Homeಮುಖಪುಟಬೆದರಿಕೆ ನನಗೇನು ಹೊಸತಲ್ಲ; ತಪ್ಪೆಂದು ಮನವರಿಕೆ ಆಗುವವರೆಗೆ ಕ್ಷಮೆಯಾಚಿಸಲ್ಲ: ಕಮಲ್ ಹಾಸನ್

ಬೆದರಿಕೆ ನನಗೇನು ಹೊಸತಲ್ಲ; ತಪ್ಪೆಂದು ಮನವರಿಕೆ ಆಗುವವರೆಗೆ ಕ್ಷಮೆಯಾಚಿಸಲ್ಲ: ಕಮಲ್ ಹಾಸನ್

- Advertisement -
- Advertisement -

“ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿದೆ” ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ಖ್ಯಾತ ನಟ-ರಾಜಕಾರಣಿ ಕಮಲ್ ಹಾಸನ್ ಅವರು, ತನ್ನ ಹೇಳಿಗೆ ಕ್ಷಮೆಯಾಚಿಸುವುದಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ. “ನಾನು ಹೇಳಿದ್ದ ತಪ್ಪು ಎಂದು ನನಗೆ ಮನವರಿಕೆ ಆಗುವವರೆಗೆ ಕ್ಷಮೆಯಾಚಿಸುವುದಿಲ್ಲ” ಎಂದು ಹೇಳಿದ್ದಾರೆ. ತಪ್ಪೆಂದು ಮನವರಿಕೆ ಆಗುವವರೆಗೆ

ಚೆನ್ನೈನಲ್ಲಿ ನಡೆದ ತಮ್ಮ ಮುಂಬರುವ ಚಿತ್ರ ಥಗ್ ಲೈಫ್‌ನ ಪ್ರಚಾರ ಕಾರ್ಯಕ್ರಮದಲ್ಲಿ ಅವರು ನೀಡಿದ ಹೇಳಿಕೆ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡ ಪರ ಸಂಘಟನೆಗಳು ಚಿತ್ರವನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದು, ಅವರ ಹೇಳಿಕೆಗೆ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿವೆ.

ಕನ್ನಡಿಗರ ಆಕ್ರೋಶಕ್ಕೆ ಪ್ರತಿಕ್ರಿಯಿಸಿದ ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಮುಖ್ಯಸ್ಥರೂ ಆಗಿರುವ ಕಮಲ್, ತಾನು ಈ ಹಿಂದೆಯೂ ಇಂತಹ ಬೆದರಿಕೆಗಳನ್ನು ಎದುರಿಸಿದ್ದೇನೆ ಮತ್ತು ಯಾವುದೇ ಮುಜುಗರಕ್ಕೊಳಗಾಗಿಲ್ಲ ಎಂದು ಹೇಳಿದ್ದಾರೆ. ಕಮಲ್ ಹಾಸನ್ ಅವರು ಮುಂದಿನ ತಿಂಗಳು ತಮಿಳುನಾಡು ಆಡಳಿತಾರೂಢ ಡಿಎಂಕೆ ಬೆಂಬಲದೊಂದಿಗೆ ರಾಜ್ಯಸಭೆಗೆ ಪ್ರವೇಶಿಸುವ ನಿರೀಕ್ಷೆಯಿದೆ.

“ನನಗೆ ಮೊದಲು ಕೂಡಾ ಬೆದರಿಕೆ ಬಂದಿದೆ… ಆದರೆ ಪ್ರೀತಿ ಯಾವಾಗಲೂ ಗೆಲ್ಲುತ್ತದೆ” ಎಂದು ಅವರು ಹೇಳಿದ್ದು, ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳದ ಮೇಲಿನ ತಮ್ಮ ಪ್ರೀತಿಯನ್ನು ಪುನರುಚ್ಚರಿಸಿದ್ದಾರೆ. “ಒಂದು ಕಾರ್ಯಸೂಚಿ ಹೊಂದಿರುವವರು ಮಾತ್ರ ಬೇರೆ ರೀತಿಯಲ್ಲಿ ಅನುಮಾನಿಸುತ್ತಾರೆ.” ಎಂದು ಅವರು ಹೇಳಿದ್ದಾರೆ.

ದಕ್ಷಿಣದ ಎಲ್ಲಾ ಭಾಷೆಗಳು ಮತ್ತು ಸಂಸ್ಕೃತಿಗಳನ್ನು ತಾನು ಗೌರವಿಸುತ್ತಿದ್ದು, ಆದರೂ ತಮ್ಮ ಹೇಳಿಕೆಗೆ ಬದ್ಧರಾಗಿರುವುದಾಗಿ ಮತ್ತು ತಾವು ತಪ್ಪು ಮಾಡಿರುವುದಾಗಿ ಮನವರಿಕೆಯಾದರೆ ಮಾತ್ರ ಕ್ಷಮೆಯಾಚಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. “ನಾನು ತಪ್ಪಾಗಿದ್ದರೆ, ನಾನು ಕ್ಷಮೆಯಾಚಿಸುತ್ತೇನೆ. ಒಂದು ವೇಳೆ ತಪ್ಪಿಲ್ಲದಿದ್ದರೆ ನಾನು ಕ್ಷಮೆ ಯಾಚಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಪ್ರಜಾಪ್ರಭುತ್ವ ಮೌಲ್ಯಗಳಿಗೆ ತಮ್ಮ ಬದ್ಧತೆಯನ್ನು ಒತ್ತಿ ಹೇಳಿದ ಅವರು, “ಇದು ಪ್ರಜಾಪ್ರಭುತ್ವ. ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ” ಎಂದು ಅವರು ಹೇಳಿದ್ದಾರೆ.

ಕಮಲ್ ಹಾಸನ್ ಅವರ ಹೇಳಿಕೆಯ ವಿರುದ್ಧ ಕನ್ನಡ ಸಂಘಟನೆಗಳು ಮತ್ತು ರಾಜಕಾರಣಿಗಳಿಂದ ತೀವ್ರವಾದ ಟೀಕೆಗಳು ವ್ಯಕ್ತವಾಗಿವೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಅಧ್ಯಕ್ಷ ಎಂ. ನರಸಿಂಹಲು ಅವರು ಪ್ರತಿಕ್ರಿಯಿಸಿ, ಕಮಲ್ ಹಾಸನ್ ಅವರ ಕನ್ನಡ “ತಮಿಳಿನಿಂದ ಹುಟ್ಟಿದೆ” ಎಂಬ ಹೇಳಿಕೆಯ ಕುರಿತು ಅವರೊಂದಿಗೆ ಮಾತನಾಡಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

“ಅನೇಕ ಕನ್ನಡ ಸಂಘಟನೆಗಳು ಅವರ ಚಲನಚಿತ್ರವನ್ನು ನಿಷೇಧಿಸಬೇಕೆಂದು ಒತ್ತಾಯಿಸಿವೆ. ಅವರು ಹೇಳಿದ್ದು ತಪ್ಪು ಎಂದು ನಾವು ನಂಬುತ್ತೇವೆ ಮತ್ತು ಅವರೊಂದಿಗೆ ಮಾತನಾಡಲು ಪ್ರಯತ್ನಿಸುತ್ತಿದ್ದೇವೆ” ಎಂದು ನರಸಿಂಹಲು ಹೇಳಿದ್ದಾರೆ.

ಕಮಲ್ ಹಾಸನ್ ನಾಳೆಯೊಳಗೆ ಕ್ಷಮೆಯಾಚಿಸದಿದ್ದರೆ, ಕರ್ನಾಟಕದಲ್ಲಿ ಅವರ ಚಲನಚಿತ್ರ ಬಿಡುಗಡೆಯನ್ನು ಚೇಂಬರ್ ವಿರೋಧಿಸುತ್ತದೆ ಎಂದು ಕೆಎಫ್‌ಸಿಸಿಯ ಮಾಜಿ ಮುಖ್ಯಸ್ಥ ಸಾ ರಾ ಗೋವಿಂದು ಎಚ್ಚರಿಸಿದ್ದಾರೆ. “ನಾವು ಕನ್ನಡ ಹೋರಾಟಗಾರರನ್ನು ಬೆಂಬಲಿಸುತ್ತೇವೆ ಮತ್ತು ತೀವ್ರವಾಗಿ ಪ್ರತಿಭಟಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಭಾಷಾ ವಿಷಯಗಳ ಬಗ್ಗೆ ಎಲ್ಲಾ ಕನ್ನಡಿಗರು ಒಂದಾಗಬೇಕು ಎಂದು ಕೆಎಫ್‌ಸಿಸಿ ಮಾಜಿ ಅಧ್ಯಕ್ಷೆ ಜಯಮಾಲಾ ಹೇಳಿದ್ದಾರೆ. “ಅವರ ಹೇಳಿಕೆ ತಿಳಿದೋ ತಿಳಿಯದೆಯೋ ತಪ್ಪಾಗಿದೆ. ತಪ್ಪನ್ನು ಒಪ್ಪಿಕೊಂಡು ವಿಷಾದ ವ್ಯಕ್ತಪಡಿಸುವುದರಲ್ಲಿ ಯಾವುದೇ ತಪ್ಪಿಲ್ಲ” ಎಂದು ಅವರು ಹೇಳಿದ್ದಾರೆ.


ತಪ್ಪೆಂದು ಮನವರಿಕೆ ಆಗುವವರೆಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತೆಲಂಗಾಣ| ಭದ್ರಾದ್ರಿ ಕೊಥಗುಡೆಮ್‌ನಲ್ಲಿ 17 ಮಾವೋವಾದಿಗಳು ಪೊಲೀಸರಿಗೆ ಶರಣು

ತೆಲಂಗಾಣ| ಭದ್ರಾದ್ರಿ ಕೊಥಗುಡೆಮ್‌ನಲ್ಲಿ 17 ಮಾವೋವಾದಿಗಳು ಪೊಲೀಸರಿಗೆ ಶರಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...