Homeಸಿನಿಮಾಕ್ರೀಡೆಐಸಿಸಿ ಟಿ20 ವಿಶ್ವಕಪ್: ಭಾರತ ಸೆಮಿಫೈನಲ್ ತಲುಪಲು ಈ ಎರಡು ಪಂದ್ಯ ಬಹಳ ಮುಖ್ಯ

ಐಸಿಸಿ ಟಿ20 ವಿಶ್ವಕಪ್: ಭಾರತ ಸೆಮಿಫೈನಲ್ ತಲುಪಲು ಈ ಎರಡು ಪಂದ್ಯ ಬಹಳ ಮುಖ್ಯ

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡಗಳಲ್ಲಿ ಒಂದಾಗಿದ್ದ ಭಾರತ ತಂಡವು ತನ್ನ ಆರಂಭಿಕ ಎರಡು ಪಂದ್ಯಗಳಲ್ಲಿ ಸೋತು, ಇನ್ನೆರೆಡು ಪಂದ್ಯಗಳಲ್ಲಿ ಗೆದ್ದಿದೆ. ಗ್ರೂಪ್ ಎರಡರಲ್ಲಿ ಪಾಕಿಸ್ತಾನವು 4ಕ್ಕೆ 4 ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ತಲುಪಿದೆ. ಈ ಗ್ರೂಪ್‌ನಲ್ಲಿ ಇನ್ನೊಂದು ತಂಡಕ್ಕೆ ಮಾತ್ರ ಸೆಮಿಫೈನಲ್ ತಲುಪುವ ಅವಕಾಶವಿದ್ದು ಅದಕ್ಕಾಗಿ ಆಫ್ಘಾನಿಸ್ತಾನ, ನ್ಯೂಜಿಲೆಂಡ್, ಭಾರತ ತಂಡಗಳು ತೀವ್ರ ಪೈಪೋಟಿ ನಡೆಸುತ್ತಿವೆ. ಭಾರತ ಟಿ20 ವಿಶ್ವಕಪ್ ಸೆಮಿಫೈನಲ್ ತಲುಪುವುದು ಕಷ್ಟಸಾಧ್ಯವಿದೆ. ಅದು ಹೇಗೆ ಎಂಬ ವಿವರ ಇಲ್ಲಿದೆ.

ಸದ್ಯದ ಗ್ರೂಪ್ 2 ರ ಪಾಯಿಂಟ್ಸ್ ಪಟ್ಟಿಯಲ್ಲಿ ಸತತ ನಾಲ್ಕು ಗೆಲುವುಗಳೊಂದಿಗೆ 8 ಪಾಯಿಂಟ್ ಪಡೆದು ಪಾಕಿಸ್ತಾನ ಅಗ್ರಸ್ಥಾನದಲ್ಲಿದೆ ಮತ್ತು ಸೆಮಿಫೈನಲ್ ತಲುಪಿದೆ. ನ್ಯೂಜಿಲೆಂಡ್ ತಂಡವು 4 ಪಂದ್ಯಗಳಲ್ಲಿ 3 ನ್ನು ಜಯಿಸಿ +1.277 ನೆಟ್‌ ರನ್‌ ರೇಟ್ ಪಡೆದು ಎರಡನೇ ಸ್ಥಾನದಲ್ಲಿದೆ. ಭಾರತ ಎರಡು ಪಂದ್ಯ ಗೆದ್ದು 4 ಪಾಯಿಂಟ್ ಮತ್ತು ಉತ್ತಮ ನೆಟ್ ರನ್‌ ರೇಟ್ (+1.619) ಹೊಂದಿದೆ. ಆಫ್ಘಾನಿಸ್ತಾನವು 4 ಪಂದ್ಯಗಳಲ್ಲಿ 2 ಅನ್ನು ಗೆದ್ದು 4 ಪಾಯಿಂಟ್ ಮತ್ತು ಉತ್ತಮ ನೆಟ್‌ ರನ್‌ರೇಟ್‌ನೊಂದಿಗೆ (+1.481) ನಾಲ್ಕನೇ ಸ್ಥಾನದಲ್ಲಿದೆ.

ಭಾರತ ಹೇಗೆ ಸೆಮಿಫೈನಲ್ ತಲುಪಬಹುದು?

ನ್ಯೂಜಿಲೆಂಡ್ ಮತ್ತು ಆಫ್ಘಾನಿಸ್ತಾನದ ಕೊನೆಯ ಪಂದ್ಯ ನವೆಂಬರ್ 7 ರಂದು ನಡೆಯಲಿದೆ. ಅಂದು ನ್ಯೂಜಿಲೆಂಡ್ ಗೆದ್ದರೆ ಭಾರತದ ಕನಸು ನುಚ್ಚು ನೂರಾಗುತ್ತದೆ. ಏಕೆಂದರೆ 8 ಪಾಯಿಂಟ್ ಪಡೆದು ಅದು ಸೆಮಿಫೈನಲ್ ಪ್ರವೇಶಿಸುತ್ತದೆ. ಒಂದು ವೇಳೆ ನ್ಯೂಜಿಲೆಂಡ್ ಕಡಿಮೆ ಅಂತರದಲ್ಲಿ ಸೋತರೆ, ಭಾರತಕ್ಕೆ ಅವಕಾಶ ತೆರೆದುಕೊಳ್ಳುತ್ತದೆ. ಏಕೆಂದರೆ ಆಗ ನ್ಯೂಜಿಲೆಂಡ್ 6 ಪಾಯಿಂಟ್, ಆಫ್ಘಾನಿಸ್ತಾನ 6 ಪಾಯಿಂಟ್ ಪಡೆದಿರುತ್ತವೆ (ನೆಟ್ ರನ್ ರೇಟ್ +1.481). ಅದೇ ರೀತಿಯಾಗಿ ಭಾರತವು ನಮೀಬಿಯಾ ಎದುರಿನ ಕೊನೆಯ ಪಂದ್ಯದಲ್ಲಿ ಭಾರೀ ಅಂತರದಿಂದ ಗೆದ್ದರೆ ಅದು ಸಹ 6 ಪಾಯಿಂಟ್ ಗಳಿಸುತ್ತದೆ. ಭಾರತದ ನೆಟ್‌ ರನ್ ರೇಟ್ ಮತ್ತಷ್ಟು ಹೆಚ್ಚಾಗುವುದರಿಂದ ಸೆಮಿಫೈನಲ್ ತಲುಪುವ ಅವಕಾಶವಿದೆ.

ಆದರೆ ಇಷ್ಟೆಲ್ಲಾ ಆಗಬೇಕಾದರೆ ಎರಡು ಹೆಜ್ಜೆ ಭಾರತಕ್ಕೆ ಪ್ರಮುಖವಾಗುತ್ತವೆ. 1. ನ್ಯೂಜಿಲೆಂಡ್ ನವೆಂಬರ್ 7 ರಂದು ಆಫ್ಘಾನಿಸ್ತಾನ ಎದುರು ಕಡಿಮೆ ಅಂತರದಿಂದ ಸೋಲಲೇಬೇಕು ಮತ್ತು ಭಾರತವು ನಮೀಬಿಯಾ ಎದುರು ಭಾರೀ ಅಂತರದಿಂದ ಗೆಲ್ಲಲೇಬೇಕು. ಕ್ರಿಕೆಟ್ ನಲ್ಲಿ ಎಂತಹ ಪವಾಡಗಳು ಸಹ ನಡೆಯಬಹುದು. ಅದು ಸಾಧ್ಯವೇ ಎಂಬುದು ನವೆಂಬರ್ 7 ರಂದು ತೀರ್ಮಾನವಾಗಲಿದೆ. ಅಲ್ಲಿಯವರೆಗೂ ಕಾಯೋಣ.

ಭಾರತಕ್ಕೆ ಭರ್ಜರಿ ಜಯ

ತನ್ನ ನಾಲ್ಕನೇ ಪಂದ್ಯದಲ್ಲಿ ಭಾರತ ಸ್ಕಾಟ್ಲೆಂಡ್ ಎದುರು ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ 85 ರನ್‌ಗಳಿಗೆ ಆಲೌಟ್‌ ಆಯಿತು. ಭಾರತದ ಪರ ಮೊಹಮ್ಮದ್ ಶಮಿ ಮತ್ತು ರವೀಂದ್ರ ಜಡೇಜಾ ತಲಾ ಮೂರು ವಿಕೆಟ್ ಪಡೆದು ಮಾರಕ ದಾಳಿ ನಡೆಸಿದರೆ, ಜಸ್ಪ್ರಿತ್ ಬೂಮ್ರ ಎರಡು ವಿಕೆಟ್ ಪಡೆದು ಮಿಂಚಿದರು. ನಂತರ ಬ್ಯಾಟ್ ಮಾಡಿದ ಭಾರತ ಕೇವಲ 39 ಎಸೆತಗಳಲ್ಲಿ 89 ರನ್ ಗಳಿಸಿ 8 ವಿಕೆಟ್‌ಗಳ ಬೃಹತ್ ಗೆಲುವು ದಾಖಲಿಸಿತು. ಆರಂಭಿಕ ಆಟಗಾರರಾದ ಕೆ.ಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಆಕ್ರಮಣಕಾರಿ ಆಟವಾಡಿದರು.

ಕೆ.ಎಲ್ ರಾಹುಲ್ ಕೇವಲ 19 ಎಸೆತಗಳಲ್ಲಿ 50 ರನ್ ಚಚ್ಚಿದರೆ, ರೋಹಿತ್ ಶರ್ಮಾ 16 ಎಸೆತಗಳಲ್ಲಿ 30 ರನ್ ಬಾರಿಸಿದರು. ಇವರಿಬ್ಬರೂ ಔಟ್ ಆದ ನಂತರ ವಿರಾಟ್ ಕೊಹ್ಲಿ ಎರಡು ರನ್ ಗಳಿಸಿದರು. ಕೊನೆಗೆ ಬಂದ ಸೂರ್ಯಕುಮಾರ್ ಯಾದವ್ ಗೆಲುವಿಗೆ 2 ರನ್ ಬೇಕಿದ್ದಾಗ ಭರ್ಜರಿ ಸಿಕ್ಸರ್ ಎತ್ತಿ ಗೆಲುವಿಗೆ ಸಹಕರಿಸಿದರು.

 


ಇದನ್ನೂ ಓದಿ: ‘ಇಡೀ ಭಾರತ ನಿನ್ನ ಹಿಂದೆ ಇದೆ’: ಸ್ಕಾಟ್ಲೆಂಡ್ ವಿಕೆಟ್‌ಕೀಪರ್‌ ಹೇಳಿಕೆ ಸ್ಟಂಪ್ ಮೈಕ್‌ನಲ್ಲಿ ಸೆರೆ: ವಿಡಿಯೊ ನೋಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...