Homeಮುಖಪುಟ477 ಕೇಬಲ್ ಟಿವಿ ಆಪರೇಟರ್‌ಗಳ ನೋಂದಣಿ ರದ್ದುಗೊಳಿಸಿದ ಸಚಿವಾಲಯ

477 ಕೇಬಲ್ ಟಿವಿ ಆಪರೇಟರ್‌ಗಳ ನೋಂದಣಿ ರದ್ದುಗೊಳಿಸಿದ ಸಚಿವಾಲಯ

- Advertisement -
- Advertisement -

ವಿವಿಧ ಉಲ್ಲಂಘನೆಗಳು ಮತ್ತು ನಿಯಮಗಳ ಪಾಲನೆಯಲ್ಲಿ ವೈಫಲ್ಯಗಳಿಗಾಗಿ ಹಲವು ಕೇಬಲ್ ಟೆಲಿವಿಷನ್ ಸಿಸ್ಟಮ್‌ಗಳನ್ನು ನಡೆಸುತ್ತಿರುವ 477 ಮಲ್ಟಿ ಸಿಸ್ಟಮ್ ಆಪರೇಟರ್‌ಗಳ (ಎಂಎಸ್‌ಒ) ನೋಂದಣಿಯನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ರದ್ದುಗೊಳಿಸಿದೆ.

MSOಗಳು ಕೇಬಲ್ ಟೆಲಿವಿಷನ್ ನೆಟ್ವರ್ಕ್ಸ್ (ನಿಯಂತ್ರಣ) ಕಾಯ್ದೆಯ ನಿಬಂಧನೆಗಳನ್ನು ಮತ್ತು ಅವುಗಳಡಿಯ ನಿಯಮಗಳನ್ನು ಪಾಲಿಸಬೇಕು ಮತ್ತು ಇತರ ಮಾರ್ಗಸೂಚಿಗಳಿಗೆ ಬದ್ಧರಾಗಿರಬೇಕು ಎನ್ನುವುದು ನೋಂದಣಿ ಷರತ್ತುಗಳಲ್ಲೊಂದಾಗಿದೆ.

ಷರತ್ತು ಮೀರಿದರೆ ನೀಡಲಾದ ಅನುಮತಿಯನ್ನು ರದ್ದುಗೊಳಿಸಬಹುದು ಅಥವಾ ಅಮಾನತುಗೊಳಿಸಬಹುದು. ಎಂಎಸ್‌ಒಗಳು ತಮ್ಮ ಚಂದಾದಾರರ ಪಟ್ಟಿಯನ್ನು ಮತ್ತು ಕಾಲಕಾಲಕ್ಕೆ ಸಚಿವಾಲಯವು ಮಾಡಿದ ವಿನಂತಿಗಳ ಪ್ರಕಾರ ಇತರ ವಿವರಗಳನ್ನು ಸಲ್ಲಿಸಬೇಕಾಗಿತ್ತು. ಇದಲ್ಲದೆ, ಇಂಟರ್‌ಕನೆಕ್ಷನ್ ರೆಗ್ಯುಲೇಷನ್ಸ್, 2017  ನಿಯಮ 15(1) ರ ಪ್ರಕಾರ, ಪ್ರತಿ ಚಾನೆಲ್‌ಗಳ ವಿತರಕರು ಕ್ಯಾಲೆಂಡರ್ ವರ್ಷದಲ್ಲಿ ಒಮ್ಮೆ ತಮ್ಮ ಸಿಸ್ಟಮ್‌ನ ಆಡಿಟ್ ಅನ್ನು ನಡೆಸುವುದು ಕಡ್ಡಾಯವಾಗಿದೆ ಎಂದು ಸಚಿವಾಲಯ ಹೇಳಿದೆ.

ಆದಾಗ್ಯೂ, ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (TRAI) ಹಂಚಿಕೊಂಡ ಮಾಹಿತಿಯ ಪ್ರಕಾರ, ಪರಿಶೀಲನೆಯಲ್ಲಿರುವ MSOಗಳು 2021 ಮತ್ತು/ಅಥವಾ 2022ರ ಕ್ಯಾಲೆಂಡರ್ ವರ್ಷಗಳಿಗೆ ತಮ್ಮ ಸಿಸ್ಟಮ್‌ಗಳ ಲೆಕ್ಕಪರಿಶೋಧನೆಗಳನ್ನು ನಡೆಸಿಲ್ಲ ಎಂದು ಸಚಿವಾಲಯವು ಗಮನಿಸಿದೆ.

ನಿಯಮಗಳ ಉಲ್ಲಂಘನೆಗಾಗಿ ಈ MSO ಗಳಿಗೆ ಜು.25ರಂದು ಶೋಕಾಸ್ ನೋಟಿಸ್‌ಗಳನ್ನು ಹೊರಡಿಸಲಾಗಿತ್ತು ಮತ್ತು ಉತ್ತರಿಸಲು 15 ದಿನಗಳ ಸಮಯಾವಕಾಶವನ್ನು ನೀಡಲಾಗಿತ್ತು. ಆದರೆ ಇದಕ್ಕೆ ಅವು ಪ್ರತಿಕ್ರಿಯಿಸಿರಲಿಲ್ಲ. ಸೆ.20ರಂದು ಮತ್ತೊಮ್ಮೆ ಅವಕಾಶ ನೀಡಿ ಅ.10ರವರೆಗೆ ಗಡುವು ನೀಡಲಾಗಿತ್ತು. ಆದಾಗ್ಯೂ MSOಗಳು ಅಗತ್ಯ ವಿವರಗಳನ್ನು ಸಲ್ಲಿಸಿರಲಿಲ್ಲ. ಹೀಗಾಗಿ ಅಂತಿಮವಾಗಿ ಅವುಗಳ ನೋಂದಣಿಗಳನ್ನು ರದ್ದುಗೊಳಿಸಲಾಗಿದೆ.

”… ನಿಗದಿತ ಅವಧಿಯೊಳಗೆ ನಿಗದಿತ MSO ಗಳು ಅಗತ್ಯವಾದ ಸ್ಪಷ್ಟೀಕರಣ ಅಥವಾ ವಿವರಣೆಯನ್ನು ನೀಡಿಲ್ಲ ಎಂದು ಗಮನಿಸಲಾಗಿದೆ, ಆದ್ದರಿಂದ, ಈ MSO ಗಳಿಗೆ ಆಗಸ್ಟ್ 24, 202 ರ ದಿನಾಂಕದವರೆಗೆ ಗಡುವು ನೀಡಲಾಯಿತು, ಅದರಲ್ಲಿ ಅಗತ್ಯವಿರುವ ಮಾಹಿತಿಯನ್ನು ಒದಗಿಸುವಂತೆ ಕೇಳಲಾಯಿತು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆದರೆ, MSOಗಳು ನಿಗದಿತ ಅವಧಿಯೊಳಗೆ ಅಗತ್ಯ ವಿವರಗಳನ್ನು ನೀಡಿಲ್ಲ. ಕೊನೆಯ ಅವಕಾಶ, ಸೆಪ್ಟೆಂಬರ್ 20ರ ದಿನಾಂಕದ ಪತ್ರಗಳನ್ನು ಮತ್ತೊಮ್ಮೆ ಅವರಿಗೆ ಕಳುಹಿಸಲಾಯಿತು. ಗಡುವನ್ನು ಅಕ್ಟೋಬರ್ 10 ರವರೆಗೆ ವಿಸ್ತರಿಸಲಾಯಿತು. ಅವರು ಪ್ರತಿಕ್ರಿಯಿಸದ ಕಾರಣ ಅಥವಾ ಅಗತ್ಯ ವಿವರಗಳನ್ನು ನೀಡದ ಕಾರಣ, ಅಂತಿಮವಾಗಿ ಅವರ ನೋಂದಣಿಗಳನ್ನು ರದ್ದುಗೊಳಿಸಲಾಯಿತು.

ಉಲ್ಲಂಘಿಸುವ MSOಗಳಿಗೆ 30 ದಿನಗಳ ಒಳಗೆ ಮಾಹಿತಿ ಮತ್ತು ಪ್ರಸಾರ ಕಾರ್ಯದರ್ಶಿಯ ಮುಂದೆ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಮತ್ತೊಂದು ಅವಕಾಶವನ್ನು ನೀಡಲಾಗಿದೆ.

ಆದೇಶದ ವಿರುದ್ಧ ಮಾಹಿತಿ ಮತ್ತು ಪ್ರಸಾರ ಕಾರ್ಯದರ್ಶಿಗಳಿಗೆ 30 ದಿನಗಳಲ್ಲಿ ಮೇಲ್ಮನವಿಗಳನ್ನು ಸಲ್ಲಿಸಲು ನೋಂದಣಿ ರದ್ದುಗೊಂಡಿರುವ MSOಗಳಿಗೆ ಇನ್ನೊಂದು ಅವಕಾಶವನ್ನು ನೀಡಲಾಗಿದೆ.

ಇದನ್ನೂ ಓದಿ: ದೇವಾಲಯದ ಆವರಣದಲ್ಲಿ RSS ಚಟುವಟಿಕೆಗೆ ನಿಷೇಧ: ಕೇರಳ ಸರ್ಕಾರದ ಸುತ್ತೋಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...