ಭಾರತೀಯ ವಾಯುಪಡೆಯ ಮಹಿಳಾ ಫ್ಲೈಯಿಂಗ್ ಅಧಿಕಾರಿಯೊಬ್ಬರು ವಿಂಗ್ ಕಮಾಂಡರ್ ಶ್ರೇಣಿಯ ಅಧಿಕಾರಿ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಈ ಸಂಬಂಧ ಮಧ್ಯ ಕಾಶ್ಮೀರದ ಬುದ್ಗಾಮ್ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಇಬ್ಬರು ಐಎಎಫ್ ಅಧಿಕಾರಿಗಳೂ ಪ್ರಸ್ತುತ ಶ್ರೀನಗರದಲ್ಲಿ ನೆಲೆಸಿದ್ದಾರೆ. ಮಹಿಳಾ ಅಧಿಕಾರಿಯ ದೂರು ಆಧರಿಸಿ ಕಳೆದ ಶನಿವಾರ ಕೇಂದ್ರ ಕಾಶ್ಮೀರದ ಬುದ್ಗಾಮ್ ಪೊಲೀಸ್ ಠಾಣೆಯಲ್ಲಿ ಸಂಬಂಧಿತ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
“ಪ್ರಕರಣದ ಬಗ್ಗೆ ನಮಗೆ ತಿಳಿದಿದೆ. ಈ ವಿಷಯದ ಬಗ್ಗೆ ಸ್ಥಳೀಯ ಬುದ್ಗಾಮ್ ಪೊಲೀಸ್ ಠಾಣೆ ಮತ್ತು ಶ್ರೀನಗರದ ವಾಯುಪಡೆಯ ಠಾಣೆಗೆ ಮಾಹಿತಿ ನೀಡಲಾಗಿದೆ. ನಾವು ಈ ಪ್ರಕರಣದ ತನಿಖೆಗೆ ಸಂಪೂರ್ಣ ಸಹಕರಿಸುತ್ತಿದ್ದೇವೆ” ಎಂದು ಹಿರಿಯ ಐಎಎಫ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಎನ್‌ಡಿಟಿವಿ ವರದಿಯ ಪ್ರಕಾರ, ಕಳೆದ ಎರಡು ವರ್ಷಗಳಿಂದ ಕಿರುಕುಳ, ಲೈಂಗಿಕ ದೌರ್ಜನ್ಯ ಮತ್ತು ಮಾನಸಿಕ ಹಿಂಸೆ ಅನುಭವಿಸುತ್ತಿದ್ದೇನೆ ಎಂದು ಮಹಿಳಾ ಅಧಿಕಾರಿ ಆರೋಪಿಸಿದ್ದಾರೆ.
ಇದನ್ನೂ ಓದಿ : ಜಮ್ಮು ಕಾಶ್ಮೀರ ಚುನಾವಣೆ : ಕಥುವಾ ಅತ್ಯಾಚಾರ ಆರೋಪಿಗಳನ್ನು ಬೆಂಬಲಿಸಿದ್ದ ಲಾಲ್ ಸಿಂಗ್‌ಗೆ ಟಿಕೆಟ್ ಕೊಟ್ಟ ಕಾಂಗ್ರೆಸ್!


