Homeಮುಖಪುಟಐಎಎಸ್‌ ನಿಯಮಗಳ ಬದಲಾವಣೆ ಪ್ರಸ್ತಾಪ: ಕೇಂದ್ರದ ನಡೆಗೆ ಸಿಎಂಗಳ ಆಕ್ಷೇಪ

ಐಎಎಸ್‌ ನಿಯಮಗಳ ಬದಲಾವಣೆ ಪ್ರಸ್ತಾಪ: ಕೇಂದ್ರದ ನಡೆಗೆ ಸಿಎಂಗಳ ಆಕ್ಷೇಪ

- Advertisement -
- Advertisement -

ಐಎಎಸ್ (ಕೇಡರ್) ನಿಯಮಗಳು, 1954ಕ್ಕೆ ಕೇಂದ್ರ ಸರ್ಕಾರವು ಪ್ರಸ್ತಾಪಿಸಿದ ಬದಲಾವಣೆಗಳ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಧ್ವನಿ ಎತ್ತಿದ್ದಾರೆ.

ಪ್ರಸ್ತಾವಿತ ತಿದ್ದುಪಡಿಗಳನ್ನು ಈಗಾಗಲೇ ಪ್ರಶ್ನಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು, ಜನವರಿ 23ರಂದು ತಮ್ಮ ಅಸಮ್ಮತಿಯನ್ನು ಪುನರುಚ್ಚರಿಸಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದ ಒಕ್ಕೂಟ ರಚನೆಯನ್ನು ನಾಶಪಡಿಸುತ್ತಿದೆ ಎಂದು ಆರೋಪಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಅವರಿಗೆ ಈಗಾಗಲೇ ಎರಡು ಬಾರಿ ಪತ್ರ ಬರೆದಿದ್ದಾರೆ.

ಈ ಹಿಂದೆ, ರಾಜಸ್ಥಾನದ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢದ ಭೂಪೇಶ್ ಬಾಘೇಲ್ ಮತ್ತು ಜಾರ್ಖಂಡ್‌ನ ಹೇಮಂತ್ ಸೊರೆನ್ ಕೂಡ ಮೋದಿಯವರಿಗೆ ಪತ್ರ ಬರೆದು ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೇ ಪ್ರಸ್ತಾವನೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರವು ಐಎಎಸ್ (ಕೇಡರ್) ನಿಯಮಗಳು, 1954ಕ್ಕೆ ತಿದ್ದುಪಡಿಯನ್ನು ತರಲು ಹೊರಟಿದೆ. ಇದು ರಾಜ್ಯ ಸರ್ಕಾರಗಳ ಮೀಸಲಾತಿಯನ್ನು ತಪ್ಪಿಸಿ ಕೇಂದ್ರದ ಡೆಪ್ಯುಟೇಶನ್‌ನಲ್ಲಿ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲು ಅನುವು ಮಾಡಿಕೊಡುತ್ತದೆ.

ಕೇಂದ್ರ ಸರ್ಕಾರವು ಪ್ರಸ್ತಾಪಿಸಿದ ಕರಡು ತಿದ್ದುಪಡಿಗಳ ಬಗ್ಗೆ ತೀವ್ರವಾದ ಕಳವಳವನ್ನು ವ್ಯಕ್ತಪಡಿಸಿದ ಸ್ಟಾಲಿನ್, “ಇದು ನಮ್ಮ ಒಕ್ಕೂಟ ರಾಜಕೀಯ ಮತ್ತು ರಾಜ್ಯಗಳ ಸ್ವಾಯತ್ತತೆಗೆ ಪೆಟ್ಟು ನೀಡುತ್ತದೆ” ಎಂದು ಬರೆದಿದ್ದಾರೆ.

ರಾಜ್ಯ ಮಟ್ಟದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರಗಳು ಮುಂಚೂಣಿಯಲ್ಲಿವೆ. ರಾಜ್ಯಗಳು ಆಗಾಗ್ಗೆ ನೈಸರ್ಗಿಕ ವಿಕೋಪಗಳನ್ನು ಎದುರಿಸುತ್ತವೆ. ಇತರೆಡೆಗಳಿಗಿಂತ ಹೆಚ್ಚಾಗಿ ರಾಜ್ಯದಲ್ಲಿ ಐಎಎಸ್ ಅಧಿಕಾರಿಗಳ ಸೇವೆ ಅಗತ್ಯವಿದೆ. ಅಂತಹ ಸಂದರ್ಭಗಳಲ್ಲಿ, ಅಧಿಕಾರಿಗಳನ್ನು ನಿಯೋಜಿಸಲು ರಾಜ್ಯ ಸರ್ಕಾರಗಳನ್ನು ಒತ್ತಾಯಿಸುವುದು ಖಂಡಿತವಾಗಿಯೂ ಅಧಿಕಾರಿಗಳ ಕೊರತೆಯಿಂದಾಗಿ ವಿವಿಧ ರಾಜ್ಯಗಳಲ್ಲಿ ‘ಆಡಳಿತ ಕೊರತೆ’ಯನ್ನು ಉಲ್ಬಣಗೊಳಿಸುತ್ತದೆ. ಇದು ರಾಜ್ಯಗಳ ಆಡಳಿತಾತ್ಮಕ ಚೌಕಟ್ಟಿನ ಕೆಲಸಕ್ಕೆ ‘ಅಪಮಾನ’ ಎಂದು ಸ್ಟಾಲಿನ್ ಅಭಿಪ್ರಾಯಪಟ್ಟಿದ್ದಾರೆ.

ಒಕ್ಕೂಟ ರಚನೆಗೆ ಆಗುವ ನಷ್ಟಗಳನ್ನು ಮಮತಾ ಬ್ಯಾನರ್ಜಿಯವರು ತಮ್ಮ ಇತ್ತೀಚಿನ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ.

“ನಮ್ಮ ಒಕ್ಕೂಟ ರಚನೆಯೊಂದಿಗೆ ಕೇಂದ್ರವು ಹೇಗೆ ಆಟವಾಡಬಹುದು? ಚುನಾಯಿತ ರಾಜ್ಯ ಸರ್ಕಾರಗಳ ಅಭಿಪ್ರಾಯ ಮತ್ತು ಹಕ್ಕುಗಳನ್ನು ಅದು ಹೇಗೆ ತಳ್ಳಿಹಾಕಬಹುದು? ಕೇಂದ್ರವು ಇದನ್ನು ಮಾಡಬಾರದು” ಎಂದು ಬ್ಯಾನರ್ಜಿ ಸಾರ್ವಜನಿಕವಾಗಿ ಆಗ್ರಹಿಸಿದ್ದಾರೆ.

ಈ ತಿದ್ದುಪಡಿಯು ಅಧಿಕಾರಿಗಳಲ್ಲಿ ಭಯದ ಮನೋವಿಕಾರವನ್ನು ಉಂಟುಮಾಡುತ್ತದೆ ಮತ್ತು ಅವರ ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಮೋದಿಯವರಿಗೆ ಹೀಗಾಗಲೇ ಪತ್ರ ಬರೆದಿದ್ದಾರೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ “ಭಯದ ಮನೋವಿಕಾರ” ಎಂಬ ಪದವನ್ನು ಬಳಸಿದ್ದಾರೆ.

ಪ್ರಸ್ತುತ ಇರುವ ನಿಯಮಗಳು ಕೇಂದ್ರ ಸರ್ಕಾರದ ಪರವಾಗಿವೆ. ಮತ್ತಷ್ಟು ಕಠಿಣತೆಯನ್ನು ತರುವುದು ಸಹಕಾರಿ ಒಕ್ಕೂಟವನ್ನು ದುರ್ಬಲಗೊಳಿಸುತ್ತದೆ ಎಂದು ವಿಜಯನ್ ಅಭಿಪ್ರಾಯಪಟ್ಟಿದ್ದಾರೆ.

“ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರಕ್ಕಿರುವಷ್ಟೇ ಸಮಾನತೆ ರಾಜ್ಯಸರ್ಕಾರಕ್ಕೂ ಇದೆ. ಏಕೆಂದರೆ ಎರಡು ಸರ್ಕಾರಗಳು ಕೂಡ ಜನರಿಂದ ಆಯ್ಕೆಯಾಗಿವೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಹಿಂದುತ್ವ ವಾರ್‌: ‘ಶಿವಸೇನೆ ಹುಟ್ಟೇ ಇರಲಿಲ್ಲ’ ಎಂದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...