Homeಕರ್ನಾಟಕಜಾತಿಗೊಂದು ನಿಗಮ ಮಾಡಿದರೆ ಮಿತಿಯೇ ಇರುವುದಿಲ್ಲ - ಸಿದ್ದಲಿಂಗ ಸ್ವಾಮೀಜಿ

ಜಾತಿಗೊಂದು ನಿಗಮ ಮಾಡಿದರೆ ಮಿತಿಯೇ ಇರುವುದಿಲ್ಲ – ಸಿದ್ದಲಿಂಗ ಸ್ವಾಮೀಜಿ

"ಲಿಂಗಾಯತ-ವೀರಶೈವ ಅಭಿವೃದ್ಧಿ ನಿಗಮ ಸ್ಥಾಪಿಸಿರುವ ವಿಷಯ ಮಾಧ್ಯಮಗಳಿಂದ ಗೊತ್ತಾಗಿದೆ. ಇದು ಅಚ್ಚರಿ ಉಂಟು ಮಾಡಿದೆ" ಎಂದು ಹೇಳಿದ್ದಾರೆ

- Advertisement -
- Advertisement -

“ಲಿಂಗಾಯತ-ವೀರಶೈವ ಅಭಿವೃದ್ಧಿ ನಿಗಮ ಮಾಡಿರುವುದು ಆಶ್ಚರ್ಯ ತಂದಿದೆ. ಹೀಗೆ ಜಾತಿಗೊಂದು ನಿಗಮ ಮಾಡುತ್ತಾ ಹೋದರೆ ಮಿತಿಯೇ ಇರುವುದಿಲ್ಲ” ಎಂದು ಸಿದ್ದಗಂಗಾ ಮಠಾಧೀಶ ಸಿದ್ದಲಿಂಗ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಯಡಿಯೂರಪ್ಪನವರು ಮರಾಠರು ಮತ್ತು ಲಿಂಗಾಯತರ ಅಭಿವೃದ್ಧಿಗೆಂದು ಹೊಸ ನಿಗಮವನ್ನು ಸ್ಥಾಪಿಸಲು ಆದೇಶ ಹೊರಡಿಸಿದ್ದರು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದಲಿಂಗ ಸ್ವಾಮೀಜಿ, “ಲಿಂಗಾಯತ-ವೀರಶೈವ ಅಭಿವೃದ್ಧಿ ನಿಗಮ ಸ್ಥಾಪಿಸಿರುವ ವಿಷಯ ಮಾಧ್ಯಮಗಳಿಂದ ಗೊತ್ತಾಗಿದೆ. ಇದು ಅಚ್ಚರಿ ಉಂಟು ಮಾಡಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾಡುಗೊಲ್ಲ ಅಭಿವೃದ್ಧಿ ನಿಗಮದ ಹೆಸರು ಬದಲಿಸಿದ್ದೇಕೆ?; ಸಿಎಂ ಮೇಲೆ ಒತ್ತಡ ತಂದವರು ಯಾರು?

ಎಲ್ಲಾ ಸಮಾಜ ಮತ್ತು ಜಾತಿಗಳಲ್ಲೂ ಆರ್ಥಿಕವಾಗಿ ಹಿಂದುಳಿದವರು ಇದ್ದಾರೆ. ಅಂಥವರ ನೆರವಿಗೆ ಸರ್ಕಾರ ಬರಬೇಕಾಗಿತ್ತು. ಕಷ್ಟದಲ್ಲಿರುವವರಿಗೆ ನೆರವಾಗುವುದಕ್ಕೆ ಒತ್ತುಕೊಟ್ಟರೆ ಒಳ್ಳೆಯದು. ಎಲ್ಲಾ ಸಮಾಜದಲ್ಲೂ ಕಡು ಬಡವರು ಇದ್ದಾರೆ. ಅವರ ಸಹಾಯಕ್ಕೆ ಸರ್ಕಾರ ಬರಬೇಕಾಗಿತ್ತು ಎಂದು ತಿಳಿಸಿದ್ದಾರೆ.

ಈ ಶ್ರೇಣೀಕೃತ ವ್ಯವಸ್ಥೆಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವವರು ಎಲ್ಲಾ ಜಾತಿಗಳಲ್ಲೂ ಇದ್ದಾರೆ. ಆರ್ಥಿಕವಾಗಿ ಕಷ್ಟ ದಲ್ಲಿರುವವರಿಗೆ ಉದ್ಯೋಗದಲ್ಲಿ ಅವಕಾಶ ಕಲ್ಪಿಸುವ ವ್ಯವಸ್ಥೆ ಮಾಡಿದರೆ ಒಳ್ಳೆಯದು. ಆರ್ಥಿಕವಾಗಿ ಬಲಿಷ್ಠವಾದರೆ ಆ ಕುಟುಂಬಗಳು ಮೇಲೆ ಬರುತ್ತವೆ ಎಂದು ಹೇಳಿದ್ದಾರೆ.

ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕೆಲಸ ಮಾಡಬೇಕು, ಮಾಡುತ್ತಿದೆ. ಅದು ಬಿಟ್ಟು ಜಾತಿಗೊಂದು ಅಭಿವೃದ್ಧಿ ನಿಗಮ ಮಾಡುವುದು ಒಳ್ಳೆಯ ಬೆಳೆವಣಿಗೆಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿಗೆ ಈಗ ಎಂಟರ್ ಆಗಿದ್ದೇವೆ, ಸಂಪುಟ ಪುನರ್ ರಚನೆ ಬಗ್ಗೆ ನಮಗೆ ಹೇಳಲ್ಲ- ಸಚಿವ…

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...