Homeಕರ್ನಾಟಕಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

- Advertisement -
- Advertisement -

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಊಹಾಪೋಹಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ’ಬಿಜೆಪಿ ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡಲು ನಾನು ಸದಾ ಸಿದ್ದ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

’ನನ್ನ ಮೇಲೆ ಬಿಜೆಪಿ ಹೈಕಮಾಂಡ್‌ಗೆ ಎಲ್ಲಿಯವರೆಗೆ ವಿಶ್ವಾಸವಿರುತ್ತೋ ಅಲ್ಲಿಯವರೆಗೆ ಮುಖ್ಯಮಂತ್ರಿ ಪದವಿಯಲ್ಲಿ ಮುಂದುವರಿಯುತ್ತೇನೆ. ಯಾವಾಗ ರಾಜೀನಾಮೆ ನೀಡಿ ಎನ್ನುತ್ತಾರೋ ಆಗ ರಾಜೀನಾಮೆ ನೀಡಿ ಹೋಗುತ್ತೇನೆ. ಅಲ್ಲಿಯವರೆಗೂ ನನ್ನ ಶಕ್ತಿಮೀರಿ ಕೆಲಸ ಮಾಡುತ್ತೇನೆ ಇದರಲ್ಲಿ ಯಾವುದೇ ಗೊಂದಲ ಇಲ್ಲ’ ಎಂದಿದ್ದಾರೆ.

ನನಗೆ ಹೈಕಮಾಂಡ್ ಅವಕಾಶ ನೀಡಿದ್ದಾರೆ. ಶಕ್ತಿಮೀರಿ ಕೆಲಸ ಮಾಡುತ್ತೇನೆ. ರಾಜ್ಯದ ಅಭಿವೃದ್ಧಿಗೆ ದುಡಿದ್ದಿದ್ದೇನೆ. ಯಾವ ದಿನ ರಾಜೀನಾಮೆ ನೀಡಿ ಎಂದು ಹೈಕಮಾಂಡ್ ಹೇಳುತ್ತಾರೋ ಆಗ ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿಯುತ್ತೇನೆ, ರಾಜೀನಾಮೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

’ರಾಜ್ಯದಲ್ಲಿ ಪರ್ಯಾಯ ನಾಯಕತ್ವ ಇಲ್ಲ ಎಂದು ನಾನು ಹೇಳುವುದಿಲ್ಲ. ದೇಶ, ರಾಜ್ಯದಲ್ಲಿ ಪರ್ಯಾಯ ನಾಯಕರು ಇರುತ್ತಾರೆ. ಆಯಾ ಕಾಲಕ್ಕೆ ತಕ್ಕಂತೆ ಪರ್ಯಾಯ ನಾಯಕರು ಸಿಗುತ್ತಾರೆ. ನಾನು ಯಾರ ಬಗ್ಗೆಯೂ ಟೀಕೆ ಮಾಡುವುದಿಲ್ಲ, ಹೈಕಮಾಂಡ್ ಸೂಚನೆ ನೀಡಿದರೆ ಯಾವುದೇ ಗೊಂದಲವಿಲ್ಲದೆ ರಾಜೀನಾಮೆ ಕೊಡುತ್ತೇನೆ’ ಎಂದು ಹೇಳಿದ್ದಾರೆ.

ಹಲವು ದಿನಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆ ಬಗೆಗಿನ ಊಹಾಪೋಹಗಳಿಗೆ ಈಗ ಮುಖ್ಯಮಂತ್ರಿಗಳ ಹೇಳಿಕೆ ಪುಷ್ಠಿ ನೀಡಿದೆ.


ಇದನ್ನೂ ಓದಿ: ರೈತ ಪ್ರತಿಭಟನೆಗೆ ಬೆದರಿದ ಹರಿಯಾಣ ಸಿಎಂ ಖಟ್ಟರ್: ನಿಗಧಿತ ಸಮಯಕ್ಕಿಂತ ಮುಂಚೆಯೇ ಕಾರ್ಯಕ್ರಮ ಮುಕ್ತಾಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಜಾಗತಿಕ ಮಾದ್ಯಮಗಳಲ್ಲಿ ಸುದ್ದಿಯಾದ ಪ್ರಧಾನಿಯ ದ್ವೇಷ ಭಾಷಣ: ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಟೀಕೆಗೆ ಗುರಿಯಾದ...

0
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜಸ್ಥಾನದ ಬನ್ಸ್ವಾರಾದಲ್ಲಿ ಮುಸ್ಲಿಮರ ವಿರುದ್ಧ ಮಾಡಿದ್ದ ದ್ವೇಷ ಭಾಷಣ ಜಾಗತಿಕ ಮಾದ್ಯಮಗಳಲ್ಲಿ ಭಾರೀ ಸುದ್ದಿಯಾಗಿದ್ದು, ಮೋದಿ ಮತ್ತೆ ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿದ್ದಾರೆ. 'ಕೊಳಕು ಭಾಷಣ’ ಆದರೆ...