Homeಅಂತರಾಷ್ಟ್ರೀಯಸಾಲ ತೀರಿಸುತ್ತೇನೆ, ನನ್ನ ವಿರುದ್ಧದ ಪ್ರಕರಣ ಕೈಬಿಡಿ: ವಿಜಯ್ ಮಲ್ಯ ಮನವಿ

ಸಾಲ ತೀರಿಸುತ್ತೇನೆ, ನನ್ನ ವಿರುದ್ಧದ ಪ್ರಕರಣ ಕೈಬಿಡಿ: ವಿಜಯ್ ಮಲ್ಯ ಮನವಿ

ವಿಜಯ್ ಮಲ್ಯ ಭಾರತದಲ್ಲಿ ಅಂದಾಜು 9,000 ಕೋಟಿ ರೂ.ಗಳ ವಂಚನೆ ಮತ್ತು ಮನಿ ಲಾಂಡರಿಂಗ್ ಆರೋಪ ಎದುರಿಸುತ್ತಿದ್ದಾರೆ.

- Advertisement -
- Advertisement -

ಭಾರತದಲ್ಲಿ ಹಣ ವಂಚನೆ ಮತ್ತು ಮನಿ ಲಾಂಡರಿಂಗ್ ಆರೋಪ ಎದುರಿಸುತ್ತಿರುವ ವಿಜಯ್ ಮಲ್ಯ ತಮ್ಮ ಸಾಲದ ಬಾಕಿ ಹಣವನ್ನು ಶೇ 100 ರಷ್ಟು ಮರುಪಾವತಿಸುತ್ತೇನೆ ಹಾಗೂ ತನ್ನ ವಿರುದ್ದದ ಪ್ರಕರಣವನ್ನು ಕೈಬಿಡಿ ಎಂದು ಸರ್ಕಾರವನ್ನು ಕೋರಿದ್ದಾರೆ.

20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜ್ ನೀಡಿದ್ದಕ್ಕಾಗಿ ಭಾರತ ಸರ್ಕಾರವನ್ನು ಅಭಿನಂದಿಸುತ್ತಾ, ತಾನು ಬಾಕಿ ಹಣವನ್ನು ಮರುಪಾವತಿ ಮಾಡುತ್ತೇನೆಂದು ಪದೇ ಪದೇ ಹೇಳಿದರೂ ನನ್ನ ಮಾತನ್ನು ನಿರ್ಲಕ್ಷಿಸಲಾಗಿದೆ ಎಂದು ವಿಷಾದಿಸಿದ್ದಾರೆ.

“ಕೊರೊನಾ ಪರಿಹಾರ ಪ್ಯಾಕೇಜ್‌ಗಾಗಿ ಸರ್ಕಾರಕ್ಕೆ ಅಭಿನಂದನೆಗಳು. ಅವರು ಬಯಸಿದಷ್ಟು ಕರೆನ್ಸಿಯನ್ನು ಮುದ್ರಿಸಬಹುದು ಆದರೆ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಸಾಲಗಳ 100% ಮರುಪಾವತಿಯನ್ನು ನೀಡುವ ನನ್ನಂತಹ ಸಣ್ಣ ಕೊಡುಗೆದಾರರನ್ನು ನಿರಂತರವಾಗಿ ನಿರ್ಲಕ್ಷಿಸಬೇಕೇ?” ಅವರು ಟ್ವೀಟ್ ನಲ್ಲಿ ಹೇಳಿದ್ದಾರೆ.

ಭಾರತದಲ್ಲಿ ಅಂದಾಜು 9,000 ಕೋಟಿ ರೂ.ಗಳ ವಂಚನೆ ಮತ್ತು ಮನಿ ಲಾಂಡರಿಂಗ್ ಆರೋಪ ಎದುರಿಸುತ್ತಿರುವ ವಿಜಯ್ ಮಲ್ಯ ಅವರು, “ದಯವಿಟ್ಟು ನನ್ನ ಹಣವನ್ನು ಬೇಷರತ್ತಾಗಿ ತೆಗೆದುಕೊಂಡು, ಪ್ರಕರಣವನ್ನು ಕೈಬಿಡಿ” ಎಂದು ಹೇಳಿದ್ದಾರೆ.

ಹಣ ವಂಚನೆ ಮತ್ತು ಮನಿ ಲಾಂಡರಿಂಗ್ ಆರೋಪಕ್ಕೆ ಒಳಗಾಗಿ ಭಾರತದಿಂದ ಲಂಡನ್‌ಗೆ ಪಲಾಯನ ಮಾಡಿದ ತಲೆ ಮರೆಸಿಕೊಂಡಿರುವ ವಿಜಯ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಭಾರತ ಸರ್ಕಾರ ಅಲ್ಲಿನ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದೆ. ಆದರೆ ವಿಜಯ ಮಲ್ಯ ತನ್ನನ್ನು ಭಾರತಕ್ಕೆ ಹಸ್ತಾಂತರಿಸದಂತೆ ಲಂಡನ್ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.


ಓದಿ: ಉದ್ದಿಮೆದಾರರ 68,607 ಕೋಟಿ ರೂ ಸಾಲ ಮನ್ನಾ: ಮೋದಿ ಸರ್ಕಾರ ಸಂಸತ್ತಿನಿಂದ ಸತ್ಯ ಮರೆಮಾಚಿದೆ


ವಿಡಿಯೋ ನೋಡಿ: ಪಂಜಾಬ್‌ನಿಂದ ಝಾನ್ಸಿವರೆಗೂ ಕಾಲ್ನಡಿಗೆ ಹೊರಟ ಅಮ್ಮನ ಸೂಟ್‌ ಕೇಸ್‌ ಮೇಲೆ ನಿದ್ರಿಸುತ್ತಿರುವ ಮಗು


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...