Homeಮುಖಪುಟಇಸ್ರೇಲ್ ಪ್ರಧಾನಿ ನೆತನ್ಯಾಹು, ಹಮಾಸ್ ನಾಯಕ ಡೀಫ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಕೋರ್ಟ್

ಇಸ್ರೇಲ್ ಪ್ರಧಾನಿ ನೆತನ್ಯಾಹು, ಹಮಾಸ್ ನಾಯಕ ಡೀಫ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಕೋರ್ಟ್

- Advertisement -
- Advertisement -

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಮತ್ತು ಹಮಾಸ್‌ ಮಿಲಿಟರಿ ಮುಖ್ಯಸ್ಥ ಮೊಹಮ್ಮದ್ ಡೀಫ್‌ (ಮೊಹಮ್ಮದ್ ದಿಯಾಬ್ ಇಬ್ರಾಹಿಂ ಅಲ್-ಮಸ್ರಿ) ವಿರುದ್ದ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ (ಐಸಿಸಿ) ಗುರುವಾರ (ನ.21) ಬಂಧನ ವಾರೆಂಟ್ ಹೊರಡಿಸಿದೆ.

ಬೆಂಜಮಿನ್ ನೆತನ್ಯಾಹು ಮತ್ತು ಯೋವ್ ಗ್ಯಾಲಂಟ್ 8 ಅಕ್ಟೋಬರ್ 2023ರಿಂದ 20 ಮೇ 2024 (ಪ್ರಾಸಿಕ್ಯೂಷನ್ ಬಂಧನ ವಾರೆಂಟ್‌ಗೆ ಅರ್ಜಿ ಸಲ್ಲಿಸಿದ ದಿನ) ರವರೆಗೆ ನಡೆಸಿದ ‘ಮನುಷ್ಯ ವಿರೋಧಿ ಯುದ್ದ ಅಪರಾಧ’ಗಳಿಗೆ ಸಂಬಂಧಿಸಿದಂತೆ ಬಂಧನ ವಾರೆಂಟ್ ಜಾರಿಗೊಳಿಸಲಾಗಿದೆ ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ.

ಐಸಿಸಿಯ ಈ ಆದೇಶ ನೆತನ್ಯಾಹು ಓಡಾಟಕ್ಕೆ ಅಂಕುಶ ಹಾಕಲಿದೆ. ಏಕೆಂದರೆ, ಐಸಿಸಿಯ ವ್ಯಾಪ್ತಿಗೆ ಬರುವ 124 ರಾಷ್ಟ್ರಗಳಲ್ಲಿ ಯಾರು ಬೇಕಾದರು ತಮ್ಮ ಪ್ರದೇಶದ ಒಳಗೆ ನೆತನ್ಯಾಹು ಅವರನ್ನು ಬಂಧಿಸಬಹುದು ಎಂದು ವರದಿಗಳು ಹೇಳಿವೆ.

ಮಾನವ ಹಕ್ಕುಗಳ ಗುಂಪುಗಳು ಮತ್ತು ಹಮಾಸ್ ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿದೆ.

ಎರಡೂ ಕಡೆಯವರ ವಿರುದ್ಧದ ಬಂಧನ ವಾರೆಂಟ್‌ಗಳು “ಕೆಲ ವ್ಯಕ್ತಿಗಳು ಕಾನೂನಿಗಿಂತ ದೊಡ್ಡವರು ಎಂಬ ಭಾವನೆಯನ್ನು ಹೋಗಲಾಡಿಸುತ್ತದೆ” ಎಂದು ಹ್ಯೂಮನ್ ರೈಟ್ಸ್ ವಾಚ್‌ನ ಸಹಾಯಕ ಅಂತಾರಾಷ್ಟ್ರೀಯ ನ್ಯಾಯ ನಿರ್ದೇಶಕ ಬಾಲ್ಕೀಸ್ ಜರ್ರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಪ್ರಧಾನಿ ನೆತನ್ಯಾಹು ಈಗ ಅಧಿಕೃತವಾಗಿ ಬೇಕಾಗಿರುವ ವ್ಯಕ್ತಿ” ಎಂದು ಮಾನವ ಹಕ್ಕುಗಳ ಸಂಸ್ಥೆ ಅಮ್ನೆಸ್ಟಿಯ ಪ್ರಧಾನ ಕಾರ್ಯದರ್ಶಿ ಆಗ್ನೆಸ್ ಕ್ಯಾಲಮರ್ಡ್ ಹೇಳಿದ್ದಾರೆ.

“ಇದೊಂದು ಐತಿಹಾಸಿಕ ಆದೇಶ. ನಮ್ಮ ಜನರ ವಿರುದ್ಧದ ಅನ್ಯಾಯದ ಸುದೀರ್ಘ ಇತಿಹಾಸವನ್ನು ಈ ಆದೇಶ ತಿದ್ದುಪಡಿ ಮಾಡಲಿದೆ. ನಮ್ಮ ಜನರು ಕಳೆದ 76 ವರ್ಷಗಳಿಂದ ಸುದೀರ್ಘ ಫ್ಯಾಸಿಸ್ಟ್ ಆಕ್ರಮಣವನ್ನು ಎದುರಿಸುತ್ತಿದ್ದಾರೆ” ಎಂದು ಹಮಾಸ್ ಹೇಳಿಕೆಯಲ್ಲಿ ತಿಳಿಸಿದೆ.

“ನಮ್ಮ ಪ್ಯಾಲೆಸ್ತೀನ್ ಜನರ ವಿರುದ್ಧ ದೌರ್ಜನ್ಯ ಎಸಗಿದ ಮತ್ತು ಆಧುನಿಕತೆಗೆ ತಿಳಿದಿರುವ ಅತ್ಯಂತ ಘೋರವಾದ ಕೊಲೆ, ಭಯೋತ್ಪಾದನೆ ಮತ್ತು ಹಸಿವಿನ ಕೃತ್ಯಗಳನ್ನು ಎಸಗಿರುವ ಎಲ್ಲಾ ಕ್ರಿಮಿನಲ್ ನಾಯಕರು, ಮಂತ್ರಿಗಳು ಮತ್ತು ಫ್ಯಾಸಿಸ್ಟ್ ಮಿಲಿಟರಿ ಅಧಿಕಾರಿಗಳನ್ನು ಈ ಆದೇಶದೊಳಗೆ ಸೇರಿಸಿ” ಎಂದು ಹಮಾಸ್ ಐಸಿಸಿಯನ್ನು ಒತ್ತಾಯಿಸಿದೆ. ತನ್ನ ಮಿಲಿಟರಿ ಮುಖ್ಯಸ್ಥ ಡೀಫ್ ವಿರುದ್ಧದ ವಾರೆಂಟ್ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ.

ಕಳೆದ ಜುಲೈನಲ್ಲಿ ದಕ್ಷಿಣ ಗಾಝಾದಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಡೀಫ್ ಅವರನ್ನು ಕೊಂದಿರುವುದಾಗಿ ಇಸ್ರೇಲ್ ಆಗಸ್ಟ್ ಆರಂಭದಲ್ಲಿ ಹೇಳಿತ್ತು. ಆದರೆ, ಹಮಾಸ್ ಈ ಸಾವನ್ನು ದೃಢಪಡಿಸಿಲ್ಲ. ಡೀಫ್ ಸಾವನ್ನಪ್ಪಿದ್ದಾರೆಯೇ.. ಇಲ್ಲವೇ? ಎಂಬುವುದನ್ನು ನಿರ್ಧರಿಸಲು ಪ್ರಾಸಿಕ್ಯೂಟರ್‌ಗೆ ಸಾಧ್ಯವಾಗದ ಕಾರಣ ಬಂಧನ ವಾರೆಂಟ್ ಹೊರಡಿಸಿರುವುದಾಗಿ ನ್ಯಾಯಾಲಯ ಹೇಳಿದೆ.

ಐಸಿಸಿಯ ಆದೇಶವನ್ನು ಇಸ್ರೇಲ್ ಕಠುವಾಗಿ ಟೀಕಿಸಿದೆ. ಇದು “ಯಹೂದಿ ವಿರೋಧಿ” ಆದೇಶ ಎಂದಿದೆ. ಐಸಿಸಿ “ತನ್ನ ವಿರುದ್ಧ ಮಾಡಿರುವ ಅಸಂಬದ್ಧ, ಸುಳ್ಳು ಆರೋಪಗಳನ್ನು ಅಸಹ್ಯದಿಂದ ತಿರಸ್ಕರಿಸುತ್ತೇವೆ” ಎಂದು ಇಸ್ರೇಲ್ ತಿಳಿಸಿದೆ.

ಯುನೈಟೆಡ್ ಸ್ಟೇಟ್ಸ್ (ಯುಎಸ್‌) ಸೇರಿದಂತೆ ಇಸ್ರೇಲ್‌ನ ಮಿತ್ರರಾಷ್ಟ್ರಗಳು ಕೂಡ ಇಸ್ರೇಲಿ ರಾಜಕಾರಣಿಗಳ ವಿರುದ್ಧದ ಬಂಧನ ವಾರೆಂಟ್‌ಗಳನ್ನು ಖಂಡಿಸಿವೆ.

ಇದನ್ನೂ ಓದಿ : ಕಾರ್ಮಿಕರ ಕಳ್ಳ ಸಾಗಾಣಿಕೆ ತಡೆಯಲು ಪ್ರಸ್ತಾವನೆ ರೂಪಿಸಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...