Homeಕರ್ನಾಟಕಆರ್‌ಎಸ್‌ಎಸ್‌ನ ಲೂಟಿ ದಾಖಲೆ ಸಹಿತ ಬಹಿರಂಗಪಡಿಸುತ್ತೇನೆ : ಸಚಿವ ಪ್ರಿಯಾಂಕ್ ಖರ್ಗೆ

ಆರ್‌ಎಸ್‌ಎಸ್‌ನ ಲೂಟಿ ದಾಖಲೆ ಸಹಿತ ಬಹಿರಂಗಪಡಿಸುತ್ತೇನೆ : ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಆರ್‌ಎಸ್‌ಎಸ್‌ನವರು ಹೇಗೆ ಲೂಟಿ ಮಾಡಿದ್ದಾರೆ ಎಂದು ಮುಂದಿನ 15-20 ದಿನಗಳಲ್ಲಿ ದಾಖಲೆ ಸಹಿತ ಬಹಿರಂಗಪಡಿಸುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಭಾನುವಾರ (ನವೆಂಬರ್ 16) ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಣ ಆರ್‌ಎಸ್‌ಎಸ್‌ಗೆ ಹೋಗಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡ್ತೀನಿ. ಎಷ್ಟು ಲೂಟಿ ಮಾಡಿದ್ದಾರೆನ್ನುವುದು ಗೊತ್ತಾಗುತ್ತದೆ. ಇವರೆಂತಹ ದರೋಡೆಕೋರರೆಂದು ದಾಖಲೆ ಸಮೇತ ಬಹಿರಂಗ ಮಾಡುವೆ ಎಂದು ಕಿಡಿಕಾರಿದ್ದಾರೆ.

ಚಿತ್ತಾಪುರದಲ್ಲಿ ಆರ್​​ಎಸ್ಎಸ್ ಪಥಸಂಚಲನ ಆಯ್ತೆಂದು ಮುಗಿದಿಲ್ಲ. ಚಿತ್ತಾಪುರದಲ್ಲಿ ಆರ್​ಎಸ್ಎಸ್ ಪಥಸಂಚಲನ ಮೂಲಕ ಶುರುವಾಗಿದೆ. ಆರ್​ಎಸ್ಎಸ್ ಕಥೆ ಇನ್ನೂ ಬಹಳ ಇದೆ ಮುಂದೆ ಹೇಳುತ್ತೇನೆ. ಚಿತ್ತಾಪುರಕ್ಕೆ 3 ಲಕ್ಷ ಜನ ಬರ್ತಾರೆ ಅಂದ್ರು, ಬಂದ್ರಾ? ಆರ್.ಅಶೋಕ್, ವಿಜಯೇಂದ್ರ ಚಿತ್ತಾಪುರಕ್ಕೆ ಬರ್ತೀವಿ ಅಂದ್ರು, ಬಂದ್ರಾ? ಎಂದು ಪ್ರಶ್ನಿಸಿದ್ದಾರೆ.

ದೇವಾಲಯಗಳ ಹುಂಡಿ ಹಣವನ್ನು ಸರ್ಕಾರ ಲೆಕ್ಕ ಹಾಕುತ್ತದೆ, ಅಂಥದ್ದರಲ್ಲಿ ಆರ್​ಎಸ್ಎಸ್ ಹಣದ ಲೆಕ್ಕ ಕೇಳಬಾರದಾ? ಇವರು ಹೇಗೆ ಆದಾಯ ತೆರಿಗೆ ವಂಚಿಸುತ್ತಿದ್ದಾರೆಂದು ದಾಖಲೆ ಸಮೇತ ಬಹಿರಂಗಪಡಿಸುವೆ. ಇವರಿಗೆ ಯಾರೆಲ್ಲ ದೇಣಿಗೆ ಕೊಡುತ್ತಾರೆ, ಲೆಕ್ಕ ಹೇಗೆ ಕೊಡ್ತಾರೆ? ಆರ್​ಎಸ್ಎಸ್ ದೇಣಿಗೆ ಸಂಗ್ರಹದ ಬಗ್ಗೆ ಹೊರಗಡೆ ಬರಲಿದೆ ಎಂದು ಹೇಳಿದ್ದಾರೆ.

ಮೋಹನ್ ಭಾಗವತ್ ಅವರೇ ಖುದ್ದಾಗಿ ನಮ್ಮದು ನೋಂದಣಿಯಾಗದ ಸಂಘಟನೆ ಎಂದು ಹೇಳಿದ್ದಾರೆ. ನಮ್ಮದು ವ್ಯಕ್ತಿಗಳ ಗುಂಪು, ನಾವು ನೋಂದಣಿ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ ಎಂದಿದ್ದಾರೆ. ಬಹಳ ಹಳೆಯ ಸಂಸ್ಥೆ ಬೆಂಗಳೂರು ಕ್ಲಬ್ ಕೂಡ ವ್ಯಕ್ತಿಗಳ ಗುಂಪು, ಅದರೂ ಅವರು ನೋಂದಣಿ ಮಾಡಿಕೊಂಡಿದ್ದಾರೆ. ಹೀಗಿರುವಾ ಅವರು (ಆರ್‌ಎಸ್‌ಎಸ್‌ನವರು) ಹೇಳುವುದು ಸಂವಿಧಾನನ ಅಥವಾ ಸಂವಿಧಾನದಲ್ಲಿ ಇರುವುದು ಸಂವಿಧಾನನ? ಪ್ರಶ್ನಿಸಿದ್ದಾರೆ.

ಚಿತ್ತಾಪುರ RSS ಪಥಸಂಚಲನ ನಾವು ತೀರ್ಮಾನಿಸಿದಂತೆ ನಡೆದಿದೆ. ಅನುಮತಿ ಕೊಟ್ಟಿದ್ದು, ಎಷ್ಟು ಜನ, ಯಾರ‍್ಯಾರು ಇರಬೇಕು, ಯಾವ ರಸ್ತೆಯಲ್ಲಿ ಮೆರವಣಿಗೆ ಸಾಗಬೇಕು ಎಂದು ಹೇಳಿದ್ದು ನಾವು (ಸರ್ಕಾರ)
ನಾವು ಮಾಡಬೇಡಿ ಎಂದು ಹೇಳಿರಲಿಲ್ಲ, ಅನುಮತಿ ಪಡೆದು ಮಾಡಿ ಎಂದಿದ್ದೆವು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಆರ್‌ಎಸ್‌ಎಸ್ ಎನ್ನುವ ಛಾಯಾ ಪ್ರಭುತ್ವದ (ಶ್ಯಾಡೋ ಸರ್ಕಾರ) ಆರಂಭದ ದಿನಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...