Homeಮುಖಪುಟಐಸಿಸಿ ಚಾಂಪಿಯನ್ಸ್ ಟ್ರೋಫಿ ವಿಜಯೋತ್ಸವ : ಯುವಕರ ತಲೆ ಬೋಳಿಸಿ ವಿಕೃತಿ ಮೆರೆದ ಪೊಲೀಸರು

ಐಸಿಸಿ ಚಾಂಪಿಯನ್ಸ್ ಟ್ರೋಫಿ ವಿಜಯೋತ್ಸವ : ಯುವಕರ ತಲೆ ಬೋಳಿಸಿ ವಿಕೃತಿ ಮೆರೆದ ಪೊಲೀಸರು

- Advertisement -
- Advertisement -

ಮಾರ್ಚ್ 9ರಂದು ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಜಯಗಳಿಸಿದ ಬಳಿಕ ಮಧ್ಯ ಪ್ರದೇಶದ ದೇವಾಸ್‌ನಲ್ಲಿ ನಡೆದ ಸಂಭ್ರಮಾಚರಣೆ ವೇಳೆ, ಪೊಲೀಸ್ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾದ ಒಂಬತ್ತು ಯುವಕರ ತಲೆ ಬೋಳಿಸಿ ವಿಕೃತಿ ಮೆರೆದ ಬಗ್ಗೆ ವರದಿಯಾಗಿದೆ.

ಪೊಲೀಸರು ಬಂಧಿತ ಯುವಕರ ತಲೆ ಬೋಳಿಸಿ, ಅವರನ್ನು ರಸ್ತೆಯಲ್ಲಿ ಮೆರವಣಿಗೆ ಮಾಡಿದ್ದಾರೆ ಎನ್ನಲಾಗಿದ್ದು, ಮಂಗಳವಾರ (ಮಾ.12) ಈ ಕುರಿತ ವಿಡಿಯೋಗಳು ವೈರಲ್ ಆದ ಬಳಿಕ ಆಕ್ರೋಶ ಭುಗಿಲೆದ್ದಿದೆ.

ಪೊಲೀಸರ ಕ್ರಮವನ್ನು ದೇವಾಸ್ ಬಿಜೆಪಿ ಶಾಸಕಿ ಗಾಯತ್ರಿ ರಾಜೇ ಪವಾರ್ ಖಂಡಿಸಿದ್ದು, “ಪೊಲೀಸರು ಅಮಾಯಕರನ್ನು ಬಂಧಿಸಿದ್ದಾರೆ. ಬಂಧನದಲ್ಲಿರುವವರು ನಿರಪರಾಧಿಗಳು” ಎಂದಿದ್ದಾರೆ.

ದೇವಾಸ್ ಪೊಲೀಸ್ ವರಿಷ್ಠಾಧಿಕಾರಿ ಪುನೀತ್ ಗೆಹ್ಲೋಡ್ ಅವರನ್ನು ಭೇಟಿಯಾದ ಶಾಸಕಿ, ಈ ವಿಷಯದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ಈ ಹಿನ್ನೆಲೆ, ಪೊಲೀಸರೊಂದಿಗೆ ಯುವಕರ ಘರ್ಷಣೆ, ಅವರ ತಲೆ ಬೋಳಿಸಿ ಮೆರವಣಿಗೆ ಮಾಡಿರುವುದು ಮತ್ತು ವಿವೇಚನಾರಹಿತ ಬಲಪ್ರಯೋಗ ಸೇರಿದಂತೆ ಇಡೀ ಪ್ರಕರಣದ ತನಿಖೆ ಮಾಡುವ ಜವಾಬ್ದಾರಿಯನ್ನು ಹೆಚ್ಚುವರಿ ಎಸ್ಪಿ ಜೈವೀರ್ ಸಿಂಗ್ ಭಡೋರಿಯಾ ಅವರಿಗೆ ವಹಿಸಲಾಗಿದೆ. ಏಳು ದಿನಗಳಲ್ಲಿ ಒಟ್ಟಾರೆ ಪ್ರಕರಣದ ವರದಿ ನೀಡುವಂತೆ ಸೂಚಿಸಲಾಗಿದೆ.

“ನಾವು ಈ ವಿಷಯವನ್ನು ಎಲ್ಲಾ ಕೋನಗಳಿಂದ ತನಿಖೆ ಮಾಡುತ್ತೇವೆ. ಏಳು ದಿನಗಳಲ್ಲಿ ಎಲ್ಲಾ ವಿಷಯವನ್ನು ಬಹಿರಂಗಪಡಿಸುತ್ತೇವೆ. ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುತ್ತೇವೆ” ಎಂದು ಎಸ್ಪಿ ಗೆಹ್ಲೋಡ್ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಮಾರ್ಚ್ 9ರ ರಾತ್ರಿ ಭಾರತೀಯ ಪುರುಷರ ಕ್ರಿಕೆಟ್ ತಂಡ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲಿ ನ್ಯೂಜಿಲೆಂಡ್ ಅನ್ನು ಸೋಲಿಸಿ ಪ್ರಶಸ್ತಿ ಗೆದ್ದ ನಂತರ, ದೇವಾಸ್‌ನ ಕೆಲವು ಭಾಗಗಳಲ್ಲಿ ಘರ್ಷಣೆಗಳು ಮತ್ತು ವಿಧ್ವಂಸಕ ಕೃತ್ಯಗಳು ನಡೆದಿರುವ ಬಗ್ಗೆ ವರದಿಯಾಗಿವೆ. ಅಂತಹ ಒಂದು ಘಟನೆಯಲ್ಲಿ, ಪಟಾಕಿ ಸಿಡಿಸುವುದಕ್ಕೆ ಸಂಬಂಧಿಸಿದಂತೆ ಕೆಲವು ಯುವಕರು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಅಜಯ್ ಗುರ್ಜರ್ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಂಗಾಳದಲ್ಲಿ ಬಿಜೆಪಿ ಗೆದ್ದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಕ್ಕೆ ಎಸೆಯುತ್ತೇವೆ : ಸುವೇಂದು ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...