Homeಮುಖಪುಟಯಾವ ಪಕ್ಷದಿಂದಲೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಸ್ನೇಹಿತರ ಪರ ಪ್ರಚಾರ ಮಾಡುತ್ತೇನೆ ಅಷ್ಟೇ: ಸುದೀಪ್‌ ಸ್ಪಷ್ಟನೆ

ಯಾವ ಪಕ್ಷದಿಂದಲೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಸ್ನೇಹಿತರ ಪರ ಪ್ರಚಾರ ಮಾಡುತ್ತೇನೆ ಅಷ್ಟೇ: ಸುದೀಪ್‌ ಸ್ಪಷ್ಟನೆ

- Advertisement -
- Advertisement -

ಕನ್ನಡದ ನಟ ಸುದೀಪ್ ಬಿಜೆಪಿ ಪಕ್ಷ ಸೇರುತ್ತಾರೆ ಎಂಬ ವದಂತಿಗಳನ್ನು ಅಲ್ಲಗೆಳೆದಿರುವ ಅವರು, ಯಾವ ಪಕ್ಷದಿಂದಲೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಸ್ನೇಹಿತರ ಪರ, ಆತ್ಮೀಯರ ಪರ ಪ್ರಚಾರ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇಂದು ಮಧ್ಯಾಹ್ನ ಸಿಎಂ ಬಸವರಾಜ ಬೊಮ್ಮಾಯಿಯವರು ಕರೆದಿರುವ ಪತ್ರಿಕಾಗೋಷ್ಟಿಯಲ್ಲಿ ಭಾಗವಹಿಸುತ್ತೇನೆ. ಅಲ್ಲಿ ನನ್ನ ನಿಲುವು ತಿಳಿಸುತ್ತೇನೆ” ಎಂದಿದ್ದಾರೆ.

ನಾನು ಯಾರಿಗೂ ಟಿಕೆಟ್ ಕೊಡಿಸುವಷ್ಟು ದೊಡ್ಡವನಲ್ಲ. ನನಗೆ ಸಹಾಯ ಮಾಡಿದವರಿಗೆ ಪ್ರಚಾರ ಮಾಡುವ ಮೂಲಕ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದಿದ್ದಾರೆ.

ನನಗೆ ರಾಜಕೀಯಕ್ಕೆ ಬನ್ನಿ ಎಂಬ ಒತ್ತಡ ಇರುವುದು ನಿಜ. ನನಗೆ ಮಾತ್ರವಲ್ಲ, ಬಹುತೇಕ ಕಲಾವಿದರಿಗೆ ಇರುತ್ತದೆ. ನನಗೆ ಎಲ್ಲಾ ಪಕ್ಷದಲ್ಲಿಯೂ ಆತ್ಮೀಯರಿದ್ದಾರೆ. ಹಾಗಾಗಿ ಯಾವ ಪಕ್ಷಕ್ಕೂ ಹೋಗೊಲ್ಲ. ಕೆಲವರ ಪರವಾಗಿ ನಾನು ನಿಲುವು ತೆಗೆದುಕೊಂಡಿದ್ದೇನೆ. ಅದನ್ನು ಪತ್ರಿಕಾಗೋಷ್ಟಿಯಲ್ಲಿ ತಿಳಿಸುತ್ತೇನೆ. ನಾನು ಮೂರು ಸಿನಿಮಾಗಳನ್ನು ಒಪ್ಪಿಕೊಂಡಿದ್ದು ಆ ಕಡೆ ಹೆಚ್ಚಿನ ಗಮನ ಕೊಡುತ್ತೇನೆ ಎಂದು ಸುದೀಪ್ ಹೇಳಿದ್ದಾರೆ.

ಇದನ್ನೂ ಓದಿ: ಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...