Homeಮುಖಪುಟಇದ್ರೀಸ್ ಪಾಶ ಹತ್ಯೆ ಪ್ರಕರಣ: ಪುನೀತ್ ಕೆರೆಹಳ್ಳಿ ತಲೆಮರೆಸಿಕೊಂಡಿದ್ದಾನೆ - ರಾಮನಗರ ಎಸ್‌ಪಿ

ಇದ್ರೀಸ್ ಪಾಶ ಹತ್ಯೆ ಪ್ರಕರಣ: ಪುನೀತ್ ಕೆರೆಹಳ್ಳಿ ತಲೆಮರೆಸಿಕೊಂಡಿದ್ದಾನೆ – ರಾಮನಗರ ಎಸ್‌ಪಿ

- Advertisement -
- Advertisement -

ಇದ್ರೀಸ್‌ ಸಾವು ಪ್ರಕರಣದ ಪ್ರಮುಖ ಆರೋಪಿ ಪುನೀತ್‌ ಕೆರೆಹಳ್ಳಿ ತಲೆಮರೆಸಿಕೊಂಡಿದ್ದು, ಶೋಧಕ್ಕಾಗಿ ನಾಲ್ಕುಕ ತಂಡಗಳನ್ನು ರಚಿಸಿದ್ದೇವೆ ಎಂದು ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕಾರ್ತಿಕ್‌ ರೆಡ್ಡಿ ಹೇಳಿದ್ದಾರೆ.

ಸಾತನೂರು ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್‌ಗಳು ದಾಖಲಾಗಿವೆ. ಮೊದಲಿಗೆ ಅಕ್ರಮ ಗೋವು ಸಾಗಣೆಗೆ ಸಂಬಂಧಿಸಿದಂತೆ ಪುನೀತ್‌ ಕೆರೆಹಳ್ಳಿ ದೂರು ನೀಡಿದ್ದರು. ಆನಂತರ ಡ್ರೈವರ್ ಸಯ್ಯದ್ ಜಮೀರ್ ತಮನ್ನು ಅಡ್ಡಗಟ್ಟಿ ಹಿಂಸೆ ನೀಡಿದ್ದಾರೆ ಎಂದು ದೂರು ನೀಡಿದ್ದರು. ಶನಿವಾರ ಕೊಲೆಯಾದ ಇದ್ರೀಸ್ ಸಹೋದರ ಯೂನುಸ್‌ ಪಾಷ ದೂರು ನೀಡಿದ್ದಾರೆ. ಮೂರು ದೂರನ್ನು ಆಧರಿಸಿ ತನಿಖೆ ನಡೆಸುತ್ತಿದ್ದೇವೆ ಎಂದಿದ್ದಾರೆ.

“ಇದ್ರೀಸ್‌ ಪಾಷ ಸಾವಿಗೆ ನಿಖರ ಕಾರಣ ಏನೆಂಬುದು ಮರಣೋತ್ತರ ಪರೀಕ್ಷೆ, ಎಫ್‌ಎಸ್‌ಎಲ್ ವರದಿ ಬಂದ ಬಳಿಕವಷ್ಟೇ ಗೊತ್ತಾಗುತ್ತದೆ. ಪ್ರಕರಣದ ತನಿಖೆ ವಿಚಾರದಲ್ಲಿ ಪೊಲೀಸರಿಗೆ ಯಾವುದೇ ರಾಜಕೀಯ ಒತ್ತಡವಿಲ್ಲ. ಕನಕಪುರದ ವೈದ್ಯರ ತಂಡವು ಇದ್ರೀಸ್ ಅವರ ಮರಣೋತ್ತರ ಪರೀಕ್ಷೆ ನಡೆಸಿದೆ. ಎಫ್‌ಎಸ್‌ಎಲ್‌ ವರದಿಯನ್ನೂ ಪಡೆಯಲಾಗುತ್ತದೆ. ಸದ್ಯ ತನಿಖೆ ಪ್ರಗತಿಯಲ್ಲಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತೇವೆ” ಎಂದು ತಿಳಿಸಿದ್ದಾರೆ.

ಪುನೀತ್ ಕೆರೆಹಳ್ಳಿ ಫೇಸ್‌ಬುಕ್‌ ಲೈವ್ ಬಂದಿದ್ದಾನೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಫೇಸ್‌ಬುಕ್‌ನಲ್ಲಿ ಬಂದಿರಬಹುದು. ಆದರೆ ಈಗ ತಲೆ ಮರೆಸಿಕೊಂಡಿದ್ದಾರೆ. ಪುನೀತ್‌ ಕೆರೆಹಳ್ಳಿ ಹಾಗೂ ಸಹಚರರ ಬಂಧನಕ್ಕೆ ಈಗಾಗಲೇ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಆರೋಪಿಯು ಇನ್ನೂ ಪತ್ತೆಯಾಗಿಲ್ಲ. ಆತನಿಗಾಗಿ ಶೋಧಕಾರ್ಯ ನಡೆಸಿದ್ದೇವೆ” ಎಂದಿದ್ದಾರೆ.

ಇನ್ನೊಂದೆಡೆ ನಾನು ತಲೆ ಮರೆಸಿಕೊಂಡಿಲ್ಲ. ಮಾಹಿತಿ ಬಂದರೆ ನಾನೇ ಖುದ್ದು ಪೊಲೀಸರ ಮುಂದೆ ಹಾಜರಾಗುತ್ತೇನೆ ಎಂದು ಪುನೀತ್ ಕೆರೆಹಳ್ಳಿ ವಿಡಿಯೋ ಒಂದರಲ್ಲಿ ಹೇಳಿದ್ದಾನೆ.

ಫೇಸ್‌ಬುಕ್‌ನಲ್ಲಿ ವಿಡಿಯೋ ಅಪ್‌ಲೋಡ್‌ ಮಾಡಿರುವ ಪುನೀತ್‌ ಕೆರೆಹಳ್ಳಿ, ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದ್ದಾನೆ. “ಇದ್ರೀಸ್‌ ಪಾಷ ಸಾವಿನ ವಿಚಾರದಲ್ಲಿ ನನ್ನ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದರೆ ವಿಚಾರಣೆ ಎದುರಿಸುತ್ತೇನೆ. ನನಗೆ ನ್ಯಾಯ ಬೇಕು. ನಾನು ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸುತ್ತೇನೆ” ಎಂದು ಹೇಳಿದ್ದಾನೆ.

“ನಾನು ಕೆಲವು ದಿನಗಳಿಂದ ದೇವಸ್ಥಾನಗಳಿಗೆ ಭೇಟಿ ನಿಡುತ್ತಿದ್ದೆ. ಆ ಕಾರಣದಿಂದ ನನ್ನ ಮೊಬೈಲ್ ಸ್ವಿಚ್‌ ಆಫ್‌ ಆಗಿತ್ತು. ಈಗ ಮೊಬೈಲ್‌ ಆನ್‌ ಮಾಡಿದ ಬಳಿಕ ರಾಜಕೀಯ ಮುಖಂಡರು ನೀಡಿರುವ ಹೇಳಿಕೆಗಳು, ಅನೇಕರೂ ಫೇಸ್‌ಬುಕ್‌, ಟ್ವೀಟರ್‌ನಲ್ಲಿ ಮಾಡಿರುವ ಪೋಸ್ಟ್‌ಗಳನ್ನು ಗಮನಿಸಿ ಈ ಪ್ರತಿಕ್ರಿಯೆ ನೀಡುತ್ತಿದ್ದೇನೆ. ನಾನು ತಲೆ ಮರೆಸಿಕೊಂಡಿಲ್ಲ” ಎಂದು ಹೇಳಿದ್ದಾನೆ.

“ಶುಕ್ರವಾರ ಮಧ್ಯರಾತ್ರಿ 11.59 ರಿಂದ ನಾನು ಘಟನೆಯನ್ನು ಫೇಸ್‌ಬುಕ್‌ ಲೈವ್‌ ಮಾಡಿದ್ದೇನೆ. ಶನಿವಾರ ಬೆಳಗ್ಗೆ 5ಕ್ಕೆ ಮಠಕ್ಕೆ ಹಸುಗಳನ್ನು ಬಿಡುವವರೆಗೂ ನಾನು ಪೊಲೀಸರ ಜೊತೆಯಲ್ಲೇ ಇದ್ದೆ. ನಾವು ಯಾರನ್ನೂ ಹತ್ಯೆ ಮಾಡಿಲ್ಲ. ಮರಣೋತ್ತರ ಪರೀಕ್ಷೆ ವರದಿಯೇ ಇದಕ್ಕೆ ಉತ್ತರ ನೀಡಲಿದೆ” ಎಂದು ಸಮರ್ಥಿಸಿಕೊಂಡಿದ್ದಾನೆ.

“ನಾನು ಯಾರಿಗೂ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ. ದುಡ್ಡು ಮಾಡಲು ಈ ಹೋರಾಟಕ್ಕೆ ಬಂದಿಲ್ಲ. ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಯಾರೇ ನನ್ನ ವಿರುದ್ಧ ನಿಂತರೂ ಹೋರಾಟ ಬಿಡುವುದಿಲ್ಲ” ಎಂದು ಹೇಳಿಕೊಂಡಿದ್ದಾನೆ.

ಇದನ್ನೂ ಓದಿ; ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರನ್ನು ಬಂಧಿಸಿ: ಹೆಚ್ಚಿದ ಒತ್ತಡ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

0
ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿ ಅತ್ಯಂತ ಕಟ್ಟದಾಗಿದ್ದು, ನೆರೆಯ ಪಾಕಿಸ್ತಾನ, ಶ್ರೀಲಂಕಾ, ನೇಪಾಳಕ್ಕಿಂತಲೂ ಕಳಪೆಯಾಗಿದೆ. ಇದು ಪ್ರಜಾಪ್ರಭುತ್ವ ದೇಶಕ್ಕೆ ಯೋಗ್ಯವಾದ ಬೆಳವಣಿಗೆಯಲ್ಲ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಬಿಡುಗಡೆ ಮಾಡಿದ 2024ರ...