HomeUncategorizedದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿಎಂ‌ ಸಿದ್ದರಾಮಯ್ಯ ಕರೆ  

ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿಎಂ‌ ಸಿದ್ದರಾಮಯ್ಯ ಕರೆ  

- Advertisement -
- Advertisement -

ಬೆಂಗಳೂರು.ನ. 26: ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. 

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಸಂವಿಧಾನ ದಿನಾಚರಣೆ – 2025” ಅನ್ನು ಉದ್ಘಾಟಿಸಿ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬರಿಗೆ ನಮಿಸಿ ಮಾತನಾಡಿದ ಸಿದ್ದರಾಮಯ್ಯ ‘ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ  ಜಾರಿಯಲ್ಲಿತ್ತು. ಮನುಸ್ಮೃತಿಯಲ್ಲಿದ್ದ ಮನುಷ್ಯ ವಿರೋಧಿ, ಸಮಾನತೆ ವಿರೋಧಿ ನಿಯಮಗಳಿಗೆ ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಅವಕಾಶ ಇಲ್ಲದಂತಾಯಿತು. ಅದಕ್ಕೇ ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸುತ್ತಾರೆ ಎಂದು ಹೇಳಿದರು. 

ಸಮ ಸಮಾಜ ನಿರ್ಮಾಣ, ಅಸಮಾನತೆ ನಿವಾರಣೆ ನಮ್ಮ ಸಂವಿಧಾನ ಮತ್ತು ಅಂಬೇಡ್ಕರ್ ಅವರ ಆಶಯವಾಗಿತ್ತು. We the people of INDIA ಎನ್ನುವುದೇ ನಮ್ಮ ಸಂವಿಧಾನದ ಮೂಲ ಮಂತ್ರ. ಈ ದೇಶದ ಜನತೆಗೆ ಎಂಥಾ ಸಂವಿಧಾನ ಬೇಕು ಎನ್ನುವ ಬಗ್ಗೆ ಒಂದು ವರ್ಷ ಕಾಲ ಸಂವಿಧಾನ ಸಭೆಯಲ್ಲಿ ಸಮಗ್ರ ಚರ್ಚೆ ಬಳಿಕ ಈ ಸಂವಿಧಾನವನ್ನು ಅಂಗೀಕರಿಸಲಾಗಿದೆ ಎಂದರು. 

ಫೆಡರಲ್, ಯೂನಿಟರಿ, ರಿಟರ್ನ್, ಅನ್ ರಿಟರ್ನ್ ಸಂವಿಧಾನಗಳು ವಿಶ್ವದಲ್ಲಿವೆ. ನಮ್ಮದು ರಿಟರ್ನ್ (ಲಿಖಿತ) ಸಂವಿಧಾನ. ನಮ್ಮ ದೇಶದಲ್ಲಿರುವಷ್ಟು ಜಾತಿ, ಧರ್ಮಗಳು ಬೇರೆ ಯಾವ ದೇಶದಲ್ಲೂ ಇಲ್ಲ. ಹೀಗಾಗಿ ಈ ನೆಲಕ್ಕೆ ಒಪ್ಪಿಗೆಯಾಗುವ ಸಂವಿಧಾನವನ್ನು ಅಂಬೇಡ್ಕರ್ ಕೊಟ್ಟರು.

ಮನುವಾದಿಗಳು ಸಂವಿಧಾನ ಅಂಬೇಡ್ಕರ್ ಅವರಿಂದ ಆಗಿಲ್ಲ ಎಂದು ವಾದಿಸುತ್ತಾರೆ. ಆದರೆ ಅಂಬೇಡ್ಕರ್ ಅವರೇ ಸಂವಿಧಾನ ಶಿಲ್ಪಿ ಎನ್ನುವುದನ್ನು ಮರೆಯಬಾರದು. ಅಂಬೇಡ್ಕರ್ ಅವರಿಗೆ ಈ ದೇಶದ ಜಾತಿ ವ್ಯವಸ್ಥೆ ಮತ್ತು ಅಪಾಯಗಳು ಅಂಬೇಡ್ಕರ್ ಅವರಿಗೆ ಅರ್ಥ ಆಗಿತ್ತು. ಅದಕ್ಕೇ ನಮ್ಮ ಸಂವಿಧಾನದಲ್ಲಿ ಮೀಸಲಾತಿಯನ್ನು ಸೇರಿಸಿದರು. ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯ. ಆದರೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಆದರೂ ಸಂವಿಧಾನದ ಆಶಯ ಈಡೇರಿಲ್ಲ ಎಂದು ವಿಷಾದ ವ್ಯಕ್ತ ಪಡಿಸಿದರು. 

ಇದೇ ವೇಳೆ ಬಸವಣ್ಣನವರಾದಿಯಾಗಿ ಎಲ್ಲಾ ಮಹಾತ್ಮರೂ ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರೂ ಪಟ್ಟ ಭದ್ರರು ಜಾತಿ ಹೋಗಲು ಬಿಡುತ್ತಿಲ್ಲ ಎಂದರು.

ಕೆಳ ಜಾತಿಯ ಶೂದ್ರ ವರ್ಗದವರಿಗೆ ಆರ್ಥಿಕ ಶಕ್ತಿ ಬಂದಾಗ ಮಾತ್ರ ಜಾತಿ ದುರ್ಬಲವಾಗುತ್ತದೆ. ಸಂವಿಧಾನ ಸಭೆಯಲ್ಲಿ ಅಂಬೇಡ್ಕರ್ ಮಾಡಿದ ಕೊನೆಯ ಭಾಷಣವನ್ನು, ಈ ಭಾಷಣದ ಎಚ್ಚರಿಕೆಯ ಮಾತುಗಳನ್ನು ಪ್ರತಿಯೊಬ್ಬರೂ ಮನವರಿಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು. 

ಅಸಮಾನತೆ ಇರುವ ದೇಶದಲ್ಲಿ ಸಮಾನತೆ ಸುಲಭವಾಗಿ ಬರುವುದಿಲ್ಲ. ದಲಿತರನ್ನು, ಶೂದ್ರರನ್ನು ಹಿಂದುಳಿದವರನ್ನು, ಮುಸ್ಲೀಮರನ್ನು, ಅಲ್ಪಸಂಖ್ಯಾತರನ್ನು ದ್ವೇಷಿಸಿ ಎಂದು ನಮ್ಮ ಧರ್ಮವೂ ಹೇಳುವುದಿಲ್ಲ. ಯಾವ ಧರ್ಮವೂ ಹೇಳುವುದಿಲ್ಲ.

ಸಂವಿಧಾನ ಅಂಗೀಕಾರಕ್ಕೆ 285 ಮಂದಿ ಸದಸ್ಯರಲ್ಲಿ 284 ಮಂದಿ ಪೂರ್ತಿ ಸಹಿ ಹಾಕಿದರು. ಒಬ್ಬರು ಮಾತ್ರ ಹಾಕಲಿಲ್ಲ. ಹೀಗಾಗಿ ಬಹುತೇಕ ಎಲ್ಲರಿಗೂ ಒಪ್ಪಿಗೆ ಆಗುವಂತಹಾ ಸಂವಿಧಾನವನ್ನು ಅಂಬೇಡ್ಕರ್ ರಚಿಸಿದರು. ಸಂವಿಧಾನದ ಸಮಾನತೆಯ ಆಶಯವನ್ನು ಈಡೇರಿಸುವ ಸಲುವಾಗಿಯೇ ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಹಲವು ಭಾಗ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿದೆ ಎಂದಿದ್ದಾರೆ. 

ತುತ್ತು ಅನ್ನಕ್ಕಾಗಿ ಯಾರೂ ಯಾರ ಮನೆ ಮುಂದೆಯೂ ನಿಲ್ಲಬಾರದು ಎನ್ನುವ ಆಶಯದಿಂದ ಅನ್ನಭಾಗ್ಯ ತಂದೆ, ಯಾರ ಮನೆ ಮಕ್ಕಳೂ ಬರಿಗಾಗಲ್ಲಿ ಶಾಲೆಗೆ ಹೋಗಬಾರದು ಎನ್ನುವ ಕಾರಣದಿಂದ ಶೂ ಭಾಗ್ಯ ತಂದೆ. ಎಲ್ಲಾ ಭಾಗ್ಯಗಳ ಹಿಂದೆ ಹಾಗೂ ಈಗ ಜಾರಿ ಮಾಡಿರುವ ಐದೂ ಗ್ಯಾರಂಟಿಗಳ ಹಿಂದೆ ಅಸಮಾನತೆ ನಿವಾರಿಸುವ ಮತ್ತು ಸರ್ವರಿಗೂ ಆರ್ಥಿಕ ಶಕ್ತಿ ಬರಲಿ ಎನ್ನುವ ಆಶಯ ಇದೆ ಎಂದರು. 

ಈ ವೇಳೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಎಂ.ಸಿ.ಸುಧಾಕರ್, ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...