ಇಪ್ಪತ್ತೆರಡು ಜನ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಟ್ರಯಲ್ ಬೇಸ್ ಆಗಿ ಈಗಲೂ ಐದು ಮಂದಿ ಶಾಸಕರ ರಾಜೀನಾಮೆ ಕೊಡಿಸಲು ನಾನು ಸಿದ್ದ” ಎಂದು ಹೇಳಿದ್ದಾರೆ.

ಬಿಜೆಪಿ ಹೈಕಮಾಂಡ್ ಅನುಮತಿ ನೀಡಿದರೆ ಒಂದು ವಾರದೊಳಗೆ ಅವರ ರಾಜೀನಾಮೆ ಕೊಡಿಸಿ ಬಿಜೆಪಿ ಪಕ್ಷಕ್ಕೆಗೆ ಸೇರ್ಪಡೆಗೊಳಿಸುತ್ತೇನೆ” ಎಂದು ಹೇಳುವ ಮೂಲಕ ಅವರು ಕಾಂಗ್ರೆಸ್‌ ಪಾಳಯದಲ್ಲಿ ಮತ್ತು ರಾಜ್ಯ ರಾಜಕೀಯದಲ್ಲಿ ಮತ್ತೆ ತಲ್ಲಣ ಸೃಷ್ಟಿಸಿದ್ದಾರೆ.

ಇದೇ ವೇಳೆ ಬಿಜೆಪಿ ಪಕ್ಷದ ಒಳಗೆ ನಡೆಯುತ್ತಿರುವ ಭಿನ್ನಮತೀಯ ಚಟುವಟಿಕೆ ಕುರಿತು ಮಾತನಾಡಿರುವ ರಮೇಶ್‌ ಜಾರಕಿಹೊಳಿ, “ನಾನು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪರ ಇದ್ದೇನೆ. ಬಿಜೆಪಿ ಸರ್ಕಾರ ಸೇಫ್ ಆಗಿದೆ. ಯಾವುದೇ ಭಿನ್ನಮತವೂ ಇಲ್ಲ. ಉಮೇಶ್ ಕತ್ತಿ ನನ್ನ ಸ್ನೇಹಿತರು, ನಿನ್ನೆ ಫೋನ್ ಮಾಡಿ ಚರ್ಚಿಸಿದರು ಎಂದಿದ್ದಾರೆ.

ಚರ್ಚೆ ಮಾಡುವುದು ಭಿನ್ನಮತ ಅಲ್ಲ. ಅವರಿಗೆ ಯಾವು ರೀತಿ ಅಸಮಧಾನ ಆಗಿದೆ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ. ಅವರೊಡನೆ ಮತ್ತೆ ಚರ್ಚಿಸುತ್ತೇನೆ. ಬಿಜೆಪಿ ಸರ್ಕಾರ ಮೂರು ವರ್ಷ ಅಷ್ಟೇ ಅಲ್ಲ, ಅದರ ಮುಂದಿನ ಐದು ವರ್ಷ ಕಾಲವು ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ತನಗೆ ಮಂತ್ರಿ ಸ್ಥಾನ, ಸಹೋದರನಿಗೆ ಪರಿಷತ್; ಬ್ಲಾಕ್‌ಮೇಲ್‌ಗೆ ಇಳಿದರಾ ಉಮೇಶ್‌ ಕತ್ತಿ? 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...