Homeಮುಖಪುಟ‘ಗುಜರಾತ್‌ ಫೈಲ್ಸ್‌’ ಸಿನಿಮಾ ಮಾಡುವೆ, ಪಿಎಂ ಸಹಕರಿಸಬೇಕು: ವಿನೋದ್ ಕಾಪ್ರಿ

‘ಗುಜರಾತ್‌ ಫೈಲ್ಸ್‌’ ಸಿನಿಮಾ ಮಾಡುವೆ, ಪಿಎಂ ಸಹಕರಿಸಬೇಕು: ವಿನೋದ್ ಕಾಪ್ರಿ

- Advertisement -
- Advertisement -

ವಿವೇಕ್ ಅಗ್ನಿಹೋತ್ರಿಯವರ `ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಗಳು ನಡೆಯುತ್ತಿವೆ. ಕಾಶ್ಮೀರ್‌ ಫೈಲ್ಸ್‌ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದು, ಈ ಸಿನಿಮಾ ಅರ್ಧ ಸತ್ಯವನ್ನಷ್ಟೇ ಹೇಳುತ್ತಿದೆ ಎಂಬ ಟೀಕೆಗಳು ವ್ಯಕ್ತವಾಗಿವೆ.

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಸಿನಿಮಾ ನೋಡಿ ಪ್ರತಿಕ್ರಿಯೆ ನೀಡಿದ್ದು, ಚಿತ್ರದಲ್ಲಿ ಸತ್ಯವನ್ನು ತೋರಿಸಲಾಗಿದ್ದು, ಜನರು ತಪ್ಪದೇ ನೋಡಬೇಕು ಎಂದಿದ್ದಾರೆ.

ಕಾಶ್ಮೀರ್‌ ಫೈಲ್ಸ್‌ ಅಷ್ಟೇ ಅಲ್ಲ, ದಲಿತ್‌ ಫೈಲ್ಸ್‌, ಗುಜರಾತ್ ಫೈಲ್ಸ್‌, ನೆಲ್ಲಿ ಫೈಲ್ಸ್‌ ಹೀಗೆ ಹಲವು ಕಥೆಗಳ ಕುರಿತು ಸಿನಿಮಾ ಮಾಡಬೇಕು. ಸರ್ಕಾರ ಒಂದು ಸಿನಿಮಾವನ್ನು ತನ್ನ ಪ್ರೊಪಗಾಂಡಕ್ಕೆ ಬಳಸಬಾರದು ಎಂಬ ಚರ್ಚೆ ಮುನ್ನೆಲೆಯಲ್ಲಿದೆ.

ಇದರ ನಡುವೆ ಬಾಲಿವುಡ್ ನಿರ್ದೇಶಕ ವಿನೋದ್ ಕಾಪ್ರಿ ಶೀಘ್ರದಲ್ಲೇ ಗುಜರಾತ್ ಫೈಲ್ಸ್ ಎಂಬ ಹೊಸ ಚಿತ್ರವನ್ನು ಮಾಡುವುದಾಗಿ ಘೋಷಿಸಿದ್ದಾರೆ. ಇದರೊಂದಿಗೆ ಪ್ರಧಾನಿ ಮೋದಿಯವರಿಗೆ ಕೆಲವು ಪ್ರಶ್ನೆಗಳನ್ನೂ ಕೇಳಿದ್ದಾರೆ. ‘ಗುಜರಾತ್ ಫೈಲ್ಸ್‌’ ಸಂಬಂಧ ಎರಡು ಟ್ವೀಟ್‌ ಮಾಡಿದ್ದಾರೆ.

ವಿನೋದ್ ಕಾಪ್ರಿ ಅವರು ತಮ್ಮ ಮೊದಲ ಟ್ವೀಟ್‌ನಲ್ಲಿ ಪ್ರಧಾನಿ ಮೋದಿಯನ್ನು ಟ್ಯಾಗ್ ಮಾಡಿದ್ದು, ‘ಗುಜರಾತ್ ಫೈಲ್ಸ್ ಹೆಸರಿನಲ್ಲಿ, ಕಲೆ ಹಾಗೂ ಸತ್ಯಗಳ ಆಧಾರದ ಮೇಲೆ ಚಲನಚಿತ್ರ ಮಾಡಲು ನಾನು ಸಿದ್ಧನಿದ್ದೇನೆ. ಅದರಲ್ಲಿ ನಿಮ್ಮ ಪಾತ್ರವನ್ನು ಸಹ ವಿವರವಾಗಿ ತೋರಿಸಲಾಗುತ್ತಿದೆ’ ಎಂದಿದ್ದಾರೆ. ಮುಂದುವರಿದು, ‘ನರೇಂದ್ರ ಮೋದಿ ಜಿ ಚಿತ್ರದ ಬಿಡುಗಡೆಯನ್ನು ನಿಲ್ಲಿಸುವುದಿಲ್ಲ ಎಂದು ನೀವು ಇಂದು ದೇಶದ ಮುಂದೆ ನನಗೆ ಭರವಸೆ ನೀಡುತ್ತೀರಾ?’ ಎಂದು ಕೇಳಿದ್ದಾರೆ.

ಎರಡನೇ ಟ್ವೀಟ್‌ನಲ್ಲಿ, ವಿನೋದ್ ಕಾಪ್ರಿ, “ನನ್ನ ಈ ಟ್ವೀಟ್ ನಂತರ, ನಾನು ಕೆಲವು ನಿರ್ಮಾಪಕರೊಂದಿಗೆ ಮಾತುಕತೆ ನಡೆಸಿದ್ದೇನೆ. ಅವರು ಗುಜರಾತ್ ಫೈಲ್ಸ್ ನಿರ್ಮಿಸಲು ಸಿದ್ಧರಾಗಿದ್ದಾರೆ. ಈಗ ಪ್ರಧಾನಿಯವರು ಹೇಳುತ್ತಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಭರವಸೆಯನ್ನು ಈ ಚಿತ್ರಕ್ಕೂ ನೀಡಬೇಕು ಎಂಬ ಭರವಸೆ ಮಾತ್ರ ಅವರಿಗೆ ಬೇಕಾಗಿದೆ” ಎಂದಿದ್ದಾರೆ. ವಿನೋದ್ ಕಾಪ್ರಿ ಅವರ ಈ ಎರಡೂ ಟ್ವೀಟ್‌ಗಳು ಹೆಚ್ಚು ವೈರಲ್ ಆಗುತ್ತಿವೆ.

‘ಕಾಶ್ಮೀರ್‌ ಫೈಲ್ಸ್’ ಎನ್ನುವವರಿಗೆ ‘ದಲಿತ್‌ ಫೈಲ್ಸ್’ ಕಾಣುವುದಿಲ್ಲವೇ?

ಡಿಸೆಂಬರ್‌ 15, 2021ರಲ್ಲಿ ಪ್ರಕಟವಾಗಿರುವ ಸುದ್ದಿ ಇದು. ಆರ್‌ಟಿಐ ಅರ್ಜಿಗೆ ಪ್ರತಿಕ್ರಿಯೆ ನೀಡಿದ್ದ ಶ್ರೀನಗರ ಜಿಲ್ಲಾ ಪೊಲೀಸ್ ಪ್ರಧಾನ ಕಚೇರಿಯ ಡಿಎಸ್‌‌ಪಿ, “1990ರಲ್ಲಿ ಭಯೋತ್ಪಾದನೆ ಆರಂಭವಾದಾಗಿನಿಂದ 1,724 ಜನರನ್ನು ಕೊಲ್ಲಲಾಗಿದೆ. ಅದರಲ್ಲಿ 89 ಕಾಶ್ಮೀರಿ ಪಂಡಿತರು ಸೇರಿದ್ದಾರೆ. 89 ಕಾಶ್ಮೀರಿ ಪಂಡಿತರನ್ನು ಹೊರತುಪಡಿಸಿ, ಅದೇ ಅವಧಿಯಲ್ಲಿ 1,635 ಇತರ ಧರ್ಮದ ಜನರೂ ಕೊಲೆಯಾಗಿದ್ದಾರೆ” ಎಂದಿದ್ದರು.

ಯಾವುದೇ ಕೊಲೆ, ಅಪರಾಧ ಖಂಡನೀಯ. ಆದರೆ ಕಾಶ್ಮೀರ್ ಫೈಲ್ಸ್ ಎನ್ನುವವವರು ದಲಿತ್ ಫೈಲ್ಸ್‌ಗಳ ಬಗ್ಗೆ ಯಾಕೆ ಮೌನ ವಹಿಸುತ್ತಾರೆ ಎಂದು ಕೇಳಲಾಗುತ್ತಿದೆ. ನ್ಯಾಷನಲ್‌ ಕ್ರೈಮ್‌ ರೆಕಾರ್ಡ್ಸ್ ಬ್ಯೂರೋ (ಎನ್‌ಸಿಆರ್‌ಬಿ) ಅಂಕಿಅಂಶಗಳ ಪ್ರಕಾರ, 2011 ಮತ್ತು 2020ರ ನಡುವೆ ನಡೆದ ದಲಿತರ ಮೇಲಿನ ದೌರ್ಜನ್ಯಗಳ ಸಂಖ್ಯೆ 4,15,821. ಎನ್‌ಸಿಆರ್‌ಬಿ ಮಾಹಿತಿಯ ಪ್ರಕಾರ, 2011ರಲ್ಲಿ ದಲಿತರ ವಿರುದ್ಧ 33,719 ಅಪರಾಧ ಪ್ರಕರಣಗಳು ದಾಖಲಾಗಿವೆ. 2020ರಲ್ಲಿ ಈ ಸಂಖ್ಯೆ 50,291ಕ್ಕೆ ಏರಿದೆ. ಅಂದರೆ ಒಂದು ದಶಕದ ಅವಧಿಯಲ್ಲಿ ದಲಿತರ ಮೇಲೆ ಹಲ್ಲೆಗಳು ಗಣನೀಯವಾಗಿ ಹೆಚ್ಚಾದವು. ಮುಖ್ಯವಾಗಿ ಕೇಸರಿ ಪಕ್ಷ ಆಡಳಿತವಿರುವಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ದ್ವಿಗುಣವಾಗುತ್ತಿವೆ. ಕಳೆದ ಒಂದು ದಶಕದ ಅವಧಿಯಲ್ಲಿ ಅತಿ ಹೆಚ್ಚು ಪ್ರಕರಣಗಳು ಉತ್ತರ ಪ್ರದೇಶ (95,751), ಬಿಹಾರ (63,116), ರಾಜಸ್ಥಾನ (58,945), ಮಧ್ಯಪ್ರದೇಶ (44,469) ಮತ್ತು ಆಂಧ್ರಪ್ರದೇಶ (26,881) ರಾಜ್ಯಗಳಲ್ಲಿ ದಾಖಲಾಗಿವೆ. (ವಿವರಗಳಿಗೆ ‘ಇಲ್ಲಿ’ ಓದಿ)


ಇದನ್ನೂ ಓದಿರಿ: ಅರ್ಧಸತ್ಯ ಹೇಳುವ ಕಾಶ್ಮೀರ್ ಫೈಲ್ಸ್: ವೀಕ್ಷಣೆಯ ಬಳಿಕ ಛತ್ತೀಸ್‌ಗಡ ಸಿಎಂ ವಿಮರ್ಶೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...