- Advertisement -
- Advertisement -
ದುಬೈ ಏರ್ ಶೋನಲ್ಲಿ ಭಾರತೀಯ ವಾಯುಪಡೆಯ ತೇಜಸ್ ಯುದ್ಧ ವಿಮಾನ ಪತನಗೊಂಡಿದೆ. ಶುಕ್ರವಾರ (ನವೆಂಬರ್ 21) ಸ್ಥಳೀಯ ಸಮಯ ಮಧ್ಯಾಹ್ನ 2:10ರ ಸುಮಾರಿಗೆ ದುರ್ಘಟನೆ ನಡೆದಿದೆ.
ದೊಡ್ಡ ಜನಸಮೂಹದ ಮುಂದೆ ವೈಮಾನಿಕ ಪ್ರದರ್ಶನ ನೀಡುತ್ತಿದ್ದಾಗ ವಿಮಾನ ಪತನಗೊಂಡಿದೆ. ಪೈಲಟ್ ಸಾವನ್ನಪ್ಪಿದ್ದಾರೆ ಎಂದು ಭಾರತೀಯ ವಾಯುಪಡೆ ದೃಢಪಡಿಸಿದೆ.
“ದುಬೈ ಏರ್ ಶೋನಲ್ಲಿ ಇಂದು ನಡೆದ ವೈಮಾನಿಕ ಪ್ರದರ್ಶನದ ಸಮಯದಲ್ಲಿ ಐಎಎಫ್ ತೇಜಸ್ ವಿಮಾನ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಪೈಲಟ್‌ಗೆ ಮಾರಣಾಂತಿಕ ಗಾಯಗಳಾಗಿವೆ. ಜೀವಹಾನಿಗೆ ಐಎಎಫ್ ತೀವ್ರವಾಗಿ ವಿಷಾದಿಸುತ್ತಿದೆ ಮತ್ತು ಈ ದುಃಖದ ಸಮಯದಲ್ಲಿ ಮೃತರ ಕುಟುಂಬದೊಂದಿಗೆ ದೃಢವಾಗಿ ನಿಲ್ಲುತ್ತದೆ. ಅಪಘಾತದ ಕಾರಣವನ್ನು ಖಚಿತಪಡಿಸಿಕೊಳ್ಳಲು ವಿಚಾರಣಾ ತಂಡವನ್ನು ರಚಿಸಲಾಗುತ್ತಿದೆ” ಎಂದು ವಾಯುಪಡೆಯ ವಕ್ತಾರರು ತಿಳಿಸಿದ್ದಾರೆ.


