Homeಮುಖಪುಟಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

ಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

- Advertisement -
- Advertisement -

ಗಾಝಾದ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ (ಐಸಿಸಿ) ಕೋರ್ಟ್‌ನಿಂದ ಬಂಧನ ವಾರೆಂಟ್ ಕೋರುವುದಾಗಿ ನ್ಯಾಯಾಲಯದ ಪ್ರಾಸಿಕ್ಯೂಟರ್ ಕರೀಮ್ ಖಾನ್ ಸೋಮವಾರ ಸಿಎನ್‌ಎನ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ.

ಅಕ್ಟೋಬರ್ 7ರಂದು ನಡೆದ ಇಸ್ರೇಲ್ ಮೇಲಿನ ದಾಳಿ ಮತ್ತು ನಂತರ ಗಾಝಾದಲ್ಲಿ ನಡೆದ ಯುದ್ಧದಲ್ಲಿ ಮಾನವೀಯತೆಯ ವಿರುದ್ಧದ ಅಪರಾಧಗಳ ಆರೋಪದ ಮೇಲೆ ಎರಡು ಕಡೆಯ ಪ್ರಮುಖರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಖಾನ್ ಆಗ್ರಹಿಸಿದ್ದಾರೆ.

ಇಸ್ರೇಲ್‌ನ ರಕ್ಷಣಾ ಸಚಿವ ಯೊವಾವ್ ಗ್ಯಾಲಂಟ್, ಹಮಾಸ್‌ನ ಇಬ್ಬರು ಪ್ರಮುಖ ನಾಯಕರಾದ ಅಲ್ ಕ್ವಸೀಮ್ ಬ್ರಿಗೇಡ್‌ ನಾಯಕ ಮೊಹಮ್ಮದ್ ದಿಯಾಬ್ ಇಬ್ರಾಹಿಂ ಅಲ್-ಮಸ್ರಿ (ಮೊಹಮ್ಮದ್ ದೆಯಿಫ್) ಮತ್ತು ಹಮಾಸ್‌ನ ರಾಜಕೀಯ ನಾಯಕ ಇಸ್ಮಾಯಿಲ್ ಹನಿಯೆಹ್ ಅವರನ್ನೂ ಯುದ್ಧಾಪರಾಧಕ್ಕೆ ಹೊಣೆಯಾಗಿಸಬೇಕು ಎಂದು ಕರೀಂ ಖಾನ್ ಹೇಳಿದ್ದಾರೆ.

ಅಮೆರಿಕದ ಮಿತ್ರ ರಾಷ್ಟ್ರ ಇಸ್ರೇಲ್‌ನ ನಾಯಕರ ವಿರುದ್ದ ಇದೇ ಮೊದಲ ಬಾರಿಗೆ ಐಸಿಸಿ ಬಂಧನ ವಾರೆಂಟ್ ಜಾರಿಗೊಳಿಸಲು ಮುಂದಾಗಿದೆ. ಉಕ್ರೇನ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ರಷ್ಯಾದ ನಾಯಕರ ವಿರುದ್ದವೂ ಇದೇ ರೀತಿಯ ಆದೇಶ ನೀಡಿತ್ತು. 2011ರಲ್ಲಿ ಜನರು ದಂಗೆಯೆದ್ದು ಲಿಬಿಯಾದ ಸರ್ವಾಧಿಕಾರಿ ಉಮರ್ ಗಡಾಫಿಯನ್ನು ಹತ್ಯೆಗೈದಿದ್ದರು. ಆ ಸಂದರ್ಭದಲ್ಲಿ ಗಡಾಫಿ ಕೂಡ ಐಸಿಸಿಯಿಂದ ಬಂಧನ ವಾರೆಂಟ್ ಎದುರಿಸುತ್ತಿದ್ದರು.

ಹಮಾಸ್ ಮತ್ತು ಇಸ್ರೇಲ್ ನಾಯಕರ ವಿರುದ್ದ ಒಂದೇ ರೀತಿಯ ಆರೋಪಗಳನ್ನು ಹೊರಿಸಿ ಬಂಧನ ವಾರೆಂಟ್ ಹೊರಡಿಸಲು ಮುಂದಾಗುವ ಮೂಲಕ ಐಸಿಸಿ, ಭಯೋತ್ಪಾದಕ ಸಂಘಟನೆ ಮತ್ತು ಚುನಾಯಿತ ಸರ್ಕಾರದ ನಾಯಕರನ್ನು ಒಂದೇ ತಕ್ಕಡಿಯಲ್ಲಿ ತೂಗಿದೆ, ಎಂಬ ಟೀಕೆಗೆ ಗುರಿಯಾಗಬಹುದು ಎಂದು ಸಿಎನ್ಎನ್‌ ಅಭಿಪ್ರಾಯಪಟ್ಟಿದೆ.

ಹಮಾಸ್ ನಾಯಕರಾದ ಸಿನ್ವಾರ್, ಹನಿಯೆಹ್ ಮತ್ತು ಅಲ್-ಮಸ್ರಿ ವಿರುದ್ಧದ ಸಾಮೂಹಿಕ ಹತ್ಯೆ, ನಾಗರಿಕರನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿರುವುದು, ಅತ್ಯಾಚಾರ ಮತ್ತು ಬಂಧನದಲ್ಲಿ ಲೈಂಗಿಕ ದೌರ್ಜನ್ಯದಂತಹ ಆರೋಪಗಳಿವೆ ಎಂದು ಖಾನ್ ಹೇಳಿದ್ದಾರೆ.

ಇಸ್ರೇಲ್‌ಗೆ ಒತ್ತೆಯಾಳುಗಳನ್ನು ಬಿಡಿಸಿಕೊಳ್ಳುವ ಎಲ್ಲಾ ಹಕ್ಕುಗಳು ಇವೆ. ಆದರೆ, ಅವರು ಅದನ್ನು ಕಾನೂನನ್ನು ಪಾಲಿಸುವ ಮೂಲಕ ಮಾಡಬೇಕು ಎಂದಿದ್ದಾರೆ.

ಖಾನ್ ಅವರ ಹೇಳಿಕೆಯನ್ನು ಹಮಾಸ್ ಖಂಡಿಸಿದೆ. ಕಾನೂನಿನ ಆಧಾರವಿಲ್ಲದೆ ಪ್ಯಾಲೆಸ್ತೀನ್ ಪ್ರತಿರೋಧದ ನಾಯಕರ ವಿರುದ್ಧ ಬಂಧನ ವಾರಂಟ್‌ ಹೊರಡಿಸಲು ಮುಂದಾಗುವ ಮೂಲಕ ಐಸಿಸಿ ಪ್ರಾಸಿಕ್ಯೂಟರ್ ಬಲಿಪಶುಗಳನ್ನು ಆಕ್ರಮಣಕಾರರೊಂದಿಗೆ ಸಮೀಕರಿಸುವ ಪ್ರಯತ್ನ ಮಾಡಿದ್ದಾರೆ ಎಂದಿದೆ.

‘ಯಾರೂ ಕಾನೂನಿಗಿಂತ ಮೇಲಲ್ಲ’

ಇಸ್ರೇಲ್ ಪ್ರಧಾನಿ ನೆತನ್ಯಾಹು ಮತ್ತು ರಕ್ಷಣಾ ಸಚಿವ ಗ್ಯಾಲಂಟ್ ವಿರುದ್ಧ ಸಾಮೂಹಿಕ ಹತ್ಯೆ, ಹಸಿವಿನಿಂದ ಕೆಡವುದು, ಮಾನವೀಯ ಪರಿಹಾರ ಸರಬರಾಜುಗಳನ್ನು ನಿರಾಕರಿಸುವುದು, ಸಂಘರ್ಷದ ವೇಳೆ ಅಮಾಯಕ ನಾಗರಿಕರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸುವುದು ಸೇರಿದಂತೆ ಹಲವಾರು ಆರೋಪಗಳಿವೆ. ಕಾನೂನಿಗಿಂತ ಯಾರೂ ಮೇಲಲ್ಲ ಎಂದು ಕರೀಂ ಖಾನ್ ತಿಳಿಸಿದ್ದಾರೆ.

ಇದನ್ನೂ ಓದಿ : ಬನಾರಸ್ ಹಿಂದೂ ವಿವಿ ಕೋವಾಕ್ಸಿನ್ ಅಧ್ಯಯನ ವರದಿಯಿಂದ ಅಂತರ ಕಾಯ್ದುಕೊಂಡ ಐಸಿಎಂಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...