Homeಕರ್ನಾಟಕರೈತರ ಜೊತೆ ಇಲ್ಲೇ ಮಲಗುತ್ತೇನೆ, ಜೈಲಿಗೆ ಹಾಕುವುದಾದರೆ ಹಾಕಿ: ನಟ ಪ್ರಕಾಶ್ ರಾಜ್

ರೈತರ ಜೊತೆ ಇಲ್ಲೇ ಮಲಗುತ್ತೇನೆ, ಜೈಲಿಗೆ ಹಾಕುವುದಾದರೆ ಹಾಕಿ: ನಟ ಪ್ರಕಾಶ್ ರಾಜ್

ರೈತರ ಭೂ ಸ್ವಾಧೀನ ವಿರೋಧಿಸಿ 'ದೇವನಹಳ್ಳಿ ಚಲೋ'

- Advertisement -
- Advertisement -

ನಾನು ರೈತರ ಜೊತೆ ಇಲ್ಲಿಯೇ ಮಲಗುತ್ತೇನೆ, ಜೈಲಿಗೆ ಹಾಕುವುದಾದರೆ ಹಾಕಿ. ಜಾಮೀನು ಕೂಡ ತೆಗೆದುಕೊಳ್ಳುವುದಿಲ್ಲ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದರು.

ರೈತರ ಭೂ ಸ್ವಾಧೀನ ವಿರೋಧಿಸಿ ದೇವನಹಳ್ಳಿಯಲ್ಲಿ ನಡೆಯುತ್ತಿರುವ ‘ದೇವನಹಳ್ಳಿ ಚಲೋ’ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು.

ಮುಖ್ಯಮಂತ್ರಿ ಅವರೇ, ಸಚಿವ ಎಂ.ಬಿ ಪಾಟೀಲರೇ ನೀವು ಏನು ಮಾಡುತ್ತಿದ್ದೀರಿ? ರೈತರು ಭೂಮಿ ಬಿಟ್ಟು ಕೊಡುವುದಿಲ್ಲ ಎಂದರೆ ಅರ್ಥವಾಗುತ್ತಿಲ್ವಾ? ಒಬ್ಬ ಮನುಷ್ಯನಿಗೆ ಒಂದು ಒಂದೆರಡು ಬಾರಿ ಹೇಳಬಹುದು. ನಾವು ನಿಮ್ಮ ವಿರುದ್ಧ ಮೂರು ವರ್ಷಗಳಿಂದ ಬಾಯಿ ಬಡ್ಕೊಬೇಕಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹದಿಮೂರು ಹಳ್ಳಿಗಳ ಹೆಣ್ಣು ಮಕ್ಕಳು ಅವರ ಜಮೀನಿನ ಮಣ್ಣನ್ನು ತಂದು ಗಿಡಕ್ಕೆ ಹಾಕಿ, ನಾವು ಮಣ್ಣನ್ನು ಮಾರುವುದಿಲ್ಲ ಎಂದು ಹೇಳುತ್ತಿದ್ದಾರೆ. ನಿಮಗೆ ಧಿಕ್ಕಾರ ಕೂಗುವ ಸಮಯ ದೂರವಿಲ್ಲ. ರೈತರ ಬಾಯಿಯಿಂದ ಧಿಕ್ಕಾರ ಕೂಗಿಸಿಕೊಳ್ಳುವ ಪರಿಸ್ಥಿತಿ ನಿಮಗೆ ಬೇಕಾ? ನಿಮಗೆ ಮನಸಾಕ್ಷಿ ಇಲ್ವಾ? ಅಹಿಂದ, ಜನಪರ, ರೈತರಪರ ಅನ್ನುತ್ತೀರಿ. ವಿರೋಧ ಪಕ್ಷದ ನಾಯಕರಾಗಿದ್ದಾಗ ಈ ಹೋರಾಟಕ್ಕೆ ಬೆಂಬಲ ಸೂಚಿಸಿದ್ದೀರಿ. ಮಾತು ಕೊಟ್ಟಿದ್ದೀರಿ ತಾನೇ? ಈಗ ಮಾತಿಗೆ ನಿಲ್ಲುತ್ತೀರಾ? ಮಾತು ತಪ್ಪುತ್ತೀರಾ? ಎಂದು ಪ್ರಶ್ನಿಸಿದರು.

ಎಂ.ಬಿ ಪಾಟೀಲರೇ ಏನಂತ ತುರ್ತು ಪರಿಸ್ಥಿತಿ ಇತ್ತು ನಿಮಗೆ. ಅಷ್ಟೊಂದು ತರಾತುರಿಯಲ್ಲಿ ಸುದ್ದಿಗೋಷ್ಠಿ ಏಕೆ ಕರೆದ್ರಿ? ಒಂದು ದಿನ ಕಾಯಲು ಆಗಲಿಲ್ವಾ? ಮುಖ್ಯಮಂತ್ರಿಗಳು ಏನಾದರು ಬದಲಾಗುತ್ತಿದ್ದರಾ? ಒಳಗಡೆ ಏನಾದರೂ ಮಸಲತ್ತು ನಡೆಯುತ್ತಿದಿಯಾ? ಎಂದು ಪ್ರಕಾಶ್ ರಾಜ್ ಕೇಳಿದರು.

ಮನುಷ್ಯರಿಗೆ ಬೆಲೆ ಕೊಡಿ. ಭೂಮಿ ಬೆಲೆ ಹೆಚ್ಚಾದರೆ ನಿಮ್ಮ ಬೊಕ್ಕಸ ತುಂಬುತ್ತದೆ, ಸಮಾಜ ಬೆಳೆಯುವುದಿಲ್ಲ. ಈ ಹೋರಾಟ ನಿಲ್ಲುವುದಿಲ್ಲ. ಇದು ಅಂತಃಕರಣದ ಹೋರಾಟ. ಹಾಗಾಗಿ, ನೀವು ಬುದ್ದಿವಂತರ ತರ ಉತ್ತರ ಕೊಡಬೇಡಿ. ನಾವು ನಿಮಗೆ ಪ್ರಶ್ನೆಯೇ ಕೇಳುತ್ತಿಲ್ಲ. ನಮ್ಮ ನೋವನ್ನು ಹೇಳುತ್ತಿದ್ದೇವೆ. ನಮ್ಮನ್ನು ಬದುಕಲು ಬಿಡಿ ಎಂದರು.

ನಾವು ಮಣ್ಣನ್ನು ಮಾರುವುದಿಲ್ಲ. ಏನು ಮಾಡುತ್ತೀರಾ ಮಾಡಿ. ಕಾರ್ಖಾನೆ ಎಷ್ಟು ಜನರ ಬದುಕನ್ನು ಕಿತ್ತುಕೊಳ್ಳುತ್ತದೆ ಎನ್ನುವುದು ನಿಮಗೆ ಗೊತ್ತಿಲ್ಲವೇ? 6ಸಾವಿರ ಎಕರೆ ಭೂ ಸೆಟಲ್‌ಮೆಂಟ್‌ ಮಾಡಿದಿರಿ. ರೈತರು ಈಗ ಬೀದಿಗೆ ಬಂದಿದಾರೆ. ಕಾರ್ಖಾನೆಗಳನ್ನು ಮಾಡಿ ನಮ್ಮ ರೈತರನ್ನು ಏನು ಮಾಡುತ್ತೀರಾ? ಅವರನ್ನು ಕಾರ್ಖಾನೆಯ ಸೆಕ್ಯೂರಿಟಿ ಗಾರ್ಡ್‌ಗಳಾಗಿ ಮಾಡುತ್ತೀರಾ? ನಿಮಗೆ ಮರ್ಯಾದೆ ಇದೆಯಾ? ಎಂದು ಕಿಡಿಕಾರಿದರು.

ಸಿದ್ದರಾಮಯ್ಯನವರೇ ಇನ್ನೊಂದು ಹೋರಾಟ ಆಗುವುದು, ನಿಮ್ಮನ್ನು ಇಳಿಸುವುದಕ್ಕೆ ಕಾರಣ ಆಗುವುದು ಬೇಡ. ಮನಸಾಕ್ಷಿಯಿಂದ ಜನರ ನೋವನ್ನು ಅರ್ಥ ಮಾಡಿಕೊಳ್ಳಿ. ರೈತರನ್ನು ಅರ್ಥ ಮಾಡಿಕೊಳ್ಳಿ. ನಾವು ಭೂಮಿ ಮಾರುವುದಿಲ್ಲ ಎಂದರೆ ಮಾರುವುದಿಲ್ಲ. ನಮ್ಮನ್ನು ಬದುಕಲು ಬಿಡಿ ಎಂದು ಮನವಿ ಮಾಡಿದರು.

LIVE UPDATES ‘ದೇವನಹಳ್ಳಿ ಚಲೋ’ | ಸರಿಯಾಗಿ ಕೇಳಿಸಿಕೊಳ್ಳಿ, ನೀವು ಹತ್ತಲ್ಲ ನೂರು ಕೋಟಿ ರೂಪಾಯಿಗಳು ಕೊಟ್ಟರೂ ನಾವು ಒಂದು ಇಂಚು ಭೂಮಿ ಕೊಡಲ್ಲ: ರೈತ ನಾಯಕಿ ಚುಕ್ಕಿ ನಂಜುಂಡಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...