Homeಮುಖಪುಟನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ: ಮಣಿಪುರ ಸಿಎಂ ಬಿರೇನ್ ಸಿಂಗ್‌

ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ: ಮಣಿಪುರ ಸಿಎಂ ಬಿರೇನ್ ಸಿಂಗ್‌

- Advertisement -
- Advertisement -

ಈಶಾನ್ಯ ರಾಜ್ಯ ಮಣಿಪುರದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಕೊನೆಗೊಳ್ಳದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್‌ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಆಗ್ರಹಿಸಿದ್ದವು. ಇಂದು (ಜೂನ್ 30, ಶುಕ್ರವಾರ) ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುತ್ತಾರೆ ಎಂದು ಹೇಳಲಾಗಿತ್ತು ಆದರೆ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ರಾಜೀನಾಮೆ ನೀಡುವುದಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ಈ ನಿರ್ಣಾಯಕ ಘಟ್ಟದಲ್ಲಿ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ” ಎಂದು ತಿಳಿಸಿದ್ದಾರೆ.

ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರನ್ನು ರಾಜಭವನಕ್ಕೆ ಹೋಗದಂತೆ ಅವರ ಬೆಂಬಲಿಗರು ತಡೆಯುತ್ತಿದ್ದಂತೆ ಇಂಫಾಲ್‌ನಲ್ಲಿ ಹೈ ಡ್ರಾಮಾ ನಡೆಯಿತು. ಈಶಾನ್ಯ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದ ಮಧ್ಯೆ, ರಾಜ್ಯಪಾಲರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಈ ಸುದ್ದಿ ಸಿಎಂ ರಾಜೀನಾಮೆ ಸುದ್ದಿ ಕಾಡ್ಗಿಚ್ಚಿನಂತೆ ಹರಡುತ್ತಿದ್ದಂತೆ, ಅವರ ಬೆಂಬಲಿಗರು ಸಿಎಂ ನಿವಾಸದ ಮುಂದೆ ಪ್ರತಿಭಟನೆ ನಡೆಸಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬಾರದು ಎಂದು ಒತ್ತಾಯಿಸಿದರು ಎಂದು ಸ್ಥಳೀಯರೊಬ್ಬರು ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

ಮಣಿಪುರದಲ್ಲಿ ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ಹಿಂಸಾಚಾರ ನಡೆಯುತ್ತಿದ್ದರೂ, ನಿಯಂತ್ರಿಸುವಲ್ಲಿ ಬಿರೇನ್ ವಿಫಲರಾಗಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ಸಿಎಂ ರಾಜೀನಾಮಗೆ ಪ್ರತಿಪಕ್ಷಗಳ ಆಗ್ರಹ

ಮಣಿಪುರದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಆಡಳಿತದಲ್ಲಿ ಒಂದು ತಿಂಗಳಿನಿಂದ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಕಾಂಗ್ರೆಸ್ ಶನಿವಾರದಂದು ಅವರನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿದೆ.

ಮಣಿಪುರದ ಮಾಜಿ ಮುಖ್ಯಮಂತ್ರಿ ಒಕ್ರಾಮ್ ಇಬೋಬಿ ಸಿಂಗ್ ಅವರು ಸರ್ವಪಕ್ಷಗಳ ಸರಾಸರಿಯಲ್ಲಿ ಎಂಟು ಅಂಶಗಳ ಬೇಡಿಕೆಗಳ ಚಾರ್ಟರ್ ಅನ್ನು ಪ್ರಸ್ತುತಪಡಿಸಿದರು, ಇದು ಪ್ರಸ್ತುತ ಸಿಎಂ ಬಿರೇನ್ ಸಿಂಗ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸುವುದನ್ನು ಉಲ್ಲೇಖಿಸಿದೆ. ಈ ಸಭೆಯನ್ನು ಗೃಹ ಸಚಿವ ಅಮಿತ್ ಶಾ ಕರೆದಿದ್ದರು.

”ಮಣಿಪುರದ ಸಿಎಂ ಅವರನ್ನು ತಕ್ಷಣವೇ ಪದಚ್ಯುತಗೊಳಿಸುವುದು ನಮ್ಮ ಬೇಡಿಕೆಯಾಗಿದೆ. ರಾಜೀನಾಮೆ ನೀಡದೇ ಮಣಿಪುರದಲ್ಲಿ ಶಾಂತಿ ಮತ್ತು ಸಹಜತೆ ಸ್ಥಿತಿಗೆ ಮರಳಲು ಸಾಧ್ಯವಿಲ್ಲ” ಎಂದು ಹೇಳಿದ್ದರು.

ಸಭೆಯ ನಂತರ, ಒಕ್ರಾಮ್ ಇಬೋಬಿ ಸಿಂಗ್ ಅವರು ”ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಹೆಚ್ಚಿನ ಸಮಯವನ್ನು ನೀಡಿರುವುದು “ದುರದೃಷ್ಟಕರ” ಎಂದು ಅಸಮಧಾನ ಹೊರಹಾಕಿದ್ದರು. ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ಮೋದಿ ವಹಿಸಬೇಕಿತ್ತು. ಕಳೆದ 50 ದಿನಗಳಲ್ಲಿ ಮಣಿಪುರದ ಬಗ್ಗೆ ಒಂದೇ ಒಂದು ಮಾತನ್ನೂ ಆಡಿಲ್ಲ” ಎಂದು ಪ್ರಧಾನಿ ಮೋದಿಯವರ ಮೇಲೆ ದಾಳಿ ಮಾಡಿದರು.

”ರಾಜ್ಯ ಸರ್ಕಾರವು ಅತ್ಯಂತ ಅಗತ್ಯವಿರುವಾಗ ಪರಿಣಾಮಕಾರಿ ಆಡಳಿತವನ್ನು ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಮತ್ತು ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಮುಖ್ಯಮಂತ್ರಿಗಳು ತಮ್ಮ ವೈಫಲ್ಯವನ್ನು ಎರಡು ಬಾರಿ ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ. ಜನರ ಕ್ಷಮೆಯನ್ನೂ ಕೇಳಿದ್ದಾರೆ. ಕೂಡಲೇ ಮುಖ್ಯಮಂತ್ರಿಯನ್ನು ಬದಲಾಯಿಸಬೇಕು” ಎಂದು ಒಕ್ರಾಮ್ ಇಬೋಬಿ ಸಿಂಗ್ ಆಗ್ರಹಿಸಿದ್ದರು.

ಪರಿಶಿಷ್ಟ ಪಂಗಡ ಮೀಸಲಾತಿ ವಿಚಾರವಾಗಿ ಮೈತೆಯಿ ಮತ್ತು ಕುಕಿ ಸಮುದಾಯದ ನಡುವೆ ಹಿಂಸಾಚಾರ ನಡೆಯುತ್ತಿದೆ. ಇದುವರೆಗೆ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರಾಜ್ಯದಾದ್ಯಂತ ತೆರೆಯಲಾಗಿರುವ 300 ಪರಿಹಾರ ಕೇಂದ್ರಗಳಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಸಂತ್ರಸ್ತರು ಆಶ್ರಯ ಪಡೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...