Homeಮುಖಪುಟಯಾರದೋ ಮನೆಯಲ್ಲಿ ಮಗು ಹುಟ್ಟಿದರೆ ಬಿಜೆಪಿ ಸಿಹಿ ಹಂಚಿಕೊಳ್ಳುತ್ತದೆ: ಕಾರ್ಪೋರೇಷನ್‌ ಚುನಾವಣಾ ಫಲಿತಾಂಶದ ಬಗ್ಗೆ ಕಾಂಗ್ರೆಸ್...

ಯಾರದೋ ಮನೆಯಲ್ಲಿ ಮಗು ಹುಟ್ಟಿದರೆ ಬಿಜೆಪಿ ಸಿಹಿ ಹಂಚಿಕೊಳ್ಳುತ್ತದೆ: ಕಾರ್ಪೋರೇಷನ್‌ ಚುನಾವಣಾ ಫಲಿತಾಂಶದ ಬಗ್ಗೆ ಕಾಂಗ್ರೆಸ್ ನಾಯಕ ಪ್ರತಿಕ್ರಿಯೆ

ಚುನಾವಣೆಯಲ್ಲಿ ಬಿಜೆಪಿ ಒಟ್ಟು ಏಳು ಕಾರ್ಪೋರೇಷನ್‌ಗಳನ್ನು ಕಳೆದುಕೊಂಡಿದೆ

- Advertisement -
- Advertisement -

ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು ಬುಧವಾರ ಮಧ್ಯಪ್ರದೇಶದ ಮುನ್ಸಿಪಲ್ ಚುನಾವಣೆಯ ಬಗ್ಗೆ ಬಿಜೆಪಿ ತರಾಟೆಗೆ ತೆಗೆದುಕೊಂಡಿದ್ದು, ಚುನಾವಣೆಯಲ್ಲಿ ಆಡಳಿತರೂಢ ಪಕ್ಷವು “ಪೊಲೀಸ್, ಆಡಳಿತ ಮತ್ತು ಹಣವನ್ನು ನಿರ್ಲಜ್ಜವಾಗಿ ಬಳಸಿದೆ” ಎಂದು ಆರೋಪಿಸಿದ್ದಾರೆ. “ಬಿಜೆಪಿ ಜನರನ್ನು ಖರೀದಿಸಲು ಪ್ರಯತ್ನಿಸಬಹುದು, ಆದರೆ ಮುಂದಿನ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ತಕ್ಕ ಪ್ರತ್ಯುತ್ತರ ನೀಡಲಾಗುವುದು” ಎಂದು ಅವರು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾವು ಐದು ಮುನ್ಸಿಪಲ್ ಕಾರ್ಪೊರೇಷನ್‌ಗಳನ್ನು ಗೆದ್ದಿದ್ದೇವೆ ಮತ್ತು ತಲಾ ಒಂದನ್ನು ಎಎಪಿ ಮತ್ತು ಪಕ್ಷೇತರರು ಗೆದ್ದಿದ್ದಾರೆ. ಇದರರ್ಥ ಬಿಜೆಪಿ ಏಳು ಕಾರ್ಪೋರೇಷನ್‌ಗಳನ್ನು ಕಳೆದುಕೊಂಡಿದೆ. ಇದನ್ನೂ ಅವರು ಆಚರಿಸುವುದಾದರೆ ನಮಗೆ ಏನೂ ಸಮಸ್ಯೆ ಇಲ್ಲ. ಇದು ಹೇಗಂದರೆ ಬೇರೊಬ್ಬರ ಮನೆಯಲ್ಲಿ ಮಗು ಜನಿಸಿದ್ದಕ್ಕೆ, ಬಿಜೆಪಿಯವರು ಸಿಹಿ ಹಂಚಲು ಪ್ರಾರಂಭಿಸಿದಂತೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

347 ನಗರ ಪಾಲಿಕೆಗಳಲ್ಲಿ 300 ಪಾಲಿಕೆಗಳನ್ನು ಪಕ್ಷವೂ ಗೆದ್ದಿದೆ ಎಂದು ಬಿಜೆಪಿ ಪ್ರತಿಪಾದಿಸಿದ್ದು, ‘ಈ ಸಾಧನೆಯು ಐತಿಹಾಸಿಕ’ ಎಂದು ಬಣ್ಣಿಸಿದೆ.

ಇದನ್ನೂ ಓದಿ: ಏಕನಾಥ್‌ ಶಿಂಧೆ ಥರದ ಸಾಕಷ್ಟು ಮಂದಿ ಟಿಆರ್‌‌ಎಸ್‌ನಲ್ಲಿದ್ದಾರೆ: ತೆಲಂಗಾಣ ಬಿಜೆಪಿ ಹೇಳಿಕೆ

ರಾಜ್ಯದ ಒಟ್ಟು 16 ಮೇಯರ್ ಹುದ್ದೆಗಳ ಪೈಕಿ ಬಿಜೆಪಿ ಒಂಬತ್ತು, ಕಾಂಗ್ರೆಸ್ ಐದು ಸ್ಥಾನಗಳನ್ನು ಗೆದ್ದುಕೊಂಡಿದ್ದು, ತಲಾ ಒಂದು ಸ್ಥಾನವನ್ನು ಎಎಪಿ ಮತ್ತು ಪಕ್ಷೇತರರು ಗೆದ್ದಿದ್ದಾರೆ. 2015ರಲ್ಲಿ ಬಿಜೆಪಿ ಎಲ್ಲಾ ಮೇಯರ್‌ ಹುದ್ದೆಗಳನ್ನು ಗೆದ್ದುಕೊಂಡಿತ್ತು.

ಅದರಲ್ಲೂ ಬಿಜೆಪಿ ಕಳೆದುಕೊಂಡಿರುವ ಮೇಯರ್ ಹುದ್ದೆಗಳಲ್ಲಿ ಒಂದು ಒಕ್ಕೂಟ ಸರ್ಕಾರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಭದ್ರಕೋಟೆಯಾದ ಮೊರೆನಾದಲ್ಲಿದ್ದರೆ, ಇನ್ನೊಂದು ಮಧ್ಯಪ್ರದೇಶದ ಬಿಜೆಪಿ ಅಧ್ಯಕ್ಷ, ಲೋಕಸಭಾ ಸಂಸದರಾದ ವಿಡಿ ಶರ್ಮಾ ಅವರ ಕಟ್ನಿಯದ್ದಾಗಿದೆ. ಮತ್ತೊಂದು ಬಿಜೆಪಿಯಿಂದ ಬಂಡಾಯ ಎದ್ದಿದ್ದ ಬಣ ಗೆದ್ದುಕೊಂಡಿದೆ. ಏತನ್ಮಧ್ಯೆ, ಕಾಂಗ್ರೆಸ್ ಶೂನ್ಯದಿಂದ ಐದಕ್ಕೆ ಏರಿದೆ ಮತ್ತು ಸಿಂಗ್ರೌಲಿಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಒಂದನ್ನು ಗೆದ್ದಿದೆ.

ರೇವಾ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಕಾಂಗ್ರೆಸ್‌ನ ಅಜಯ್ ಮಿಶ್ರಾ ಬಾಬಾ ಅವರು 10,301 ಮತಗಳಿಂದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಬೋಧ್ ವ್ಯಾಸ್ ಅವರನ್ನು ಸೋಲಿಸಿದ್ದಾರೆ. 1999 ರ ನಂತರ ಕಾಂಗ್ರೆಸ್ ಮೊದಲ ಬಾರಿಗೆ ರೇವಾದಲ್ಲಿ ಮೇಯರ್ ಸ್ಥಾನವನ್ನು ಗೆದ್ದಿದೆ.

ಇದನ್ನೂ ಓದಿ: ‘ಜುಮ್ಲಾಜೀವಿ’, ‘ಶಕುನಿ’, ‘ಸರ್ವಾಧಿಕಾರಿ’ ಅಸಂಸದೀಯ ಪದಗಳು!: ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ಸರ್ಕಾರ

ಮೊರೆನಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾರದ ಸೋಲಂಕಿ 14,631 ಮತಗಳಿಂದ ಮೇಯರ್ ಚುನಾವಣೆಯಲ್ಲಿ ಬಿಜೆಪಿಯ ಮೀನಾ ಮುಖೇಶ್ ಜಾತವ್ ಅವರನ್ನು ಸೋಲಿಸಿದ್ದಾರೆ. ಮೊರೆನಾ ಮುನ್ಸಿಪಲ್ ಕಾರ್ಪೊರೇಶನ್ ಮೊರೆನಾ ಲೋಕಸಭಾ ಸ್ಥಾನದ ಭಾಗವಾಗಿದೆ. ಇದನ್ನೂ ಒಕ್ಕೂಟ ಸರ್ಕಾರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪ್ರತಿನಿಧಿಸುತ್ತಾರೆ.

ದೇವಾಸ್‌ನಲ್ಲಿ ಬಿಜೆಪಿಯ ಗೀತಾ ಅಗರವಾಲ್ ಅವರು ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್‌ನ ವಿನೋದಿನಿ ವ್ಯಾಸ್ ಅವರನ್ನು 45,889 ಮತಗಳಿಂದ ಸೋಲಿಸಿದ್ದಾರೆ. ರತ್ಲಾಮ್ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಬಿಜೆಪಿಯ ಪ್ರಹ್ಲಾದ್ ಪಟೇಲ್ ಅವರು ಕಾಂಗ್ರೆಸ್‌ನ ಮಯಾಂಕ್ ಸಿಂಗ್ ಜಾಟ್ ಅವರನ್ನು 8,591 ಮತಗಳಿಂದ ಸೋಲಿಸಿದ್ದಾರೆ.

ಕಟ್ನಿ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಸ್ವತಂತ್ರ ಅಭ್ಯರ್ಥಿ ಪ್ರೀತಿ ಸಂಜೀವ್ ಸೂರಿ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ಜ್ಯೋತಿ ದೀಕ್ಷಿತ್ ಅವರನ್ನು 5,287 ಮತಗಳಿಂದ ಸೋಲಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮೂಲ್ಕಿ-ಮೂಡಬಿದಿರೆ: ಬಿಜೆಪಿ ಪಾಲಾಗಿರುವ ಹಳೆಯ ಕಾಂಗ್ರೆಸ್ ಕೋಟೆ! ಅದಲುಬದಲು ಸಾಧ್ಯವೇ?

ಎರಡನೇ ಹಂತದಲ್ಲಿ ಐದು ಮುನ್ಸಿಪಲ್ ಕಾರ್ಪೊರೇಷನ್‌ಗಳು, 40 ನಗರ ಪಾಲಿಕೆಗಳು ಮತ್ತು 43 ಜಿಲ್ಲೆಗಳ 169 ನಗರ ಸಭೆಗಳಲ್ಲಿ ಮತದಾನ ನಡೆದಿತ್ತು. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನು ಒಂದು ವರ್ಷವಷ್ಟೆ ಇದ್ದು, ಸ್ಥಳೀಯ ಸಂಸ್ಥೆ ಚುಣಾವಣೆಯು ಅದರಕ್ಕೆ ದಿಕ್ಸೂಚಿ ಎನ್ನಲಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...