Homeಫ್ಯಾಕ್ಟ್‌ಚೆಕ್Fact Check: ತೆಲಂಗಾಣದಲ್ಲಿ ಐಸ್‌ಕ್ರೀಂಗೆ ವೀರ್ಯ ಬೆರೆಸಿದ್ದಾನೆ ಎನ್ನಲಾದ ಆರೋಪಿ ಮುಸ್ಲಿಂ ಅಲ್ಲ

Fact Check: ತೆಲಂಗಾಣದಲ್ಲಿ ಐಸ್‌ಕ್ರೀಂಗೆ ವೀರ್ಯ ಬೆರೆಸಿದ್ದಾನೆ ಎನ್ನಲಾದ ಆರೋಪಿ ಮುಸ್ಲಿಂ ಅಲ್ಲ

- Advertisement -
- Advertisement -

ಹಸ್ತ ಮೈಥುನ ಮಾಡಿ ವೀರ್ಯವನ್ನು ಐಸ್‌ಕ್ರೀಂಗೆ ಬೆರೆಸಿದ ಆರೋಪದ ಮೇಲೆ ತೆಲಂಗಾಣದ ವಾರಂಗಲ್‌ನ ನೆಕ್ಕೊಂಡ ಎಂಬಲ್ಲಿ ರಾಜಸ್ಥಾನ ಮೂಲದ ವ್ಯಾಪಾರಿಯನ್ನು ಇತ್ತೀಚೆಗೆ ಬಂಧಿಸಲಾಗಿದೆ.

ಸಾಮಾನ್ಯವಾಗಿ ಇತರ ಪ್ರಕರಣಗಳಲ್ಲಿ ಆರೋಪಿಸುವಂತೆ ಈ ಪ್ರಕರಣದಲ್ಲೂ ಬಂಧಿತ ಆರೋಪಿ ಮುಸ್ಲಿಂ ಸಮುದಾಯದವನು ಎಂಬರ್ಥದಲ್ಲಿ ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗ್ತಿದೆ.

ಫೋಸ್ಟ್ ಲಿಂಕ್ ಇಲ್ಲಿದೆ 

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಸಂದೇಶದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ಮಾಡಿದೆ.

ಇದಕ್ಕಾಗಿ ನಾವು ಪ್ರಕರಣದ ಕುರಿತು ಪತ್ರಿಕೆಗಳಲ್ಲಿ ಬಂದಿರುವ ವರದಿಗಳನ್ನು ಗಮನಿಸಿದ್ದೇವೆ. ಮಾರ್ಚ್ 20ರಂದು “Caught on camera: Hawker ‘masturbates’ into ice cream in Telangana, arrested” ಎಂಬ ಶೀರ್ಷಿಕೆಯಲ್ಲಿ ಇಂಡಿಯಾ ಟುಡೇ ಪ್ರಕಟಿಸಿದ ವರದಿಯಲ್ಲಿ ಆರೋಪಿಯ ಹೆಸರನ್ನು ‘ಕಲುರಾಮ್ ಕುರ್ಬಿಯಾ’ ಎಂದು ಉಲ್ಲೇಖಿಸಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಮಾರ್ಚ್ 20ರಂದು “Telangana Ice Cream Vendor Held After Video of Masturbating, Mixing Semen in ‘Faluda’ Goes Viral” ಎಂಬ ಶೀರ್ಷಿಕೆಯಲ್ಲಿ ನ್ಯೂಸ್‌ 18 ಇಂಗ್ಲಿಷ್ ಪ್ರಕಟಿಸಿದ ಸುದ್ದಿಯಲ್ಲೂ ಆರೋಪಿಯ ಹೆಸರು ‘ಕಲುರಾಮ್ ಕುರ್ಬಿಯಾ’ ರಾಜಸ್ಥಾನ ಮೂಲದವನು ಎಂದು ಉಲ್ಲೇಖಿಸಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಆರೋಪಿಯ ವಿರುದ್ದ ವಾರಂಗಲ್ ಜಿಲ್ಲೆ ನೆಕ್ಕೊಂಡ ಪೊಲೀಸ್ ಠಾಣೆಯಲ್ಲಿ ಮಾರ್ಚ್ 19,2024ರಂದು ದಾಖಲಾದ ಎಫ್‌ಐಆರ್ ಪ್ರತಿ ನಮಗೆ ಲಭ್ಯವಾಗಿದ್ದು, ಅದರಲ್ಲೂ ‘ಕಲುರಾಮ್ ಕುರ್ಬಿಯಾ’ ಎಂದು ಸ್ಪಷ್ಟವಾಗಿ ಬರೆಯಲಾಗಿದೆ.

ಮೇಲಿನ ಎಲ್ಲಾ ಮೂಲಗಳ ಪ್ರಕಾರ ಆರೋಪಿ ಮುಸ್ಲಿಂ ಅಲ್ಲ ಎಂಬುವುದು ಖಚಿತವಾಗಿದೆ.

ಸತ್ಯಾಸತ್ಯತೆ ಪರಿಶೀಲನೆಯ ಮೂಲಕ ಆರೋಪಿ ಮುಸ್ಲಿಂ ಅಲ್ಲ ಹಿಂದೂ ಎಂದು ಬಿಂಬಿಸುವುದು ನಮ್ಮ ಉದ್ದೇಶವಲ್ಲ. ತಪ್ಪು ಯಾರೂ ಮಾಡಿದರೂ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮವಾಗಲಿ. ಆದರೆ, ಯಾವುದೇ ಪುರಾವೆಗಳಿಲ್ಲದೆ ಒಂದು ಸಮುದಾಯದ ವಿರುದ್ಧ ದ್ವೇಷಪೂರಿತ ಸುಳ್ಳು ಸಂದೇಶ ಹರಡುವುದು. ಪ್ರಕರಣಕ್ಕೆ ಕೋಮು ಬಣ್ಣ ಬಳಿಯುವುದನ್ನು ತಪ್ಪಿಸುವುದು ನಮ್ಮ ಉದ್ದೇಶವಾಗಿದೆ.

ಇದನ್ನೂ ಓದಿ : Fact Check: ಕೇರಳದ ಕಾಂಗ್ರೆಸ್ ಅಭ್ಯರ್ಥಿ ಪಾಕಿಸ್ತಾನದ ಧ್ವಜಗಳೊಂದಿಗೆ ಚುನಾವಣಾ ಪ್ರಚಾರ ಮಾಡಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...