Homeಮುಖಪುಟಲೈಂಗಿಕ ದೌರ್ಜನ್ಯ ಪ್ರಕರಣ: ನನ್ನ ಘನತೆಗಾಗಿ ಹೋರಾಟ ಮುಂದುವರೆಸುತ್ತೇನೆ- ನಟಿ ಭಾವನಾ

ಲೈಂಗಿಕ ದೌರ್ಜನ್ಯ ಪ್ರಕರಣ: ನನ್ನ ಘನತೆಗಾಗಿ ಹೋರಾಟ ಮುಂದುವರೆಸುತ್ತೇನೆ- ನಟಿ ಭಾವನಾ

’ವ್ಯವಸ್ಥೆ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ನನಗೆ ತಿಳಿದಿಲ್ಲ. ನನ್ನೊಳಗೆ ಈ ಭಯವಿದೆ’

- Advertisement -
- Advertisement -

“ತೀರ್ಪಿನ ಬಗ್ಗೆ ಯೋಚಿಸದೆ ನಾನು, ನನ್ನ ಘನತೆಗಾಗಿ ಗಟ್ಟಿಯಾದ ಹೋರಾಟವನ್ನು ಮುಂದುವರೆಸುತ್ತೇನೆ” ಎಂದು ಐದು ವರ್ಷಗಳ ಹಿಂದಿನ ಕಹಿ ಘಟನೆ ಬಗ್ಗೆ ಸುದೀರ್ಘ ಮೌನ ಮುರಿದಿದ್ದಾರೆ ಬಹುಭಾಷಾ ನಟಿ ಭಾವನಾ ಮೇನನ್‌.

ಖಾಸಗಿ ಯೂಟ್ಯೂಬ್ ಚಾನೆಲ್‌ಗೆ ‘ದಿ ಮೋಜೋ ಸ್ಟೋರಿ’ ಯ ಕಾರ್ಯಕ್ರಮವಾದ ‘ದಿ ಗ್ಲೋಬಲ್ ಟೌನ್ ಹಾಲ್’ ನಲ್ಲಿ ನೇರ ಸಂದರ್ಶನ ನೀಡುವಾಗ, 2017ರ ಲೈಂಗಿಕ ದೌರ್ಜನ್ಯ ಪ್ರಕರಣದ ನಂತರ ತಾವು ಅನುಭವಿಸಿದ ಹಿಂಸೆ, ಅವಮಾನ, ಆಘಾತ, ಮಾನಸಿಕ ಕಿರುಕುಳಗಳ ಬಗ್ಗೆ 35 ವರ್ಷದ ನಟಿ ಭಾವನಾ ಮುಕ್ತವಾಗಿ ಮಾತನಾಡಿದ್ದಾರೆ.

ತಾನು ತನ್ನ ಘನತೆಯನ್ನು ಮರಳಿ ಪಡೆಯಲು ಬಯಸುತ್ತೇನೆ ಎಂದು ಹೇಳಿರುವ ಅವರು, ತನ್ನ ಪತಿ, ಕುಟುಂಬ ಸದಸ್ಯರು ಮತ್ತು ಸ್ನೇಹಿತರು, ತನಗಾಗಿ ಪ್ರತಿಭಟನೆಗಳನ್ನು ಮಾಡಿದ ಸಾರ್ವಜನಿಕರಿಗೆ ಧನ್ಯವಾದ ಸಲ್ಲಿಸಿದ್ದಾರೆ.  ತನ್ನ ಸಂಪೂರ್ಣ ಇಚ್ಛಾಶಕ್ತಿಯೇ ತನ್ನನ್ನು ಮುಂದುವರಿಸಿಕೊಂಡು ಹೋಗುತ್ತಿದೆ ಎಂದಿದ್ದಾರೆ.

ಈ ಘಟನೆಯಿಂದಾಗಿ “ನನ್ನ ಘನತೆಯನ್ನು ಒಂದು ಮಿಲಿಯನ್ ತುಂಡುಗಳಾಗಿ ಮಾಡಲಾಗಿದೆ. ಕೆಲವೊಮ್ಮೆ ತಾನು ಅನುಭವಿಸಿದ್ದೆಲ್ಲ ದುಃಸ್ವಪ್ನ ಎಂದು ಭಾವಿಸಿದ ದಿನಗಳೂ ಇದ್ದವು. ಆದರೆ ಅದು ಹಾಗಲ್ಲ ಅದೆಲ್ಲವೂ ನಿಜ” ಎಂದಿದ್ದಾರೆ.

ಇದನ್ನೂ ಓದಿ: ನಟಿ ಸಂಜನಾರಿಗೆ ಅಶ್ಲೀಲ ಮೆಸೇಜ್‌‌: ಆ್ಯಡಂ ಬಿದ್ದಪ್ಪ ಅರೆಸ್ಟ್‌

ನಿರೂಪಕಿ ಬರ್ಖಾ ದತ್ ಜೊತೆಗೆ ಮಾತನಾಡಿರುವ ನಟಿ, “ನಾನು ಇನ್ನೂ ಹೆದರುತ್ತಿದ್ದೇನೆ, ವ್ಯವಸ್ಥೆ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ನನಗೆ ತಿಳಿದಿಲ್ಲ. ನನ್ನೊಳಗೆ ಈ ಭಯವಿದೆ. ಕೆಲವೊಮ್ಮೆ ನಾನು ನಿಜವಾಗಿಯೂ ದುಃಖಿತಳಾಗಿದ್ದೇನೆ, ಕೋಪಗೊಂಡಿದ್ದೇನೆ. ನನ್ನ ಸುತ್ತಲೂ ಬೆಂಬಲ ನೀಡುವವರು ಇದ್ದರೂ ಕೂಡ ನಾನು ಒಂಟಿತನವನ್ನು ಅನುಭವಿಸಿದೆ. ನಾನು 2020 ರಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೆ 15 ದಿನಗಳವರೆಗೆ ನ್ಯಾಯಾಲಯದಲ್ಲಿದ್ದೆ. ನ್ಯಾಯಾಲಯದಲ್ಲಿ ಸಮಯ ಕಳೆಯುವ ಪ್ರತಿ ಸೆಕೆಂಡಿಗೆ ನಾನು ನಿರಪರಾಧಿ ಎಂದು ಸಾಬೀತುಪಡಿಸಲು ಪ್ರಯತ್ನಿಸುತ್ತಿದ್ದೆ. ಏಳು ಮಂದಿ ವಕೀಲರು ನನ್ನನ್ನು ಪ್ರಶ್ನಿಸಲು ಪ್ರಯತ್ನಿಸುತ್ತಿದ್ದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಆ ಘಟನೆಯನ್ನು ನೆನಪಿಸುತ್ತಿದ್ದರು. ಆಗ ನಾನು ಏಕಾಂಗಿಯಾಗಿದ್ದೇನೆ ಎಂದು ನನಗೆ ಅನಿಸಿತ್ತು” ಎಂದು ನಟಿ ಭಾವನಾ ಭಾವುಕರಾಗಿದ್ದಾರೆ.

ಆಘಾತಕಾರಿ ಘಟನೆಯ ನಂತರ ದುಷ್ಕರ್ಮಿಗಳು ಸಾಮಾಜಿಕ ಮಾಧ್ಯಮದಲ್ಲಿ ತನ್ನ ವಿರುದ್ಧ ತಮ್ಮ ಟೀಕೆಗಳನ್ನು ಹೊರಹಾಕಿದ್ದನ್ನು ಭಾವನಾ ನೆನಪಿಸಿಕೊಂಡಿದ್ದಾರೆ. ಮಲಯಾಳಂ ಚಲನಚಿತ್ರಗಳಲ್ಲಿ ಪ್ರಧಾನವಾಗಿ ನಟಿಸುತ್ತಿದ್ದ ತಾನು ಈ ಆಘಾತದಿಂದಾಗಿ ತನ್ನ ವೃತ್ತಿಜೀವನದಿಂದ ಸುದೀರ್ಘ ವಿರಾಮವನ್ನು ತೆಗೆದುಕೊಂಡಿದ್ದು, ಆಶಿಕ್ ಅಬು, ಪೃಥ್ವಿರಾಜ್, ಜಯಸೂರ್ಯ ಮತ್ತು ಶಾಜಿ ಕೈಲಾಸ್ ಅವರ ಹಲವು ಸಿನಿಮಾಗಳ ಆಫರ್‌ಗಳನ್ನು ನಿರಾಕರಿಸಿದ ನಿದರ್ಶನಗಳಿವೆ ಎಂದು ಹೇಳಿದ್ದಾರೆ.

“ಮಲಯಾಳಂ ಬಿಟ್ಟು ಈಗ ನಾನು ಬೇರೆ ಚಿತ್ರರಂಗದಲ್ಲಿ ಕೆಲಸ ಮಾಡಲು ಆರಂಭಿಸಿದ್ದೇನೆ. ಘಟನೆಯಿಂದಾಗಿ ನಾನು ಬೇರೆ ಯಾವುದಾದರೂ ದೇಶದಲ್ಲಿ ನೆಲೆಯೂರಲು ಮತ್ತು ಹೊಸದಾಗಿ ಪ್ರಾರಂಭಿಸಲು ಬಯಸಿದ ದಿನಗಳಿವೆ. ಆಘಾತಕಾರಿ ಘಟನೆಯಿಂದ ಹೊರಬಂದು ಮೊದಲು ಸಾಮಾನ್ಯ ಸ್ಥಿತಿಗೆ ಬರಬೇಕು. ನಾನು ಅಂತಹ ಸ್ಥಿತಿಯಿಂದ ಹೊರಗೆ ಬರಲು ಐದು ವರ್ಷ ಬೇಕಾಯಿತು. ಪ್ರಪಂಚದಾದ್ಯಂತ ಅದೇ ಹಂತದಲ್ಲಿ ಇತರ ಮಹಿಳೆಯರು ಇದ್ದಾರೆ. ಅವರ ಅವಸ್ಥೆಯ ಬಗ್ಗೆ ನನಗೆ ತುಂಬಾ ಬೇಸರವಾಗುತ್ತದೆ. ನಾನು ಅವರಿಗೆ ತಿಳಿಸಲು ಬಯಸುವುದೇನೆಂದರೆ ಫಲಿತಾಂಶ ಏನಾಗಬಹುದು ಎಂಬುದರ ಕುರಿತು ಚಿಂತಿಸದೆ ನಾನು ಗಟ್ಟಿಯಾಗಿ ಹೋರಾಡುತ್ತೇನೆ ”ಎಂದು ನಟಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ನಟಿ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಪೋಸ್ಟ್ ಹಾಕಿದ್ದರು. ಮಲಯಾಳಂ, ಬಾಲಿವುಡ್ ಚಿತ್ರರಂಗದ ಹಲವು ತಾರೆಯರು ನಟಿಗೆ ಬೆಂಬಲ ಸೂಚಿಸಿದ್ದರು.

 ಘಟನೆಯ ಹಿನ್ನೆಲೆ:

ಫೆಬ್ರವರಿ 17, 2017 ರಂದು ತ್ರಿಶೂರ್‌ನಿಂದ ಚಲನಚಿತ್ರವೊಂದರ ಶೂಟಿಂಗ್‌ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ನಟಿ ಭಾವನಾ ಅವರನ್ನು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಅಪಹರಿಸಲಾಗಿತ್ತು. ಒಂದು ಗ್ಯಾಂಗ್ ಆಕೆಯನ್ನು ಬಲವಂತವಾಗಿ ಕಾರನ್ನು ಹತ್ತಿಸಿ ಎರಡು ಗಂಟೆಗಳ ಕಾಲ ವಾಹನದೊಳಗೆ ಕಿರುಕುಳ ನೀಡಿತ್ತು. ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಪ್ರಮುಖ ಆರೋಪಿ ಎಂದು ಆರೋಪಿಸಲಾಗಿತ್ತು. ನಟಿ ನೀಡಿದ್ದ ದೂರಿನ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಸದ್ಯ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.


ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ’ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ’ 5 ವರ್ಷಗಳ ಪ್ರಯಾಣ ನೆನಪಿಸಿಕೊಂಡ ನಟಿ ಭಾವನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...