Homeಕರ್ನಾಟಕಐಬಿಪಿಎಸ್‌ ಹುದ್ದೆಗಳನ್ನು ಮರುನಿಗದಿ ಮಾಡಿ ಹೊಸ ಅರ್ಜಿ ಆಹ್ವಾನಿಸಲು ಕುಮಾರಸ್ವಾಮಿ ಆಗ್ರಹ

ಐಬಿಪಿಎಸ್‌ ಹುದ್ದೆಗಳನ್ನು ಮರುನಿಗದಿ ಮಾಡಿ ಹೊಸ ಅರ್ಜಿ ಆಹ್ವಾನಿಸಲು ಕುಮಾರಸ್ವಾಮಿ ಆಗ್ರಹ

- Advertisement -
- Advertisement -

ಐಬಿಪಿಎಸ್‌ ನಡೆಸುವ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿರುವುದನ್ನು ಸ್ವಾಗತಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕರ್ನಾಟಕದಲ್ಲಿ ಹುದ್ದೆಗಳನ್ನು ಖಾಲಿ ಇಲ್ಲ, ಮರುನಿಗದಿ ಮಾಡಿ ಹೊಸದಾಗಿ ಅರ್ಜಿ ಆಹ್ವಾನಿಸಿ ಎಂದು ಆಗ್ರಹಿಸಿದ್ದಾರೆ.

’ಐಬಿಪಿಎಸ್‌ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್‌ (ಆರ್‌ಆರ್‌ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿವೆ. ಐಬಿಪಿಎಸ್‌ನ ನಡೆಯನ್ನು ನಾನು ಸ್ವಾಗತಿಸುತ್ತೇನೆ. ಐಬಿಪಿಎಸ್‌ ಪರೀಕ್ಷೆ ಕನ್ನಡದಲ್ಲೇ ನಡೆಸುವಂತೆ ಮಾಡಿದ ಕನ್ನಡದ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ’ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

’ಆದರೆ, ಐಬಿಪಿಎಸ್‌ ಪರೀಕ್ಷೆಗಳಲ್ಲಿನ ಕನ್ನಡಿಗರಾದ ನಮ್ಮ ಬೇಡಿಕೆ ಇಷ್ಟೇ ಅಲ್ಲ. ಐಬಿಪಿಎಸ್‌ ಆಯ್ಕೆ ಕಟ್ಟಲೆಗಳಲ್ಲಿ ನಮ್ಮದು ಇನ್ನೂ ಆಕ್ಷೇಪಗಳಿವೆ. 2014‌ಕ್ಕೂ ಮುನ್ನ ಇದ್ದ ನೇಮಕಾತಿ ಕಟ್ಟಲೆಗಳನ್ನೇ ಜಾರಿಗೆ ತರಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ. ಕರ್ನಾಟಕದಲ್ಲಿ ಕನ್ನಡಿಗನಿಗೇ ಬ್ಯಾಂಕಿಂಗ್‌ ನೌಕರಿ ಸಿಗುವಂತೆ ಮಾಡಲು ಇದು ಅತ್ಯಗತ್ಯ’ ಎಂದಿದ್ದಾರೆ.

ಇದನ್ನೂ ಓದಿ: ಹಿಂದೂ ಸಂಘಟನೆಗಳ ವಿರೋಧ: ಮಸೀದಿ, ಮದರಸಾಗಳಿಗೆ ಬಿಡುಗಡೆ ಮಾಡಿದ್ದ ಗೌರವಧನ ಹಿಂಪಡೆದ ಸರ್ಕಾರ

’2014‌ಕ್ಕೆ ಮುನ್ನ ಕರ್ನಾಟಕದಲ್ಲಿನ ಬ್ಯಾಂಕ್‌ ಸಿಬ್ಬಂದಿಗೆ ಕನ್ನಡ ಗೊತ್ತಿರಬೇಕೆಂಬ ನಿಯಮವಿತ್ತು. ನಂತರ ಇದನ್ನು ತೆಗೆದು, ಕೆಲಸಕ್ಕೆ ಸೇರಿದ 6 ತಿಂಗಳಲ್ಲಿ ಕನ್ನಡ ಕಲಿಯಬೇಕೆಂದು ಹೇಳಲಾಯಿತು. ಇದರಿಂದಾಗಿ ರಾಜ್ಯದ ಬ್ಯಾಂಕ್‌ಗಳಲ್ಲಿ ಕನ್ನಡ ತಿಳಿಯದವರೇ ತುಂಬಿದ್ದಾರೆ. ಇದು ಕನ್ನಡಿಗರಿಗೆ ಸಮಸ್ಯಾತ್ಮಕವಾಗಿದೆ. ಅಪಮಾನಗಳೂ ಆಗುತ್ತಿವೆ’ ಎಂದು ಟ್ವೀಟ್ ಮಾಡಿದ್ದಾರೆ.

’ಕನ್ನಡಿಗರನ್ನು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಮಾತನಾಡುವಂತೆ ಒತ್ತಾಯಿಸುವುದು, ಕನ್ನಡಿಗರ ಬಗ್ಗೆ ನಿರ್ಲಕ್ಷ್ಯ ತೋರುವ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಲೇ ಇವೆ. 2014ಕ್ಕೆ ಮೊದಲಿದ್ದ ಐಬಿಪಿಎಸ್ ಕಟ್ಟಲೆಗಳನ್ನು ಮರಳಿ ಜಾರಿಗೆ ತರುವುದೇ ಇದಕ್ಕೆ ಏಕೈಕ ಪರಿಹಾರ. ಅತ್ಯಗತ್ಯ ಸೇವೆಯಾಗಿರುವ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

’ಈ ಬಾರಿ ಐಬಿಪಿಎಸ್‌ ನಡೆಸುತ್ತಿರುವ ಬ್ಯಾಂಕಿಂಗ್‌ ಪರೀಕ್ಷೆಗಳಲ್ಲಿ ಕರ್ನಾಟಕದಲ್ಲಿ ಒಂದೂ ಹುದ್ದೆ ಇಲ್ಲ. ರಾಜ್ಯದ ಪ್ರತಿ ತಾಲ್ಲೂಕು, ಜಿಲ್ಲಾ ಕೇಂದ್ರದಲ್ಲಿಯೂ ಕೆವಿಜಿ, ಕೆವಿಜಿಬಿ ಬ್ಯಾಂಕ್‌ಗಳಿವೆ.  ಆದರೂ ಒಂದೂ ಹುದ್ದೆ ಇಲ್ಲದಿರುವುದು ಆಶ್ಚರ್ಯ ತಂದಿದೆ. ಹುದ್ದೆಗಳನ್ನು ಮರುನಿಗದಿ ಮಾಡಿ ಹೊಸದಾಗಿ ಅರ್ಜಿ ಆಹ್ವಾನಿಸುವುದು ಅಗತ್ಯವಿದೆ’ ಎಂದು ಆಗ್ರಹಿಸಿದ್ದಾರೆ.

’ಈ ಬಾರಿ ಕನ್ನಡದಲ್ಲಿ ಪರೀಕ್ಷೆ ಬರೆದು ಪಾಸಾಗುವ ಕನ್ನಡಿಗ ಅಭ್ಯರ್ಥಿಗಳು ಅನಿವಾರ್ಯವಾಗಿ ಬೇರೆ ರಾಜ್ಯಗಳಲ್ಲಿ ಕೆಲಸ ಮಾಡಬೇಕಾದ ಸನ್ನಿವೇಶ ಬರುತ್ತದೆ. ಕರ್ನಾಟಕದಲ್ಲಿಯೂ ಹುದ್ದೆ ನಿಗದಿ ಮಾಡಿ ಮರು ಅರ್ಜಿ ಆಹ್ವಾನಿಸುವುದು ಸೂಕ್ತ. ಈ ಸಂಬಂಧ ರಾಜ್ಯದ ಎಲ್ಲರೂ ದನಿ ಎತ್ತುವುದು ಅಗತ್ಯವಿದೆ. ಕನ್ನಡಿಗ ಅಭ್ಯರ್ಥಿಗಳಿಗೆ ನ್ಯಾಯ ಕಲ್ಪಿಸಬೇಕಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಬೇಡಿಕೆಯಿಟ್ಟಿದ್ದಾರೆ.


ಇದನ್ನೂ ಓದಿ: ಪೆಟ್ರೋಲ್ 100 ನಾಟೌಟ್: ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ 5 ದಿನ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...