Homeಮುಖಪುಟಐಸಿಸಿ ಟಿ20 ವಿಶ್ವಕಪ್: ಮಹತ್ವದ ಪಂದ್ಯದಲ್ಲಿ ಬಾಂಗ್ಲಾ ವಿರುದ್ದ ಗೆಲುವು: ಸೆಮಿಫೈನಲ್ ನತ್ತ ಭಾರತ ತಂಡ

ಐಸಿಸಿ ಟಿ20 ವಿಶ್ವಕಪ್: ಮಹತ್ವದ ಪಂದ್ಯದಲ್ಲಿ ಬಾಂಗ್ಲಾ ವಿರುದ್ದ ಗೆಲುವು: ಸೆಮಿಫೈನಲ್ ನತ್ತ ಭಾರತ ತಂಡ

- Advertisement -
- Advertisement -

ಗೆಲ್ಲಲೇಬೇಕಾದ ಒತ್ತಡ, ಮಳೆಯ ಕಣ್ಣಾಮುಚ್ಚಾಲೆಗಳ ನಡುವಿನ ಮಹತ್ವದ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶ ತಂಡದ ವಿರುದ್ಧ 5 ರನ್ ಗಳ ಗೆಲುವು ದಾಖಲಿಸಿ ಸೆಮಿಫೈನಲ್ ಕಡೆ ಮುಖ ಮಾಡಿದೆ.

ಟಾಸ್ ಸೋತ ಕಾರಣ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮತ್ತೆ ಆರಂಭಿಕ ಆಘಾತ ಎದುರಿಸಿತು. ನಾಯಕ ರೋಹಿತ್ ಶರ್ಮಾ ಕ್ಯಾಚಿತ್ತು ನಿರ್ಗಮಿಸಿದರು. ಆದರೆ ಕಳೆದ ಮೂರು ಪಂದ್ಯಗಳಲ್ಲಿ ವಿಫಲರಾಗಿದ್ದ ಕೆ.ಎಲ್ ರಾಹುಲ್ ಜವಾಬ್ದಾರಿಯುತ ಆಟವಾಡಿದರು. 32 ಎಸೆತಗಳಲ್ಲಿ 50 ರನ್ ಗಳಿಸಿದರು. ವಿರಾಟ್ ಕೊಹ್ಲಿ ಮತ್ತೊಮ್ಮೆ ಆಕರ್ಷಕ ಪ್ರದರ್ಶನ ನೀಡಿ 44 ಎಸೆತಗಳಲ್ಲಿ 64 ರನ್ ಗಳಿಸಿ ಭಾರತ ತಂಡ ಸವಾಲಿನ ಮೊತ್ತ ಪೇರಿಸಲು ಸಹಕಾರಿಯಾದರು.

ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿದ ಸೂರ್ಯಕುಮಾರ್ ಯಾದವ್ 16 ಎಸೆತಗಳಲ್ಲಿ 30 ರನ್ ಚಚ್ಚಿದರು. ಹಾರ್ದಿಕ್ ಪಾಂಡ್ಯ ಕೇವಲ 5 ರನ್ ಗಳಿಸಿ ಔಟಾದರೆ ದಿನೇಶ್ ಕಾರ್ತಿಕ್ ಸಹ 07 ರನ್ ಗಳಿಸಿದ್ದಾಗ ರನ್ ಔಟ್ ಆದರು.

ಆಲ್ ರೌಂಡರ್ ಅಕ್ಸರ್ ಪಟೇಲ್ ರನ್ ಗಳಿಸಲು ತಿಣುಕಾಡಿದರು. ಆರ್. ಅಶ್ವಿನ್ ಕೊನೆಯಲ್ಲಿ 6 ಎಸೆತಗಳಲ್ಲಿ 13 ರನ್ ಗಳಿಸಿ ತಂಡಕ್ಕೆ ನೆರವಾದರು. ಭಾರತ ಅಂತಿಮವಾಗಿ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 184 ರನ್ ಗಳಿಸಿತು.

185 ರನ್ ಗುರಿ ಪಡೆದು ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾದೇಶ ಅತ್ಯುತ್ತಮ ಆರಂಭ ಕಂಡಿತು. ಬಾಂಗ್ಲಾ ಬ್ಯಾಟರ್‌‌ ಲಿಟನ್ ದಾಸ್ ಭಾರತದ ಬೌಲರ್‌‌ಗಳ ಬೆವರಿಳಿಸಿದರು. 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು ಮಳೆ ಬಂದು ಸ್ವಲ್ಪ ಹೊತ್ತು ಪಂದ್ಯ ನಿಲ್ಲುವ ಹೊತ್ತಿಗೆ ತಂಡದ ಮೊತ್ತವನ್ನು 7 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 66 ರನ್‌‌ಗಳಿಗೆ ಏರಿಸಿದ್ದರು.

ಮಳೆ ನಿಂತ ನಂತರ ಡಕ್ವರ್ತ್ ಲೂಯಿಸ್ ನಿಯಮದಂತೆ 16 ಓವರ್‌‌ಗಳಲ್ಲಿ 151 ರನ್ ಗಳಿಸುವ ಹೊಸ ಗುರಿ ನೀಡಲಾಯಿತು. ಆದರೆ ಆನಂತರ ಬಾಂಗ್ಲಾದೇಶದ ಬ್ಯಾಟ್ಸ್‌ಮನ್‌‌ಗಳು ಒಬ್ಬರ ನಂತರ ಒಬ್ಬರು ಪೆವಿಲಿಯನ್ ಸೇರಿದರು. ಪಂದ್ಯ ಕೊನೆಯವರೆಗೂ ಸಾಗಿತು.

ಛಲಬಿಡೆದೆ ಆಡಿದ ಬಾಂಗ್ಲಾದ ಸೋಹಾನ್ ಬೌಂಡರಿ ಮೇಲೆ ಬೌಂಡರಿ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಆಗಲಿಲ್ಲ. ಕೊನೆಯ ಓವರ್‌ನಲ್ಲಿ ಗೆಲುವಿಗೆ 21 ರನ್ ಗಳಿಸಬೇಕಿತ್ತು. ಆದರೆ ಸಾಧ್ಯವಾಗಲಿಲ್ಲ.

ಆ ಮೂಲಕ ಭಾರತದ ಸೆಮಿಫೈನಲ್ ಹಾದಿ ಸುಲಭವಾಗಿದೆ. 04 ಪಂದ್ಯಗಳಲ್ಲಿ 03 ಗೆಲುವು ಮತ್ತು ಒಂದು ಸೋಲಿನೊಂದಿಗೆ 06 ಅಂಕ ಪಡೆದಿದೆ. ಕೊನೆಯ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಗೆದ್ದಲ್ಲಿ ಸುಲಭವಾಗಿ ಸೆಮಿಫೈನಲ್ ತಲುಪಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...